2ನೇ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಮತ್ತೊಂದು ಆಘಾತ; ಗಾಯದ ಮೇಲೆ ಬರೆ!

Published : Mar 25, 2021, 10:56 PM IST
2ನೇ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಮತ್ತೊಂದು ಆಘಾತ; ಗಾಯದ ಮೇಲೆ ಬರೆ!

ಸಾರಾಂಶ

ಟೀಂ ಇಂಡಿಯಾ ವಿರುದ್ಧದ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿರುವ ಇಂಗ್ಲೆಂಡ್ 2ನೇ ಹಾಗೂ ಮಹತ್ವದ ಪಂದ್ಯದಲ್ಲಿ ತಿರುಗೇಟು ನೀಡಲು ಸಜ್ಜಾಗಿದೆ. ಆದರೆ ಮೊದಲ ಸೋಲಿನಿಂದ ಜರ್ಝರಿತವಾಗಿರುವ ಇಂಗ್ಲೆಂಡ್ ತಂಡಕ್ಕೆ ಇದೀಗ ತೀವ್ರ ಹಿನ್ನಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

ಪುಣೆ(ಮಾ.25): ಇಂಗ್ಲೆಂಡ್ ತಂಡಕ್ಕೆ ಏಕದಿನ ಸರಣಿಯಲ್ಲಿ ಆರಂಭದಲ್ಲೇ ಹಿನ್ನಡೆಯಾಗಿದೆ. ಮೊದಲ ಪಂದ್ಯ ಸೋತಿರುವ ಇಂಗ್ಲೆಂಡ್ ತಂಡಕ್ಕೆ ಇದೀಗ ಇಂಜುರಿ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಕೈಬೆರಳಿನ ಗಾಯದಿಂದ ಬಳಲುತ್ತಿರುವ ನಾಯಕ ಇಯಾನ್ ಮಾರ್ಗನ್ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.

ಕೈಬೆರಳಿನ ಗಾಯ ಹೆಚ್ಚಾಗಿರುವ ಕಾರಣ ಮಾರ್ಗನ್‌ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಮುಂದಿನ 2 ಏಕದಿನ ಪಂದ್ಯದಲ್ಲಿ ಜೋಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನೆಡಸಲಿದ್ದಾರೆ. ಮಾರ್ಗನ್ ತಂಡದಿಂದ ಹೊರಬಿದ್ದಿರುವ ಕಾರಣ ಲಿಯಾಮ್ ಲಿವಿಂಗ್‌ಸ್ಟೋನ್ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ.

2ನೇ ಏಕದಿನ ಪಂದ್ಯಕ್ಕೆ ಅಭ್ಯಾಸ ಆರಂಭಿಸಿದ ವೇಳೆ ಇಯಾನ್ ಮಾರ್ಗನ್ ಫಿಟ್ ಇಲ್ಲದಿರುವುದು ಗಮನಕ್ಕೆ ಬಂದಿದೆ. ಇದೇ ವೇಳೆ ಮಾರ್ಗನ್ ಹೆಬ್ಬೆರಳಿನ ಗಾಯ ಕೂಡ ಉಲ್ಬಣಗೊಂಡಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಐಪಿಎಲ್ ಟೂರ್ನಿಗೆ ವೇಳಾಪಟ್ಟಿ ಫಿಕ್ಸ್; ಫ್ರಾಂಚೈಸಿಗಳಿಗೆ ಬಿಸಿಸಿಐ ಮಹತ್ವದ ಅಪ್‌ಡೇಟ್ಸ್‌! ಬೆಂಗಳೂರಲ್ಲಿ ಉದ್ಘಾಟನಾ ಮ್ಯಾಚ್?
ಮೆಸ್ಸಿಯ ದೆಹಲಿ ಡೈರಿ: ಮುಂಬರುವ ಟಿ20 ವಿಶ್ವಕಪ್‌ಗೆ ಆಹ್ವಾನಿಸಿದ ಐಸಿಸಿ ಅಧ್ಯಕ್ಷ ಜಯ್ ಶಾ!