IND vs ENG: ಟೀಂ ಇಂಡಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಇಂಗ್ಲೆಂಡ್!

Published : Mar 14, 2021, 09:10 PM IST
IND vs ENG: ಟೀಂ ಇಂಡಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಇಂಗ್ಲೆಂಡ್!

ಸಾರಾಂಶ

ಮೊದಲ ಟಿ20 ಪಂದ್ಯದಲ್ಲಿ ಅಬ್ಬರಿಸಿದ ಇಂಗ್ಲೆಂಡ್ ಇದೀಗ 2ನೇ ಟಿ20 ಪಂದ್ಯದಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಬೃಹತ್ ಮೊತ್ತ ಪೇರಿಸುವ ವಿಶ್ವಾಸದಲ್ಲಿದ್ದ ಇಂಗ್ಲೆಂಡ್‌ಗೆ ಭಾರತೀಯ ಬೌಲರ್ ಶಾಕ್ ನೀಡಿದ್ದಾರೆ. 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಹೈಲೈಟ್ಸ್ ಇಲ್ಲಿದೆ

ಅಹಮ್ಮದಾಬಾದ್(ಮಾ.14);  ಜೇಸನ್ ರಾಯ್, ಡೇವಿಡ್ ಮಲನ್, ನಾಯಕ ಇಯಾನ ಮಾರ್ಗನ್ ಸೇರಿದಂತೆ ಇಂಗ್ಲೆಂಡ್ ಪ್ರಮುಖ ಬ್ಯಾಟ್ಸ್‌ಮನ್‌ಗಳ ಸಮಯೋಚಿತ ಬ್ಯಾಟಿಂಗ್‌ನಿಂದ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 164 ರನ್ ಸಿಡಿಸಿದೆ.

ಟೆಸ್ಟ್ ಅಬ್ಬರಕ್ಕೆ ಬ್ರೇಕ್; ಟಿ20ಯಲ್ಲಿ ಟೀಂ ಇಂಡಿಯಾಗೆ ಮೊದಲ ಆಘಾತ

ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ಬೌಲಿಂಗ್ ದಾಳಿಯಿಂದ ಇಂಗ್ಲೆಂಡ್ ಬೃಹತ್ ಮೊತ್ತ ಕನಸು ಪುಡಿಯಾಗಿದೆ. ಜೇಸನ್ ರಾಯ್ 46 ರನ್ ಸಿಡಿಸಿದರೆ, ಡೇವಿಡ್ ಮಿಲನ್ 24, ಜಾನಿ ಬೈರ್‌ಸ್ಟೋ 20, ನಾಯಕ ಇಯಾನ್ ಮಾರ್ಗನ್ 28, ಬೆನ್ ಸ್ಟೋಕ್ಸ್ 24 ರನ್ ಕಾಣಿಕೆ ನೀಡಿದರು.

ಅಂತಿಮವಾಗಿ ಇಂಗ್ಲೆಂಡ್ 6 ವಿಕೆಟ್ ಕಳೆದುಕೊಂಡು 164 ರನ್ ಸಿಡಿಸಿತು. ಸುಂದರ್ ಹಾಗೂ ಶಾರ್ದೂಲ್ ತಲಾ 2 ವಿಕೆಟ್ ಕಬಳಿಸಿದರು. ಭುವನೇಶ್ವರ್ ಕುಮಾರ್ ಹಾಗೂ ಯಜುವೇಂದ್ರ ಚಹಾಲ್ ತಲಾ 1 ವಿಕೆಟ್ ಕಬಳಿಸಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?