Ind vs NZ Kanpur Test: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಚಚ್ಚಿ ದಾಖಲೆ ಬರೆದ ಶ್ರೇಯಸ್ ಅಯ್ಯರ್‌..!

By Suvarna NewsFirst Published Nov 26, 2021, 10:18 AM IST
Highlights

* ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಶ್ರೇಯಸ್ ಅಯ್ಯರ್ 

*157 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತ ತಲುಪಿದ ಅಯ್ಯರ್

* ಪಾದಾರ್ಪಣೆ ಪಂದ್ಯದಲ್ಲೇ ಶತಕ ಬಾರಿಸಿ ದಾಖಲೆ ಬರೆದ ಮುಂಬೈ ಮೂಲದ ಕ್ರಿಕೆಟಿಗ

ಕಾನ್ಪುರ(ನ.26): ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ರೆಡ್‌ ಬಾಲ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಶ್ರೇಯಸ್ ಅಯ್ಯರ್ (Shreyas Iyer), ಚೊಚ್ಚಲ ಪಂದ್ಯದಲ್ಲೇ ಆಕರ್ಷಕ ಶತಕ (Debut Century) ಸಿಡಿಸುವ ಮೂಲಕ ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಜತೆಗೆ ಟೆಸ್ಟ್ ಕ್ರಿಕೆಟ್‌ನ ಪಾದಾರ್ಪಣೆ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ 16ನೇ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಒಟ್ಟು 157 ಎಸೆತಗಳನ್ನು ಎದುರಿಸಿ ಅಯ್ಯರ್ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ಗ್ರೀನ್‌ ಪಾರ್ಕ್‌ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಅಯ್ಯರ್ ಸಮಯೋಚಿತ ಶತಕ ಬಾರಿಸಿ ತಂಡಕ್ಕೆ ಆಸರೆಯಾಗಿದ್ದಾರೆ

ಹೌದು, ವಿರಾಟ್ ಕೊಹ್ಲಿ (Virat Kohli), ಕೆ.ಎಲ್‌. ರಾಹುಲ್‌ (KL Rahul), ರೋಹಿತ್ ಶರ್ಮಾ(Rohit Sharma) ಅವರಂತಹ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಶ್ರೇಯಸ್‌ ಅಯ್ಯರ್ ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ತಮ್ಮ ಪ್ರತಿಭೆ ಅನಾವರಣ ಮಾಡಿದ್ದಾರೆ. ಈ ಮೂಲಕ ಮುಂಬರುವ ದಿನಗಳಲ್ಲಿ ತಾವು ಕೂಡಾ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾಗಬಲ್ಲೇ ಎನ್ನುವ ಸ್ಪಷ್ಟ ಸಂದೇಶವನ್ನು ಶ್ರೇಯಸ್‌ ಅಯ್ಯರ್ ರವಾನಿಸಿದ್ದಾರೆ. ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ (Gundappa Vishwanath) ಕೂಡಾ ಕಾನ್ಪುರದಲ್ಲಿ ತಾವಾಡಿದ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಶತಕ ಬಾರಿಸಿ ಗಮನ ಸೆಳೆದಿದ್ದರು. ಇದೀಗ ಅಯ್ಯರ್‌ ಕಾನ್ಪುರದಲ್ಲಿ ತಾವಾಡಿದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ.

A special moment for 💯

Live - https://t.co/9kh8Df6cv9 pic.twitter.com/HA7yJiB1Hg

— BCCI (@BCCI)

IPL 2022: ಸಂಭಾವ್ಯ ವೇಳಾಪಟ್ಟಿ ಪ್ರಕಟ, ಚೆನ್ನೈನಲ್ಲಿ ಮೊದಲ ಪಂದ್ಯ..?

ಒಂದು ಹಂತದಲ್ಲಿ ಟೀಂ ಇಂಡಿಯಾ (Team India) 106 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್‌ಗಿಳಿದ ಶ್ರೇಯಸ್ ಅಯ್ಯರ್, ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಬೀಸುವ ಮೂಲಕ ಗಮನ ಸೆಳೆದರು. ರಹಾನೆ ವಿಕೆಟ್‌ ಪತನದ ಬಳಿಕ 5ನೇ ವಿಕೆಟ್‌ಗೆ ರವೀಂದ್ರ ಜಡೇಜಾ ಜತೆಗೂಡಿ 121 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮೊದಲ ದಿನದಾಟದಂತ್ಯಕ್ಕೆ ಅಜೇಯ 75 ರನ್‌ ಬಾರಿಸಿದ್ದ ಶ್ರೇಯಸ್‌ ಅಯ್ಯರ್, ಎರಡನೇ ದಿನದಾಟದ ಆರಂಭದಲ್ಲೇ 5 ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸುವಲ್ಲಿ ಯಶಸ್ವಿಯಾಗಿದ್ದರೆ. ಮೈದಾನದ ಮೂಲೆ ಮೂಲೆಗೆ ಚಂಡನ್ನಟ್ಟಿದ ಅಯ್ಯರ್ ಟೆಸ್ಟ್‌ ವೃತ್ತಿ ಜೀವನದ ಮೊದಲ ಶತಕ ಬಾರಿಸಿ ಮಿಂಚಿದ್ದಾರೆ.

The latest addition into the Centuries on debut for India club - 👌 pic.twitter.com/r9yl1kFjQa

— BCCI (@BCCI)

Ind vs NZ Kanpur Test: ಅಯ್ಯರ್-ಜಡೇಜಾ ಶತಕದ ಜತೆಯಾಟ, ಬೃಹತ್ ಮೊತ್ತದತ್ತ ಟೀಂ ಇಂಡಿಯಾ ದಾಪುಗಾಲು

ಎರಡನೇ ದಿನದಾಟದ ಆರಂಭದಲ್ಲೇ ಟೀಂ ಇಂಡಿಯಾ ರವೀಂದ್ರ ಜಡೇಜಾ (Ravindra Jadeja) ವಿಕೆಟ್‌ ಕಳೆದುಕೊಂಡಿದೆ. ಮೊದಲ ದಿನದಾಟದಂತ್ಯದ ವೇಳೆಗೆ 50 ರನ್‌ ಬಾರಿಸಿದ್ದ ಜಡೇಜಾ ತನ್ನ ಖಾತೆಗೆ ಒಂದು ರನ್ ಸೇರಿಸದೇ ಟಿಮ್‌ ಸೌಥಿ ಬೌಲಿಂಗ್‌ನಲ್ಲಿ ಬೌಲ್ಡ್ ಆಗುವ ಮೂಲಕ ಪೆವಿಲಿಯನ್ ಸೇರಿದರು. ಇದಾದ ಬಳಿಕ ಕ್ರೀಸ್‌ಗಿಳಿದ ವೃದ್ದಿಮಾನ್ ಸಾಹ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲಿಲ್ಲ. ಶ್ರೇಯಸ್ ಅಯ್ಯರ್ ಶತಕ ಬಾರಿಸಿದ ಬೆನ್ನಲ್ಲೇ ಸೌಥಿ ಬೌಲಿಂಗ್‌ನಲ್ಲಿ ಸಾಹ ವಿಕೆಟ್‌ ಕೀಪರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. 

ಶತಕ ಬಾರಿಸಿ ಅಯ್ಯರ್ ಔಟ್‌: ಪಾದಾರ್ಪಣೆ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಶ್ರೇಯಸ್ ಅಯ್ಯರ್ ಅಂತಿಮವಾಗಿ 171 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 2  ಸಿಕ್ಸರ್ ಸಹಿತ 105 ರನ್‌ ಬಾರಿಸಿ ಟಿಮ್‌ ಸೌಥಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
 

click me!