ಕಿವೀಸ್ ಎದುರಿನ ಟಿ20 ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗಿಲ್ಲ ಸ್ಥಾನ..!

By Naveen KodaseFirst Published Jan 14, 2023, 11:19 AM IST
Highlights

ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಎದುರಿನ ಸರಣಿಗೆ ಭಾರತ ತಂಡ ಪ್ರಕಟ
ನ್ಯೂಜಿಲೆಂಡ್ ಎದುರಿನ ಟಿ20 ಸರಣಿಗೆ ರೋಹಿತ್, ಕೊಹ್ಲಿಗಿಲ್ಲ ಸ್ಥಾನ
ಏಕದಿನ ಸರಣಿಗೆ ತಂಡ ಕೂಡಿಕೊಳ್ಳಲಿರುವ ಉಭಯ ಸ್ಟಾರ್ ಆಟಗಾರರು

ನವದೆಹಲಿ(ಜ.14): ನಿರೀಕ್ಷೆಯಂತೆ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸೇರಿ ಕೆಲ ಹಿರಿಯ ಆಟಗಾರರನ್ನು ಮತ್ತೆ ಟಿ20 ತಂಡಕ್ಕೆ ಪರಿಗಣಿಸಿಲ್ಲ. ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಗೂ ವಿರಾಟ್ ಕೊಹ್ಲಿ, ರೋಹಿತ್‌ ಶರ್ಮಾ ಆಯ್ಕೆಯಾಗಿಲ್ಲ. ನ್ಯೂಜಿಲೆಂಡ್‌ ವಿರುದ್ಧ 3 ಟಿ20, 3 ಏಕದಿನ ಪಂದ್ಯಗಳ ಸರಣಿ ಹಾಗೂ ಆಸ್ಪ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲೆರಡು ಪಂದ್ಯಗಳಿಗೆ ಶುಕ್ರವಾರ ಭಾರತ ತಂಡ ಪ್ರಕಟಗೊಂಡಿದೆ.

ರಿಷಭ್‌ ಪಂತ್‌ ಬದಲಿಗೆ ಟೆಸ್ಟ್‌ ತಂಡದಲ್ಲಿ ಕೆ.ಎಸ್‌.ಭರತ್‌ ಹಾಗೂ ಇಶಾನ್‌ ಕಿಶನ್‌ ಸ್ಥಾನ ಪಡೆದಿದ್ದು, ಇಬ್ಬರ ಪೈಕಿ ಒಬ್ಬರು ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ಇನ್ನು ಟೆಸ್ಟ್‌ ತಂಡಕ್ಕೆ ರವೀಂದ್ರ ಜಡೇಜಾ ವಾಪಸಾಗಿದ್ದಾರಾದರೂ ಫಿಟ್ನೆಸ್‌ ಟೆಸ್ಟ್‌ ಪಾಸಾದರಷ್ಟೇ ತಂಡದಲ್ಲಿ ಉಳಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದೇ ವೇಳೆ ವೈಯಕ್ತಿಕ ಕಾರಣಗಳಿಂದ ನ್ಯೂಜಿಲೆಂಡ್‌ ವಿರುದ್ಧದ ಸರಣಿಗಳಿಂದ ರಾಹುಲ್‌ ಹಾಗೂ ಅಕ್ಷರ್‌ ಹೊರಗುಳಿಯಲಿದ್ದಾರೆ.

ಭಾರತ ಎದುರಿನ ಟೆಸ್ಟ್‌ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ; ನಾಲ್ವರು ಸ್ಪಿನ್ನರ್‌ಗಳಿಗೆ ಸ್ಥಾನ..!

ಏಕದಿನ ತಂಡ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ಇಶಾನ್ ಕಿಶನ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಸ್ ಭರತ್‌, ಹಾರ್ದಿಕ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್, ಶಾಬಾಜ್‌ ಅಹಮ್ಮದ್, ಶಾರ್ದೂಲ್‌ ಠಾಕೂರ್, ಕುಲ್ದೀಪ್‌, ಚಹಲ್‌, ಶಮಿ, ಸಿರಾಜ್‌, ಉಮ್ರಾನ್‌.

ಏಕದಿನ ಸರಣಿ ವೇಳಾಪಟ್ಟಿ

ಮೊದಲ ಏಕದಿನ: ಜನವರಿ 18 - ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಮೈದಾನ, ಹೈದರಾಬಾದ್
ಎರಡನೇ ಏಕದಿನ: ಜನವರಿ 21 - ನಯಾ ರಾಯ್ಪುರ ಅಂತಾರಾಷ್ಟ್ರೀಯ ಮೈದಾನ, ರಾಯ್ಪುರ
ಮೂರನೇ ಏಕದಿನ: ಜನವರಿ 24 - ಹೋಳ್ಕರ್ ಸ್ಟೇಡಿಯಂ, ಇಂಡೋರ್

ಟಿ20 ತಂಡ: ಹಾರ್ದಿಕ್‌ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್‌, ಋತುರಾಜ್ ಗಾಯಕ್ವಾಡ್‌, ಶುಭ್‌ಮನ್ ಗಿಲ್‌, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್‌ ಶರ್ಮಾ, ವಾಷಿಂಗ್ಟನ್‌ ಸುಂದರ್, ಕುಲ್ದೀಪ್‌ ಯಾದವ್, ಯುಜುವೇಂದ್ರ ಚಹಲ್‌, ಅಶ್‌ರ್‍ದೀಪ್‌ ಸಿಂಗ್, ಉಮ್ರಾನ್‌ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಕೇಶ್‌ ಕುಮಾರ್.

ಟಿ20 ಸರಣಿಯ ವೇಳಾಪಟ್ಟಿ:

ಮೊದಲ ಟಿ20 ಪಂದ್ಯ: ಜನವರಿ 27:  ರಾಂಚಿ
ಎರಡನೇ ಟಿ20 ಪಂದ್ಯ: ಜನವರಿ 29: ಲಖನೌ
ಮೂರನೇ ಟಿ20 ಪಂದ್ಯ: ಫೆಬ್ರವರಿ 01: ಅಹಮದಾಬಾದ್

ಆಸೀಸ್‌ ಟೆಸ್ಟ್‌ಗೆ ತಂಡ: ರೋಹಿತ್‌ ಶರ್ಮಾ, ಕೆ ಎಲ್ ರಾಹುಲ್‌, ಶುಭ್‌ಮನ್ ಗಿಲ್‌, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಸ್ ಭರತ್‌, ಇಶಾನ್ ಕಿಶನ್‌, ರವಿಚಂದ್ರನ್‌ ಅಶ್ವಿನ್‌, ಅಕ್ಷರ್‌ ಪಟೇಲ್, ಕುಲ್ದೀಪ್‌ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್‌, ಉಮೇಶ್‌ ಯಾದವ್, ಜಯದೇವ್ ಉನಾದ್ಕತ್‌.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ವೇಳಾಪಟ್ಟಿ ಹೀಗಿದೆ: 

ಫೆಬ್ರವರಿ 9-12: ಮೊದಲ ಟೆಸ್ಟ್- ನಾಗ್ಪುರ
ಫೆಬ್ರವರಿ 17-21: ಎರಡನೇ ಟೆಸ್ಟ್- ಡೆಲ್ಲಿ
ಮಾರ್ಚ್‌ 01-05: ಮೂರನೇ ಟೆಸ್ಟ್ - ಧರ್ಮಶಾಲಾ
ಮಾರ್ಚ್‌ 09-13: ನಾಲ್ಕನೇ ಟೆಸ್ಟ್ - ಅಹಮದಾಬಾದ್

click me!