ಭಾರತ-ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಆಂಡರ್‌ಸನ್-ತೆಂಡುಲ್ಕರ್ ಟ್ರೋಫಿ ಟೂರ್ನಿಯ ಮೂರನೇ ಪಂದ್ಯವು ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿಂದು ಆರಂಭವಾಗುತ್ತಿದೆ. ಈ ಟೆಸ್ಟ್ ಪಂದ್ಯ ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದಾಗಿದ್ದು, ಸರಣಿಯಲ್ಲಿ ಮುನ್ನಡೆ ಸಾಧಿಸಲು ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ.

05:38 PM (IST) Jul 10
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡವು ಆರಂಭಿಕ ಆಘಾತ ಅನುಭವಿಸಿದೆ. ಮೊದಲ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಇಂಗ್ಲೆಂಡ್ ತಂಡವು 2 ವಿಕೆಟ್ ಕಳೆದುಕೊಂಡು 83 ರನ್ ಗಳಿಸಿದೆ. ಜೋ ರೂಟ್ 24 ಹಾಗೂ ಓಲಿ ಪೋಪ್ 12 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಭಾರತ ಪರ ನಿತೀಶ್ ಕುಮಾರ್ ರೆಡ್ಡಿ ಒಂದೇ ಓವರ್‌ನಲ್ಲಿ ಇಂಗ್ಲೆಂಡ್ ಆರಂಭಿಕರಿಬ್ಬರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
04:49 PM (IST) Jul 10
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯದ ಡ್ರಿಂಕ್ಸ್ ಬ್ರೇಕ್ ಬಳಿಕ ನಿತೀಶ್ ಕುಮಾರ್ ರೆಡ್ಡಿ ಒಂದೇ ಓವರ್‌ನಲ್ಲಿ ಬೆನ್ ಡಕೆಟ್ ಹಾಗೂ ಜಾಕ್ ಕ್ರಾಲಿ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
03:14 PM (IST) Jul 10
ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಜೋಫ್ರಾ ಆರ್ಚರ್ ಇಂಗ್ಲೆಂಡ್ ತಂಡಕ್ಕೆ ಮರಳಿದ್ದಾರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ ಆಡುತ್ತಿದ್ದಾರೆ.
01:17 PM (IST) Jul 10
ನವದೆಹಲಿ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೂ ಮುನ್ನ ಐಸಿಸಿ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ಎಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಶುಭ್‌ಮನ್ ಗಿಲ್ 15 ಸ್ಥಾನ ಜಿಗಿತ ಕಂಡು ಆರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
12:07 PM (IST) Jul 10
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಈ ಪಂದ್ಯವು ಇಂದು ಮಧ್ಯಾಹ್ನ 3.30ರಿಂದ ಅಧಿಕೃತವಾಗಿ ಆರಂಭವಾಗಲಿದ್ದು, ಟಾಸ್ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಎಜ್‌ಬಾಸ್ಟನ್ ಟೆಸ್ಟ್ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ ಮತ್ತೊಂದು ಗೆಲುವಿನ ಕನವರಿಕೆಯಲ್ಲಿದೆ.
12:04 PM (IST) Jul 10
ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಆರು ಭಾರತೀಯ ಆಟಗಾರರು ಮಹತ್ವದ ವೈಯಕ್ತಿಕ ಮೈಲಿಗಲ್ಲುಗಳನ್ನು ತಲುಪುವ ಹಂತದಲ್ಲಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
12:03 PM (IST) Jul 10
ಲೀಡ್ಸ್ ಮತ್ತು ಎಜ್‌ಬಾಸ್ಟನ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದ್ದರೂ, ಲಾರ್ಡ್ಸ್‌ನ ಹಸಿರು ಪಿಚ್‌ನಲ್ಲಿ ಅವರಿಗೆ ಕಠಿಣ ಸವಾಲು ಎದುರಾಗಲಿದೆ. ಜೋಫ್ರಾ ಆರ್ಚರ್ ವಾಪಸಾತಿಯಿಂದ ಇಂಗ್ಲೆಂಡ್ ತಂಡ ಬಲಿಷ್ಠವಾಗಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಪರೀಕ್ಷೆಗೊಳಪಡಲಿದೆ.