IND vs NZ: 3ನೇ ODI ರದ್ದಾದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ದೊಡ್ಡ ಟ್ವಿಸ್ಟ್; ಕನ್ನಡಿಗ ಸೇರಿ ನಾಲ್ವರು ಸರಣಿಯಿಂದ ಔಟ್‌

Published : Nov 10, 2026, 04:30 PM IST
IND vs NZ 4th ODI

ಸಾರಾಂಶ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ನಾಯಕ ಶುಭಮನ್ ಗಿಲ್ ಸೇರಿ ನಾಲ್ವರನ್ನು ಕೈಬಿಡಲಾಗಿದ್ದು, ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಲಿದ್ದಾರೆ.

ಕೀವಿಸ್‌ ವಿರುದ್ಧದ ಮೊದಲೆರಡು ಪಂದ್ಯಗಳಿಗೂ ಮಳೆ ಅಡ್ಡಿಪಡಿಸಿತು. ಆದರೆ ಈ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾ ವಿಜಯಶಾಲಿ ಆಯಿತು. 3ನೇ ಪಂದ್ಯದಲ್ಲಿ, ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆದರೆ ನಂತರ ಹ್ಯಾಮಿಲ್ಟನ್‌ನಲ್ಲಿ ವರುಣಾರ್ಭಟ ಹೆಚ್ಚಿದ ಕಾರಣ ಮ್ಯಾಚ್‌ ರದ್ದಾಯಿತು. ಕೀವಿಸ್‌ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆಯಲ್ಲಿದೆ. ಮೂರನೇ ಪಂದ್ಯ ರದ್ದಾದ ಕಾರಣ ಟೀಂ ಇಂಡಿಯಾ ಸರಣಿ ಕಳೆದುಕೊಳ್ಳುವುದಿಲ್ಲ ಎಂಬುದು ಖಚಿತ. ಆದರೆ ನಾಲ್ಕನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಈ ಕುರಿತು ಕಂಪ್ಲೀಟ್‌ ಸ್ಟೋರಿ ಇಲ್ಲಿದೆ.

4 ಆಟಗಾರರು ಔಟ್!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಏಕದಿನ ಪಂದ್ಯ ನ.13, ಶುಕ್ರವಾರದಂದು ಮೌಂಟ್ ಮೌಂಗನುಯಿಯಲ್ಲಿ ನಡೆಯಲಿದೆ, ಆದರೆ ಈ ಪಂದ್ಯಕ್ಕೂ ಮುಂಚೆಯೇ, ನಾಯಕ ಶುಭಮನ್ ಗಿಲ್ ಸೇರಿ ನಾಲ್ವರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಗಿದ್ದು, ಮೂವರು ಹೊಸ ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ನಾಲ್ಕನೇ ಮತ್ತು ಐದನೇ ಏಕದಿನ ಪಂದ್ಯಗಳಿಗೆ ನಾಯಕ ಶುಭಮನ್ ಗಿಲ್, ಕೆಎಲ್ ರಾಹುಲ್, ಕುಲದೀಪ್ ಯಾದವ್ ಮತ್ತು ಅನ್ಶುಲ್ ಕಾಂಬೋಜ್‌ರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಗಿದ್ದು, ತಿಲಕ್ ವರ್ಮಾ, ಕುಮಾರ್ ಕುಶಾಗ್ರ ಮತ್ತು ಯಶ್ ಠಾಕೂರ್ ಅವರನ್ನು ಟೀಮ್ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ.

ಟೆಸ್ಟ್‌ ಸರಣಿಗಾಗಿ ಮೂವರ ಬದಲಾವಣೆ!

ಟೆಸ್ಟ್ ಸರಣಿಗೆ ಸಿದ್ಧರಾಗಲು ಗಿಲ್, ರಾಹುಲ್, ಕುಲ್ದೀಪ್ ಮತ್ತು ಅನ್ಶುಲ್ ಕಾಂಬೋಜ್ ಅವರನ್ನು ಕೊನೆಯ ಎರಡು ಏಕದಿನ ಪಂದ್ಯಗಳಿಂದ ಹೊರಗಿಡಲಾಗಿದೆ. ಕೊನೆಯ ಏಕದಿನ ಪಂದ್ಯ ಮತ್ತು ಮೊದಲ ಟೆಸ್ಟ್ ನಡುವೆ ಬಹಳ ಕಡಿಮೆ ಅಂತರವಿರುವುದರಿಂದ, ಈ ನಾಲ್ವರು ಆಟಗಾರರು ಕೊನೆಯ ಎರಡು ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಶ್ರೇಯಸ್‌ಗೆ ಕ್ಯಾಪ್ಟೆನ್ಸಿ!

ನಾಲ್ಕನೇ ಮತ್ತು ಐದನೇ ಏಕದಿನ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಅವರಿಗೆ ಟೀಮ್ ಇಂಡಿಯಾ ನಾಯಕತ್ವ ನೀಡಲಾಗಿದೆ. ವಿಕೆಟ್ ಕೀಪರ್ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ತಂಡಕ್ಕೆ ಆಯ್ಕೆಯಾಗಲಿದ್ದು, ರೋಹಿತ್ ಜೊತೆ ಆರಂಭಿಕರಾಗಿ ಆಡಲಿದ್ದಾರೆ. ಅಲ್ಲದೆ, ಮಧ್ಯಮ ಕ್ರಮಾಂಕದಲ್ಲಿ ರಿತುರಾಜ್ ಗಾಯಕ್ವಾಡ್ ಅವರಿಗೆ ಅವಕಾಶ ಸಿಗಬಹುದು. ಕಾಂಬೋಜ್ ಬದಲಿಗೆ ಮೊಹಮ್ಮದ್ ಸಿರಾಜ್ ತಂಡಕ್ಕೆ ಆಯ್ಕೆಯಾಗಬಹುದು ಎನ್ನುವುದನ್ನು ಕ್ರಿಕೆಟ್‌ ವಲಯದಲ್ಲಿ ಅಂದಾಜಿಸಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20, ಏಕದಿನ ಮತ್ತು ಟೆಸ್ಟ್ ಸೇರಿದಂತೆ 12 ಪಂದ್ಯಗಳಿಗೆ ಕುಲ್ದೀಪ್ ಯಾದವ್ ಅವರನ್ನು ಟೀಮ್ ಇಂಡಿಯಾದಲ್ಲಿ ಆಯ್ಕೆ ಮಾಡಲಾಗಿದೆ, ಆದರೆ ಕುಲ್ದೀಪ್ ಅವರಿಗೆ ಇನ್ನೂ ಆಡುವ ಹನ್ನೊಂದರಲ್ಲಿ ಅವಕಾಶ ಸಿಕ್ಕಿಲ್ಲ. ನ್ಯೂಜಿಲೆಂಡ್‌ನ ಪಿಚ್‌ಗಳನ್ನು ಪರಿಗಣಿಸಿದರೆ, 2-ಟೆಸ್ಟ್ ಸರಣಿಯಲ್ಲೂ ಕುಲ್ದೀಪ್‌ಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ.

ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ನಮನ್ ಧೀರ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ಕುಮಾರ್ ಕುಶಾಗ್ರಾ, ಆಕಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ಥಕ್ಯುರ್ ಸಿರಾಜ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಪಿಎಲ್‌ನಲ್ಲಿ ಭಾರಿ ಬದಲಾವಣೆ, 2027ರ ಟೂರ್ನಿಗೆ ಇಬ್ಬರು ಹೊಸ ಅತಿಥಿಗಳಿಗೆ ಚಾನ್ಸ್
ಐಪಿಎಲ್ 2027ಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ನಲ್ಲಿ ಮೇಜರ್ ಸರ್ಜರಿ? ಪಾಂಡ್ಯ ಸೇರಿ ಈ ನಾಲ್ವರ ಟ್ರೇಡ್/ ರಿಲೀಸ್ ಫಿಕ್ಸ್..!