ಈಗಾಗಲೇ ಭಾರತ ಪರ ಅತಿವೇಗವಾಗಿ 400 ವಿಕೆಟ್ ಕಬಳಿಸಿದ ಸಾಧನೆ ಮಾಡಿರುವ ರವಿಚಂದ್ರನ್ ಅಶ್ವಿನ್ ಇದೀಗ ಜಹೀರ್ ಖಾನ್ ಹೆಸರಿನಲ್ಲಿರುವ ದಾಖಲೆಯೊಂದನ್ನು ಅಳಿಸಿಹಾಕಲು ಎದುರು ನೋಡುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಅಹಮದಾಬಾದ್(ಮಾ.03): ಉತ್ತಮ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇನ್ನೊಂದು ಮೈಲಿಗಲ್ಲು ತಲುಪಲು ಎದುರು ನೋಡುತ್ತಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಆಟಗಾರರ ಪೈಕಿ ನಾಲ್ಕನೇ ಸ್ಥಾನಕ್ಕೇರಲು ಅಶ್ವಿನ್‌ಗೆ ಇನ್ನು 8 ವಿಕೆಟ್‌ಗಳ ಅಗತ್ಯವಿದೆ. ಇಂಗ್ಲೆಂಡ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿರುವ ತಮಿಳುನಾಡಿನ ಆಫ್ ಸ್ಪಿನ್ನರ್ ಅಶ್ವಿನ್ ಇಂಗ್ಲೆಂಡ್ ವಿರುದ್ಧವೇ ಈ ಮೈಲಿಗಲ್ಲು ಸೃಷ್ಟಿಸಿ ಜಹೀರ್ ಖಾನ್ ಅವರ ದಾಖಲೆ ಹಿಂದಿಕ್ಕುವ ಉತ್ಸಾಹದಲ್ಲಿದ್ದಾರೆ. ಅಶ್ವಿನ್ ಈಗ 603 ವಿಕೆಟ್ ಗಳಿಸಿದ್ದಾರೆ.
undefined
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಭಾರತೀಯ ಬೌಲರ್‌ಗಳಲ್ಲಿ ಜಹೀರ್ ಖಾನ್ 610 ವಿಕೆಟ್ ಸಂಪಾದಿಸಿ 4ನೇ ಸ್ಥಾನದಲ್ಲಿದ್ದಾರೆ. ಮೊದಲ ಮೂರು ಸ್ಥಾನದಲ್ಲಿ ಅನಿಲ್ ಕುಂಬ್ಳೆ(956), ಹರ್ಭಜನ್ ಸಿಂಗ್(711) ಮತ್ತು ಕಪಿಲ್ ದೇವ್(687) ಮೊದಲ ಮೂರು ಸ್ಥಾನಗಳಲ್ಲಿ ಇದ್ದಾರೆ.
ಧೋನಿ, ಪಾಂಟಿಂಗ್ ದಾಖಲೆ ಪುಡಿ ಮಾಡಲು ಸಜ್ಜಾದ ವಿರಾಟ್ ಕೊಹ್ಲಿ!
ಇಂಗ್ಲೆಂಡ್ ವಿರುದ್ದ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ವೇಳೆ ಅಶ್ವಿನ್ ವಿಶ್ವಕ್ರಿಕೆಟ್‌ನಲ್ಲಿ ಮುತ್ತಯ್ಯ ಮುರುಳೀಧರನ್ ಬಳಿಕ ಅತಿವೇಗವಾಗಿ 400+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರು. ಅಶ್ವಿನ್ 77 ಟೆಸ್ಟ್ ಪಂದ್ಯಗಳಲ್ಲಿ 400 ವಿಕೆಟ್ ಕಬಳಿಸಿದ್ದರೆ, ಮುರುಳಿ ಕೇವಲ 72 ಪಂದ್ಯಗಳಲ್ಲಿ ನಾನೂರು ಬಲಿ ಪಡೆದಿದ್ದಾರೆ.