
ರಾಂಚಿ(ಜ.26): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಜನವರಿ 27 ರಂದು ರಾಂಚಿಯಲ್ಲಿ ಪಂದ್ಯ ನಡೆಯಲಿದೆ. ಆದರೆ ಟಿ20 ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಗಾಯಕ್ಕೆ ತುತ್ತಾಗಿದ್ದಾರೆ. ಕೈಯ ಮಣಿಕಟ್ಟು ಭಾಗಕ್ಕೆ ಗಾಯವಾಗಿರುವ ಕಾರಣ ಗಾಯಕ್ವಾಡ್ ವಿಶ್ರಾಂತಿಗೆ ಜಾರಿದ್ದಾರೆ. ರುತುರಾಜ್ ಗಾಯಕ್ವಾಡ್ ನ್ಯೂಜಿಲೆಂಡ್ ವಿರುದ್ದಧ 3 ಟಿ20 ಪಂದ್ಯಕ್ಕೆ ಲಭ್ಯರಿಲ್ಲ.
25 ವರ್ಷದ ರುತುರಾಜ್ ಗಾಯಕ್ವಾಡ್ ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯಲಿದ್ದಾರೆ. ರುತುರಾಜ್ ಗಾಯಕ್ವಾಡ್ ಗಾಯದ ತೀವ್ರತೆ ತಪಾಸಣೆ ಮಾಡಿ ವಿಶ್ರಾಂತಿ ದಿನಗಳನ್ನು ಸೂಚಿಸಲಾಗುತ್ತದೆ. ವೈದ್ಯರ ತಂಡದ ಸೂಚನೆ ಬಳಿಕ ಬಿಸಿಸಿಐ ಅಧಿಕೃತ ನಿರ್ಧಾರ ಪ್ರಕಟಿಸಲಿದೆ. ಆದರೆ ನ್ಯೂಜಿಲೆಂಡ್ ಸರಣಿಯಿಂದ ರುತುರಾಜ್ ಗಾಯಕ್ವಾಡ್ ಹೊರಗುಳಿಯುವುದು ಖಚಿತವಾಗಿದೆ.
ಅಳಿಯ ಕೆಎಲ್ ರಾಹುಲ್‌ಗೆ 50 ಕೋಟಿಯ ಬಂಗಲೆ ಗಿಫ್ಟ್ ನೀಡಿದ ಸುನೀಲ್ ಶೆಟ್ಟಿ?
ಕಳೆದ ವರ್ಷ ರುತುರಾಜ್ ಗಾಯಕ್ವಾಡ್ ಇಂಜುರಿ ಸಮಸ್ಯೆಯಿಂದ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯಕ್ಕೂ ಅಲಭ್ಯರಾಗಿದ್ದರು. ವೆಸ್ಟ್ ಇಂಡೀಸ್ ತಂಡ ಭಾರತ ಪ್ರವಾಸದ ವೇಳೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದ ರುತುರಾಜ್ ಗಾಯಕ್ವಾಡ್, ಕೋವಿಡ್ ಕಾರಣದಿಂದ ಪಂದ್ಯ ಮಿಸ್ ಮಾಡಿಕೊಂಡಿದ್ದರು.
ಗಾಯಗೊಂಡು ಟೀಂ ಇಂಡಿಯಾದಿಂದ ಹೊರಗುಳಿಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್ ಬಳಿಕ ಇದೀಗ ರುತುರಾಜ್ ಗಾಯಕ್ವಾಡ್ ಕೂಡ ಈ ಸಾಲಿಗೆ ಸೇರಿಕೊಂಡಿದ್ದಾರೆ. ಸದ್ಯ ಗಾಯಕ್ವಾಡ್ ಬದಲಿ ಆಟಗಾರನ ಬಿಸಿಸಿಐ ಸೂಚಿಸಿಲ್ಲ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಜನವರಿ 27 ರಿಂದ ಆರಂಭಗೊಳ್ಳುತ್ತಿದೆ. 3 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಲವರಿಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಮುನ್ನಡೆಸಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯದವ್, ಇಶಾನ್ ಕಿಶನ್, ಶುಬಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಜಿತೇಶ್ ಸರ್ಮಾ, ವಾಶಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಕೇಶ್ ಕುಮಾರ್
ICC ODI Rankings: ಮೊದಲ ಬಾರಿಗೆ ನಂ.1 ಪಟ್ಟಕ್ಕೇರಿಸಿದ ವೇಗಿ ಮೊಹಮ್ಮದ್ ಸಿರಾಜ್..!
ಏಕದಿನದಲ್ಲಿ ಭಾರತ ನ.1
ವಿಶ್ವಕಪ್ ವರ್ಷದಲ್ಲಿ ಭಾರತ ಮತ್ತೊಂದು ಯಶಸ್ಸು ಸಾಧಿಸಿದೆ. ನ್ಯೂಜಿಲೆಂಡ್ ವಿರುದ್ಧದ 3ನೇ ಪಂದ್ಯವನ್ನು 90 ರನ್‌ಗಳಿಂದ ಗೆದ್ದ ಭಾರತ, 3 ಪಂದ್ಯಗಳ ಸರಣಿಯನ್ನು 3-0ಯಲ್ಲಿ ಕ್ಲೀನ್ ಸ್ವೀಪ್ ಮಾಡಿ ಐಸಿಸಿ ವಿಶ್ವ ಏಕದಿನ ರಾರಯಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮೊದಲು ಬ್ಯಾಟ್ ಮಾಡಿದ ಭಾರತ ರೋಹಿತ್, ಗಿಲ್‌ರ ಶತಕಗಳ ನೆರವಿನಿಂದ 9 ವಿಕೆಟ್‌ಗೆ 385 ರನ್ ಕಲೆಹಾಕಿತು.ನ್ಯೂಜಿಲೆಂಡ್ 41.2 ಓವರಲ್ಲಿ 295 ರನ್‌ಗೆ ಆಲೌಟ್ ಆಯಿತು
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.