* ಕಾನ್ಪುರ ಟೆಸ್ಟ್‌ನ ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ತಿರುಗೇಟು
* ಮೂರನೇ ದಿನದಾಟದ ಮೊದಲೆರಡು ಸೆಷನ್‌ನಲ್ಲಿ 6 ವಿಕೆಟ್ ಉರುಳಿಸಿದ ಭಾರತ
* ಅಕ್ಷರ್ ಪಟೇಲ್ ಖಾತೆಗೆ ಮೂರು ವಿಕೆಟ್ ಸೇರ್ಪಡೆ
ಕಾನ್ಪುರ(ನ.27): ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ (Axar Patel) (3) ಹಾಗೂ ರವೀಂದ್ರ ಜಡೇಜಾ (Ravindra Jadeja) ಮಿಂಚಿನ ದಾಳಿಗೆ ತತ್ತರಿಸಿದ ಪ್ರವಾಸಿ ನ್ಯೂಜಿಲೆಂಡ್ ತಂಡವು ಮೂರನೇ ದಿನದಾಟದ ಎರಡನೇ ಸೆಷನ್‌ನಲ್ಲಿ 4 ವಿಕೆಟ್ ಕಳೆದುಕೊಂಡಿದೆ. ಮೂರನೇ ದಿನದಾಟದ ಚಹಾ ವಿರಾಮದ ವೇಳೆಗೆ ನ್ಯೂಜಿಲೆಂಡ್ ತಂಡವು (New Zealand Cricket Team) 6 ವಿಕೆಟ್ ಕಳೆದುಕೊಂಡು 249 ರನ್ ಬಾರಿಸಿದ್ದು, ಇನ್ನೂ 96 ರನ್‌ಗಳ ಹಿನ್ನೆಡೆಯಲ್ಲಿದೆ.
ಮೂರನೇ ದಿನದಾಟದ ಮೊದಲ ಸೆಷನ್‌ನಲ್ಲಿ ಪ್ರಾಬಲ್ಯ ಮೆರೆದಿದ್ದ ಪ್ರವಾಸಿ ನ್ಯೂಜಿಲೆಂಡ್ ತಂಡವು ಎರಡನೇ ಸೆಷನ್‌ನಲ್ಲಿ ರನ್‌ಗಳಿಸಲು ಪರದಾಡಿತು. ಎರಡನೇ ಸೆಷನ್‌ನಲ್ಲಿ 32 ಓವರ್ ಎದುರಿಸಿ ನ್ಯೂಜಿಲೆಂಡ್ 4 ವಿಕೆಟ್ ಕಳೆದುಕೊಂಡು ಕೇವಲ 52 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ (Team India) ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮಾರಕ ದಾಳಿ ನಡೆಸುವ ಮೂಲಕ ಕಿವೀಸ್ ಲೆಕ್ಕಾಚಾರ ತಲೆಕೆಳಗಾಗುವಂತೆ ಮಾಡಿದರು. ಮೊದಲಿಗೆ ನ್ಯೂಜಿಲೆಂಡ್‌ನ ಅನುಭವಿ ಬ್ಯಾಟರ್ ರಾಸ್ ಟೇಲರ್ (Ross Taylor) ಅವರನ್ನು ಪೆವಿಲಿಯನ್ನಿಗಟ್ಟುವ ಮೂಲಕ ಪಂದ್ಯದಲ್ಲಿ ಅಕ್ಷರ್ ಪಟೇಲ್ ವಿಕೆಟ್ ಖಾತೆ ತೆರೆದರು. ರಾಸ್ ಟೇಲರ್ 28 ಎಸೆತಗಳನ್ನು ಎದುರಿಸಿ 1 ಬೌಂಡರಿ ಸಹಿತ 11 ರನ್ ಗಳಿಸಿ ಶ್ರೀಕರ್ ಭರತ್ ಹಿಡಿದ ಅದ್ಭುತ ಕ್ಯಾಚ್‌ಗೆ ಪೆವಿಲಿಯನ್ ಸೇರಿದರು.
undefined
Ind vs NZ Kanpur Test: ಕಿವೀಸ್‌ನ ಎರಡು ವಿಕೆಟ್ ಪತನ..!
ದಿಢೀರ್ ಕುಸಿತ ಕಂಡ ಕಿವೀಸ್ ಮಧ್ಯಮ ಕ್ರಮಾಂಕ: ಮೊದಲ ವಿಕೆಟ್‌ಗೆ ನ್ಯೂಜಿಲೆಂಡ್ ತಂಡವು 151 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟಿತ್ತು. ಇದಾದ ಬಳಿಕ ಮೊದಲ ಸೆಷನ್ ಅಂತ್ಯದ ವೇಳೆಗೆ ಕಿವೀಸ್ ತನ್ನ ನಾಯಕ ಕೇನ್ ವಿಲಿಯಮ್ಸನ್ (Kane Williamson) ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಎನ್ನುವಂತೆ 4 ವಿಕೆಟ್ ಕಳೆದುಕೊಂಡಿತು. ರಾಸ್ ಟೇಲರ್ 11 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಹೆನ್ರಿ ನಿಕೋಲಸ್ 2 ರನ್ ಬಾರಿಸಿ ಪೆವಿಲಿಯನ್ ಸೇರಿದರು. ಇನ್ನು 282 ಎಸೆತಗಳನ್ನು ಎದುರಿಸಿ 10 ಬೌಂಡರಿ ಸಹಿತ 95 ರನ್ ಬಾರಿಸಿ ಶತಕದತ್ತ ಮುನ್ನುಗ್ಗುತ್ತಿದ್ದ ಆರಂಭಿಕ ಬ್ಯಾಟರ್ ಟಾಮ್ ಲೇಥಮ್ ಕೂಡಾ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಮನ್ನುಗ್ಗಿ ಆಡುವ ಯತ್ನದಲ್ಲಿ ಸ್ಟಂಪೌಟ್ ಆಗಿ ಪೆವಿಲಿಯನ್ ಸೇರಿದರು. ಆಲ್ರೌಂಡರ್ ರಚಿನ್ ರವೀಂದ್ರ(13) ಅವರನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಮತ್ತೋರ್ವ ಎಡಗೈ ಬೌಲರ್ ರವೀಂದ್ರ ಜಡೇಜಾ ಯಶಸ್ವಿಯಾದರು.
That's Tea on Day 3 and a fantastic session for .
New Zealand are 249/6, trail India (345) by 96 runs.
Scorecard - https://t.co/WRsJCUhS2d pic.twitter.com/3cBAeRGcHa
ಇಲ್ಲಿನ ಗ್ರೀನ್ ಪಾರ್ಕ್ ಮೈದಾನದಲ್ಲಿ (Green Park Stadium) ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಶ್ರೇಯಸ್ ಅಯ್ಯರ್ ಆಕರ್ಷಕ ಶತಕ ಹಾಗೂ ಶುಭ್‌ಮನ್ ಗಿಲ್ ಮತ್ತು ರವೀಂದ್ರ ಜಡೇಜಾ ಸಮಯೋಚಿತ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ ಭಾರತ 345 ರನ್ ಬಾರಿಸಿ ಸರ್ವಪತನ ಕಂಡಿತು. ಇದೀಗ ಮೊದಲ ಇನಿಂಗ್ಸ್ ಆರಂಭಿಸಿರುವ ನ್ಯೂಜಿಲೆಂಡ್ ಇನ್ನೂ 96 ರನ್‌ಗಳ ಹಿನ್ನೆಡೆಯಲ್ಲಿದೆ.
ಸಂಕ್ಷಿಪ್ತ ಸ್ಕೋರ್
ಭಾರತ: 345/10
ಶ್ರೇಯಸ್ ಅಯ್ಯರ್: 105
ಟಿಮ್ ಸೌಥಿ: 69/5
ನ್ಯೂಜಿಲೆಂಡ್: 249/6
ಟಾಮ್ ಲೇಥಮ್: 95
ಅಕ್ಷರ್ ಪಟೇಲ್: 43
(* ಮೂರನೇ ದಿನದಾಟದ ಟೀ ಬ್ರೇಕ್ ವೇಳೆಗೆ)