
ಅಹಮ್ಮದಾಬಾದ್(ಫೆ.22): ಇಂಗ್ಲೆಂಡ್ ವಿರುದ್ಧ ಅಂತಿಮ ಎರಡು ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ವೇಗಿ ಉಮೇಶ್ ಯಾದವ್‌ಗೆ ಸ್ಥಾನ ನೀಡಲಾಗಿತ್ತು. ಇದರ ಜೊತೆಗೆ ಒಂದು ಕಂಡೀಷನ್ ಕೂಡ ಹಾಕಲಾಗಿತ್ತು.ಉಮೇಶ್ ಯಾದವ್ ಫಿಟ್ನೆಸ್ ಪರೀಕ್ಷೆ ಪಾಸ್ ಆದರೆ ಮಾತ್ರ ತಂಡ ಸೇರಿಕೊಳ್ಳಲು ಸಾಧ್ಯ ಎಂದಿತ್ತು. ಇದೀಗ ಉಮೇಶ್ ಯಾದವ್ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ದದ ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ..!.
ಉಮೇಶ್ ಯಾದವ್ ಇದೀಗ ಅಂತಿಮ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ. ಉಮೇಶ್ ಸೇರ್ಪಡೆಯಿಂದ ಮತ್ತೊರ್ವ ವೇಗಿ ಶಾರ್ದೂಲ್ ಠಾಕೂರ್ ಅವರನ್ನು ಬಿಸಿಸಿಐ ತಂಡದಿಂದ ಕೈಬಿಟ್ಟಿದೆ. ಶಾರ್ದೂಲ್ ಠಾಕೂರ್‌ಗೆ ವಿಜಯ್ ಹಜಾರೆ ಟೂರ್ನಿ ಆಡಲು ಬಿಸಿಸಿಐ ಅವಕಾಶ ನೀಡಿದೆ.
ಅಂತಿಮ 2 ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಬ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ವೃದ್ಧಿಮಾನ್ ಸಾಹ, ಆರ್ ಅಶ್ವಿನ್, ಕುಲ್ದೀಪ್ ಯಾದವ್ , ಅಕ್ಸರ್ ಪಟೇಲ್, ವಾಶಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.