ಜಸ್ಪ್ರೀತ್ ಮನವಿಗೆ ಸ್ಪಂದಿಸಿದ ಬಿಸಿಸಿಐ; 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅಲಭ್ಯ!

Published : Feb 27, 2021, 02:37 PM ISTUpdated : Feb 27, 2021, 02:58 PM IST
ಜಸ್ಪ್ರೀತ್ ಮನವಿಗೆ ಸ್ಪಂದಿಸಿದ ಬಿಸಿಸಿಐ; 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಅಲಭ್ಯ!

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಇದೀಗ ಅಂತಿಮ ಟೆಸ್ಟ್ ಪಂದ್ಯದತ್ತ ಚಿತ್ತ ನೆಟ್ಟಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ. 

ಅಹಮ್ಮದಾಬಾದ್(ಫೆ.27):  ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಇಂಗ್ಲೆಂಡ್ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಕುರಿತು ಬುಮ್ರಾ, ಬಿಸಿಸಿಐಗೆ ಮನವಿ ಮಾಡಿಕೊಂಡಿದ್ದರು. ವೈಯುಕ್ತಿಕ ಕಾರಣಗಳಿಂದ 4ನೇ ಟೆಸ್ಟ್ ಪಂದ್ಯದಿಂದ ತನ್ನನ್ನು ಕೈಬಿಡುವಂತೆ ಮನವಿ ಮಾಡಿದ್ದರು.

ಬ್ರಿಟನ್‌ನ ಮಾಧ್ಯಮಗಳಿಂದ ರೂಟ್‌ ಪಡೆಗೆ ಹಿಗ್ಗಾಮುಗ್ಗಾ ಟೀಕೆ..!

ಬುಮ್ರಾ ಮನವಿಗೆ ಸ್ವಂದಿಸಿದ ಬಿಸಿಸಿಐ, 4ನೇ ಟೆಸ್ಟ್ ಪಂದ್ಯದಿಂದ ಬುಮ್ರಾಗೆ ವಿಶ್ರಾಂತಿ ನೀಡಿದೆ. ಬುಮ್ರಾ ವೈಯುಕ್ತಿಕ ಕಾರಣದಿಂದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಿಂದ ತನ್ನನ್ನು ಕೈಬಿಡುವಂತೆ ಮನವಿ ಮಾಡಿಕೊಂಡಿದ್ದರು. ಬುಮ್ರಾ ಮನವಿ ಪುರಸ್ಕರಿಸಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

 

ಬುಮ್ರಾ ಕೈಬಿಟ್ಟ ಕಾರಣ ತಂಡಕ್ಕೆ ಯಾರನ್ನು ಸೇರಿಸಿಕೊಂಡಿಲ್ಲ. ತಂಡದಲ್ಲಿ ಈಗಾಗಲೇ ವೇಗಗಳ ಲಭ್ಯತೆ ಇರುವುದರಿಂದ ಹೊಸದಾಗಿ ಯಾರನ್ನು ಸೇರಿಸಿಕೊಂಡಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. 4ನೇ ಟೆಸ್ಟ್ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣ ಅಹಮ್ಮದಾಬಾದ್‌ನಲ್ಲಿ ನಡೆಯಲಿದೆ. ಮಾರ್ಚ್ 4 ರಿಂದ ಮಾರ್ಚ್ 8 ರ ವರೆಗೆ ಈ ಪಂದ್ಯ ನಡೆಯಲಿದೆ.

ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಬಮನ್ ಗಿಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ವೃದ್ಧಿಮಾನ್ ಸಾಹ, ಆರ್ ಅಶ್ವಿನ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ