
ನ್ಯೂಜಿಲೆಂಡ್ ವಿರುದ್ಧದ ಐದನೇ ಟಿ20 ಮ್ಯಾಚ್ನಲ್ಲಿ ಟೀಂ ಇಂಡಿಯಾ 7 ವಿಕೆಟ್ಗಳಿಂದ ಸೋಲನುಭವಿಸಿತು. ಭಾರತ ನೀಡಿದ್ದ 192 ರನ್ ಬೆನ್ನಟ್ಟಿದ ನ್ಯೂಜಿಲೆಂಡ್ 18 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ನ್ಯೂಜಿಲೆಂಡ್ ಪಂದ್ಯವನ್ನು ಗೆದ್ದರೂ, ಭಾರತ ಈಗಾಗಲೇ ಸರಣಿ ಗೆದ್ದಿದೆ.
ನ್ಯೂಜಿಲೆಂಡ್ ವಿರುದ್ಧದ ಈ ಟಿ20 ಸರಣಿಯ ನಂತರ, ಈಗ ಎರಡೂ ತಂಡಗಳ ನಡುವೆ 5 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಭಾರತೀಯ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮರಳಲಿದ್ದಾರೆ. ಭಾರತದಿಂದ ಟಿ20 ಸರಣಿಯಲ್ಲಿ ಆಡಿದ 8 ಆಟಗಾರರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದೆ, ಆದರೆ 8 ಆಟಗಾರರು ಏಕದಿನ ಸರಣಿಯಲ್ಲಿ ಉಳಿದಿದ್ದಾರೆ. ಆದರೆ ಇಲ್ಲಿ 10 ಆಟಗಾರರನ್ನು ಹೊಸದಾಗಿ ಸೇರಿಸಿಕೊಳ್ಳಲಾಗಿದೆ.
ನವೆಂಬರ್ 4ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಎರಡನೇ ಏಕದಿನ ಪಂದ್ಯ ನವೆಂಬರ್ 7 ರಂದು, 3ನೇ ಪಂದ್ಯ ನ.10 ರಂದು, ನಾಲ್ಕನೇ ಪಂದ್ಯ ನವೆಂಬರ್ 13ರಂದು ಮತ್ತು ಐದನೇ ಪಂದ್ಯ ನವೆಂಬರ್ 15 ರಂದು ನಡೆಯಲಿದೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ 3 ಏಕದಿನ ಪಂದ್ಯಗಳು ಮತ್ತು ಕೊನೆಯ 2 ಏಕದಿನ ಪಂದ್ಯಗಳಿಗೆ ಕೆಲವು ಆಟಗಾರರನ್ನು ಬದಲಾಯಿಸಲಾಗಿದೆ. ಏಕದಿನ ಪಂದ್ಯಗಳು ಮತ್ತು ಟೆಸ್ಟ್ ಸರಣಿಯ ನಡುವಿನ ಕಡಿಮೆ ಅಂತರದಿಂದಾಗಿ, ಕೆಲವು ಆಟಗಾರರು ಮೊದಲ 3 ಏಕದಿನ ಪಂದ್ಯಗಳ ನಂತರ ಟೆಸ್ಟ್ ಸರಣಿಗೆ ತಯಾರಿ ನಡೆಸಲು ಹೋಗುತ್ತಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡಿದ ಎಂಟು ಆಟಗಾರರು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ವೈಭವ್ ಸೂರ್ಯವಂಶಿ, ಶಿವಂ ದುಬೆ, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್ ಮತ್ತು ಮಯಾಂಕ್ ಯಾದವ್, ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿಲ್ಲ. ಟಿ20 ಸರಣಿಯಲ್ಲಿ ಭಾರತ ತಂಡದಲ್ಲಿದ್ದ 8 ಆಟಗಾರರು; ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅರ್ಷದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ - ಏಕದಿನ ಸರಣಿಯಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ.
ಇದಲ್ಲದೆ, ಟಿ20 ಸರಣಿಯ ಭಾಗವಾಗಿರದ 10 ಆಟಗಾರರನ್ನು ಏಕದಿನ ಸರಣಿಯಲ್ಲಿ ಸೇರಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿತುರಾಜ್ ಗಾಯಕ್ವಾಡ್, ಮೊಹಮ್ಮದ್ ಸಿರಾಜ್, ಗುರ್ನೂರ್ ಬ್ರಾರ್, ಅಕಿಬ್ ನಬಿ ಅವರನ್ನು ಎಲ್ಲಾ ಐದು ಏಕದಿನ ಪಂದ್ಯಗಳಿಗೆ ಟೀಮ್ ಇಂಡಿಯಾದಲ್ಲಿ ಆಯ್ಕೆ ಮಾಡಲಾಗಿದೆ.
ಶುಭಮನ್ ಗಿಲ್ ಮೊದಲ 3 ಪಂದ್ಯಗಳಲ್ಲಿ ಆಡಲಿದ್ದು, ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ, ಶ್ರೇಯಸ್ ಅಯ್ಯರ್ ಕೊನೆಯ ಎರಡು ಪಂದ್ಯಗಳಿಗೆ ತಂಡವನ್ನು ಮುನ್ನಡೆಸಲಿದ್ದಾರೆ. ಕೆಎಲ್ ರಾಹುಲ್, ಅನ್ಶುಲ್ ಕಾಂಬೋಜ್ ಮೊದಲ 3 ಏಕದಿನ ಪಂದ್ಯಗಳಿಗೆ ಲಭ್ಯರಿದ್ದರೆ, ಕುಮಾರ್ ಕುಶಾಗ್ರ ನಾಲ್ಕನೇ ಮತ್ತು ಐದನೇ ಪಂದ್ಯಗಳಿಗೆ ಮಾತ್ರ ಅವಕಾಶ ಪಡೆದಿದ್ದಾರೆ.
ಮೊದಲ 3 ಏಕದಿನ ಪಂದ್ಯಗಳಿಗೆ ಭಾರತ ತಂಡ; ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ನಮನ್ ಧೀರ್, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಅಕಿಬ್ ನಬಿಬಿ
2ನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಇಶಾನ್ ಕಿಶನ್, ಕುಮಾರ್ ಕುಶಾಗ್ರಾ, ನಮನ್ ಧೀರ್, ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಅರ್ಷ್ದೀಪ್ ಸಿಂಗ್, ಕುಲ್ದೀಪ್ ಯಾದವ್,
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.