
ಲಂಡನ್(ಆ.18): ನಮ್ಮ ತಂಡದ ಒಬ್ಬ ಆಟಗಾರನನ್ನು ಕೆಣಕಿದರೆ ಇಡೀ ತಂಡವನ್ನು ಕೆಣಕಿದಂತೆ ಎಂದು ಭಾರತದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಎದುರಾಳಿ ಇಂಗ್ಲೆಂಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.
2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಮಾತನಾಡಿದ ರಾಹುಲ್, ಎದುರಾಳಿ ಆಟಗಾರರು ಯಾರಾದರೂ ನಮ್ಮ ಆಟಗಾರನನ್ನು ಕೆಣಕಿದರೆ ನಾವು ಉಳಿದ 10 ಮಂದಿ ಕೂಡಾ ಅವರ ವಿರುದ್ಧ ತಿರುಗಿ ಬೀಳುತ್ತೇವೆ. ಅಂತಹ ವಾತಾವರಣ ಮತ್ತು ತಂಡವನ್ನು ನಾವು ಹೊಂದಿದ್ದೇವೆ’ ಎಂದರು. ಭಾರತ 151 ರನ್‌ಗಳ ರೋಚಕ ಗೆಲುವು ಸಾಧಿಸಿದ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ಆಟಗಾರರ ನಡುವೆ ಹಲವು ಬಾರಿ ಮಾತಿನ ಚಕಮಕಿ ನಡೆದಿತ್ತು.
ಕೊಂಚ ತಡವಾದರೂ, ಸರಿಯಾಗಿಯೇ ಆಯ್ತು; ಲಾರ್ಡ್ಸ್ ಗೆಲುವನ್ನು ಬಣ್ಣಿಸಿದ ರೋಹಿತ್ ಶರ್ಮಾ
ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ಭಾರತ ತಂಡವನ್ನು ಆಹ್ವಾನಿಸಿತ್ತು. ಕೆ.ಎಲ್. ರಾಹುಲ್ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 364 ರನ್ ಕಲೆಹಾಕಿತ್ತು. ರಾಹುಲ್ 250 ಎಸೆತಗಳಲ್ಲಿ 129 ರನ್ ಚಚ್ಚುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕೆ.ಎಲ್. ರಾಹುಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.