
ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ಆರಂಭಿಕ 3 ಪಂದ್ಯಗಳಲ್ಲೂ ಗೆದ್ದು ಸರಣಿ ಕೈವಶಪಡಿಸಿಕೊಂಡಿರುವ ಟೀಂ ಇಂಡಿಯಾ, ಈಗ ಆತಿಥೇಯರ ವಿರುದ್ಧ 4ನೇ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಶುಕ್ರವಾರ ಆಕ್ಲೆಂಡ್‌ನಲ್ಲಿ ನಡೆಯಲಿದೆ.
ಭಾರತ ಈಗಾಗಲೇ ಸರಣಿ ಗೆದ್ದಿರುವುದರಿಂದ, ಈ ಪಂದ್ಯದಲ್ಲಿ ಕೆಲ ಬದಲಾವಣೆ ಮಾಡುವ ಸಾಧ್ಯತೆಯಿದೆ. ಪ್ರಮುಖವಾಗಿ ಇಬ್ಬರು ಸ್ಪಿನ್ನರ್‌ಗಳಾದ ಕುಲ್ದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಅವಕಾಶಕ್ಕಾಗಿ ಕಾಯುತ್ತಿದ್ದು, ಅವರನ್ನು ಆಡುವ 11ರ ಬಳಗದಲ್ಲಿ ಆಡಿಸಲಿದೆಯೇ ಎಂಬ ಕುತೂಹಲವಿದೆ. ವೇಗಿ ಭುವನೇಶ್ವರ್ ಆರಂಭಿಕ 3 ಪಂದ್ಯಗಳಲ್ಲೂ ದುಬಾರಿಯಾಗಿದ್ದು, ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಬೇಕಿದ್ದರೆ ಮಾರಕ ದಾಳಿ ಸಂಘಟಿಸಬೇಕಿದೆ.
ಗಾಯದಿಂದಾಗಿ ಕಳೆದೆರಡು ಪಂದ್ಯಕ್ಕೆ ಗೈರಾಗಿದ್ದ ಇಶಾನ್ ಕಿಶನ್ ಈ ಪಂದ್ಯಕ್ಕೆ ಲಭ್ಯವಿದ್ದಾರೆಯೇ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ಲಭಿಸಿಲ್ಲ. ಅವರು ಗೈರಾದರೆ ವೈಭವ್ ಸೂರ್ಯವಂಶಿಗೆ ಮತ್ತೊಂದು ಅವಕಾಶ ಸಿಗಲಿದೆ.
ಇನ್ನು, ತವರಿನಲ್ಲೇ ಹ್ಯಾಟ್ರಿಕ್ ಸೋಲನುಭವಿಸಿರುವ ಕಿವೀಸ್ ಪುಟಿದೇಳಲು ಕಾಯುತ್ತಿದ್ದು, ಸುಧಾರಿತ ಪ್ರದರ್ಶನ ನೀಡಬೇಕಾದ ಅಗತ್ಯವಿದೆ.
ಈಗಾಗಲೇ ಸರಣಿ ಸೋತಿರುವ ನ್ಯೂಜಿಲೆಂಡ್‌ಗೆ ಮತ್ತೊಂದು ಹಿನ್ನಡೆ ಉಂಟಾಗಿದೆ. ತಂಡದ ಪ್ರಮುಖ ವೇಗಿ ಲಾಕಿ ಫರ್ಗ್ಯೂಸನ್ ಗಾಯದಿಂದಾಗಿ ಕೊನೆ 2 ಟಿ20 ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಅವರ ಬದಲು ಮ್ಯಾಟ್ ಫಿಶರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತ: ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ನಮನ್ ಧೀರ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಪ್ರಿನ್ಸ್ ಯಾದವ್, ಅರ್ಶದೀಪ್ ಸಿಂಗ್.
ನ್ಯೂಜಿಲೆಂಡ್: ಟಿಮ್ ಸೀಫರ್ಟ್(ವಿಕೆಟ್ ಕೀಪರ್), ಫಿನ್ ಅಲೆನ್, ಡೇರಲ್ ಮಿಚೆಲ್, ಗ್ಲೆನ್ ಫಿಲಿಫ್ಸ್, ಬೆವೊನ್ ಜೇಕೊಬ್ಸ್, ಮಿಚೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ನೇಥನ್ ಸ್ಮಿತ್, ಆಡಂ ಮಿಲ್ನೆ, ಜೇಕಬ್ ಡಫಿ, ಮ್ಯಾಥ್ಯೂ ಫಿಶರ್.
ಪಂದ್ಯ ಆರಂಭ: ಮಧ್ಯಾಹ್ನ 12.30ಕ್ಕೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.