
ಮ್ಯಾಂಚೆಸ್ಟರ್(ಸೆ.09): ಓವಲ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 157 ರನ್‌ಗಳ ಗೆಲುವು ದಾಖಲಿಸಿ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಪಾಲಿಗೆ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
ಹೌದು, ಇಂಗ್ಲೆಂಡ್ ವಿರುದ್ದದ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ ಸಂಪೂರ್ಣ ಫಿಟ್ ಅಗಿದ್ದು, ಸೆಪ್ಟೆಂಬರ್ 10ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ದದ 5ನೇ ಹಾಗೂ ಕೊನೆಯ ಟೆಸ್ಟ್‌ಗೆ ಆಯ್ಕೆಗೆ ಲಭ್ಯರಿದ್ದಾರೆ. ಶಮಿ ಈಗಾಗಲೇ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಕೊನೆಯ ಟೆಸ್ಟ್ ಪಂದ್ಯದಲ್ಲಿ ಶಮಿ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
ಪೀಪಿ ಟ್ರೋಲ್: ಕೊಹ್ಲಿ ಪರ ಬ್ಯಾಟ್ ಬೀಸಿದ ಇಂಗ್ಲೆಂಡ್ ಮಾಜಿ ನಾಯಕ ವಾನ್..!
ಇನ್ನು, ಓವಲ್ ಟೆಸ್ಟ್ ಪಂದ್ಯದಲ್ಲಿ ಗಾಯಗೊಂಡು ಫೀಲ್ಡಿಂಗ್‌ನಿಂದ ಹೊರಗುಳಿದಿದ್ದ ಬ್ಯಾಟ್ಸ್‌ಮನ್‌ಗಳಾದ ಚೇತೇಶ್ವರ್ ಪೂಜಾರ ಹಾಗೂ ರೋಹಿತ್ ಶರ್ಮಾ ಅವರ ಫಿಟ್ನೆಸ್ ಮೇಲೆ ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ಕಣ್ಣಿಟ್ಟಿದ್ದಾರೆ. ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ಪೈಕಿ ರೋಹಿತ್ ಶರ್ಮಾ ಚೇತರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಹಿಟ್‌ಮ್ಯಾನ್ ಕೊನೆಯ ಟೆಸ್ಟ್ ಪಂದ್ಯ ಆಡುವ ಸಾಧ್ಯತೆ ಹೆಚ್ಚಿದೆ. ಒಂದೊಮ್ಮೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದರೆ ಆರಂಭಿಕನಾಗಿ ಮಯಾಂಕ್ ಅಗರ್‌ವಾಲ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಚೇತೇಶ್ವರ್ ಪೂಜಾರ ಆಡದಿದ್ದರೆ ಸೂರ್ಯಕುಮಾರ್ ಯಾದವ್ ಅಥವಾ ಹನುಮ ವಿಹಾರಿ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.