Ind vs Eng ಲೀಡ್ಸ್‌ ಟೆಸ್ಟ್: ಸಂಕಷ್ಟದ ಸುಳಿಯಲ್ಲಿ ಟೀಂ ಇಂಡಿಯಾ..!

Published : Aug 25, 2021, 06:00 PM IST
Ind vs Eng ಲೀಡ್ಸ್‌ ಟೆಸ್ಟ್: ಸಂಕಷ್ಟದ ಸುಳಿಯಲ್ಲಿ ಟೀಂ ಇಂಡಿಯಾ..!

ಸಾರಾಂಶ

* ಲೀಡ್ಸ್‌ ಟೆಸ್ಟ್‌ನಲ್ಲಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿ ಟೀಂ ಇಂಡಿಯಾ * ಮೊದಲ ದಿನದಾಟದ ಮೊದಲ ಸೆಷನ್‌ನಲ್ಲೇ 4 ವಿಕೆಟ್ ಕಳೆದುಕೊಂಡ ಭಾರತ * 3 ವಿಕೆಟ್ ಕಬಳಿಸಿ ಮಿಂಚಿದ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ 

ಲೀಡ್ಸ್‌(ಆ.25): ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್‌ನ ಮೊದಲ ದಿನದಾಟದ ಮೊದಲ ಸೆಷನ್‌ನಲ್ಲೇ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಲಂಚ್‌ ಬ್ರೇಕ್ ವೇಳೆಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು ಕೇವಲ 56 ರನ್‌ ಗಳಿಸಿದ್ದು, ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದೆ. 

ಹೌದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಗೆ ಅನುಭವಿ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ಇನ್ನಿಲ್ಲದಂತೆ ಕಾಡಿದ್ದಾರೆ. ಅಗ್ರಕ್ರಮಾಂಕದ ಮೂವರು ಬ್ಯಾಟ್ಸ್‌ಮನ್‌ಗಳಾದ ಕೆ.ಎಲ್‌ ರಾಹುಲ್‌(0). ಚೇತೇಶ್ವರ್ ಪೂಜಾರ(1) ಹಾಗೂ ವಿರಾಟ್ ಕೊಹ್ಲಿ(7) ಅವರನ್ನು ಒಂದಂಕಿ ಮೊತ್ತಕ್ಕೆ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ 21 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

Ind vs Eng ಸಂಕಷ್ಟದಲ್ಲಿ ಟೀಂ ಇಂಡಿಯಾ; 3ನೇ ವಿಕೆಟ್ ಪತನ..!

ಇನ್ನು ನಾಲ್ಕನೇ ವಿಕೆಟ್‌ಗೆ ರೋಹಿತ್ ಶರ್ಮಾ ಹಾಗೂ ಅಜಿಂಕ್ಯ ರಹಾನೆ ಜೋಡಿ ನಾಲ್ಕನೇ ವಿಕೆಟ್‌ಗೆ 35 ರನ್‌ಗಳ ಜತೆಯಾಟ ನಿಭಾಯಿಸಿದರು. ನೆಲಕಚ್ಚಿ ಆಡುತ್ತಿದ್ದ ರಹಾನೆ(54 ಎಸೆತ, 18 ರನ್)ಯನ್ನು ಪೆವಿಲಿಯನ್ನಿಗಟ್ಟುವಲ್ಲಿ ಓಲಿ ರಾಬಿನ್‌ಸನ್ ಯಶಸ್ವಿಯಾಗಿದ್ದಾರೆ. ಸದ್ಯ ರೋಹಿತ್ ಶರ್ಮಾ 15 ರನ್‌ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೂರ್ಯಕುಮಾರ್ ಯಾದವ್ ಹೆಸರಲ್ಲಿದ್ದ ಅಪರೂಪದ ಟಿ20 ವಿಶ್ವದಾಖಲೆ ಮುರಿದ ಇಶಾನ್ ಕಿಶನ್..!
IPL 2027 ಮಹೇಲಾ ಜಯವರ್ಧನೆ ಸ್ಥಾನಕ್ಕೆ ಐವರ ಹೆಸರು ಶಾರ್ಟ್‌ಲಿಸ್ಟ್..! ಯಾರಾಗ್ತಾರೆ ಮುಂಬೈ ಇಂಡಿಯನ್ಸ್ ಮುಂದಿನ ಹೆಡ್ ಕೋಚ್?