ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ. ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಕುರಿತಾದ ವಿವರ ಇಲ್ಲಿದೆ ನೋಡಿ..
ಹ್ಯಾಮಿಲ್ಟನ್(ಜ.29): ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ಈ ಪಂದ್ಯವನ್ನು ಜಯಿಸಿ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದರೆ, ಕಿವೀಸ್ ತಿರುಗೇಟು ನೀಡಲು ರೆಡಿಯಾಗಿದ್ದಾರೆ.
3rd T20I. New Zealand win the toss and elect to field https://t.co/7O8uUMMnPg
— BCCI (@BCCI)ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಟಿಕ್ನೆರ್ ಬದಲಿಗೆ ಸ್ಕಾಟ್ ಕುಗ್ಲಿಜಿನ್ ತಂಡ ಕೂಡಿಕೊಂಡಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 2-0 ಅಂತರ ಮುನ್ನಡೆ ಕಾಯ್ದುಕೊಂಡಿದೆ.
undefined
ಕಿವೀಸ್ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲುವಿನ ಕಾತರದಲ್ಲಿ ಟೀಂ ಇಂಡಿಯಾ
ಆಕ್ಲೆಂಡ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್‌ಗಳಿಂದ ಜಯಿಸಿತ್ತು. ಇನ್ನು ಅದೇ ಮೈದಾನದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ವಿರಾಟ್ ಪಡೆ 7 ವಿಕೆಟ್‌ಗಳ ಜಯ ದಾಖಲಿಸಿತ್ತು.
ತಂಡಗಳು ಹೀಗಿವೆ:
ಭಾರತ:
3rd T20I. India XI: R Sharma, KL Rahul, V Kohli, S Iyer, S Dube, M Pandey, R Jadeja, S Thakur, Y Chahal, M Shami, J Bumrah https://t.co/7O8uUMMnPg
— BCCI (@BCCI)ನ್ಯೂಜಿಲೆಂಡ್:
3rd T20I. New Zealand XI: M Guptill, C Munro, K Williamson, C de Grandhomme, R Taylor, T Seifert, M Santner, T Southee, S Kuggeleijn, I Sodhi, H Bennett https://t.co/7O8uUMMnPg
— BCCI (@BCCI)