
ಪುಣೆ(ಮಾ.26): ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಾ 336 ರನ್ ಸಿಡಿಸಿದೆ. ಈ ಬೃಹತ್ ಮೊತ್ತದ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಸೆಂಚುರಿ ಶ್ರಮವಿದೆ. ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಡ್ರಾಪ್ ಆಗಿದ್ದ ಕೆಎಲ್ ರಾಹುಲ್ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಆದರೆ ಇದೀಗ ಅದೇ ಟೀಕಾಕಾರರು ರಾಹುಲ್‌ಗೆ ಸಲಾಂ ಹೇಳಿದ್ದಾರೆ.
ಕನ್ನಡಿಗ ಕೆ.ಎಲ್. ರಾಹುಲ್ ಕೆಚ್ಚೆದೆಯ ಶತಕ
114 ಎಸೆತ ಎದುರಿಸಿದ ಕೆಎಲ್ ರಾಹುಲ್ 108 ರನ್ ಸಿಡಿಸಿದರು. ಟೀಂ ಇಂಡಿಯಾದ ಕಳೆದ ಎರಡು ಶತಕಗಳೂ ಮೂಡಿಬಂದಿರುವುದು ಕೆಎಲ್ ರಾಹುಲ್ ಅವರಿಂದಲೇ ಅನ್ನೋದು ಮತ್ತೊಂದು ವಿಶೇಷ. ರಾಹುಲ್ ದಿಟ್ಟ ಹೋರಾಟಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು, ಸೇರಿದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಹುಲ್, ಪಂತ್ ಅಬ್ಬರ; ಇಂಗ್ಲೆಂಡ್‌ಗೆ ಕಠಿಣ ಗುರಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.