ಒಪನಿಂಗ್ ಬ್ಯಾಟಿಂಗ್:ವಿರಾಟ್ ಕೊಹ್ಲಿಗೆ ಅಭಿಮಾನಿಗಳ ಮಹತ್ವದ ಸಲಹೆ!

Published : Mar 21, 2021, 02:43 PM ISTUpdated : Mar 21, 2021, 06:04 PM IST
ಒಪನಿಂಗ್ ಬ್ಯಾಟಿಂಗ್:ವಿರಾಟ್ ಕೊಹ್ಲಿಗೆ ಅಭಿಮಾನಿಗಳ ಮಹತ್ವದ ಸಲಹೆ!

ಸಾರಾಂಶ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯಬೇಕು ಅನ್ನೋ ಕೂಗು ಜೋರಾಗಿದೆ. ಇದಕ್ಕೆ ಕಾರಣ ಇಂಗ್ಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯ. ಆರಂಭಿಕನಾಗಿ ಕಣಕ್ಕಿಳಿದು ಕೊಹ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಹೀಗಾಗಿ ಟೀಂ ಇಂಡಿಯಾ 3-2 ಅಂತರದಲ್ಲಿ ಸರಣಿ ಗೆದ್ದು ಸಂಭ್ರಮಿಸಿತು. ಇದೀಗ ಕ್ರಿಕೆಟ್ ದಿಗ್ಗಜರು ಸೇರಿದಂತೆ ಅಭಿಮಾನಿಗಳು ಕೊಹ್ಲಿಗೆ ಮಹತ್ವದ ಸಲಹೆ ನೀಡಿದ್ದಾರೆ.

ಅಹಮ್ಮದಾಬಾದ್(ಮಾ.21): ಇಂಗ್ಲೆಂಡ್ ವಿರುದ್ದದ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಕೆಲ ಬದಲಾವಣೆ ಮಾಡಿದ್ದರು. ಹೀಗಾಗಿ ಆರಂಭಿಕನಾಗಿ ಕಣಕ್ಕಿಳಿದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಟೀಂ ಇಂಡಿಯಾದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದಿಂದ  ಪಂದ್ಯ ಮಾತ್ರವಲ್ಲ ಸರಣಿ ಗೆಲುವು ದಾಖಲಿಸಿದೆ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಆರಂಭಿಕನಾಗಿ ಕಣಕ್ಕಿಳಿಯಬೇಕು ಅನ್ನೋ ಒತ್ತಾಯ ಹೆಚ್ಚಾಗುತ್ತಿದೆ.

 

ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ: 3-2 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡ ಕೊಹ್ಲಿ ಪಡೆ.

ವಿರಾಟ್ ಕೊಹ್ಲಿ ಕೂಡ ಆರಂಭಿಕನಾಗಿ ಕಣಕ್ಕಿಳಿಯುವ ಕುರಿತು ಒಲವು ತೋರಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಆರಂಭಿಕನಾಗಿ ಕಣಕ್ಕಿಳಯಲಿದ್ದೇನೆ ಎಂದಿದ್ದಾರೆ. ಇಷ್ಟೇ ಅಲ್ಲ ವಿಶ್ವದ ಬೆಸ್ಟ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಲು ಉತ್ಸುಕನಾಗಿರುವುದಾಗಿ ಹೇಳಿದ್ದಾರೆ. 

ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯುವುದು ಸೂಕ್ತ ಎಂದಿದ್ದಾರೆ. ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯುವುದರಿಂದ ಟೀಂ ಇಂಡಿಯಾಗೆ ಲಾಭ ಹೆಚ್ಚು. ಆದರೆ ಇಂಗ್ಲೆಂಡ್ ತಂಡ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಹೇಳಿದ್ದರು. ಇದೀಗ ಅಭಿಮಾನಿಗಳ ಕೂಡ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯುವುದೇ ಸೂಕ್ತ ಎಂದಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?