
ರಾಂಚಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಯ್ಡನ್ ಮಾರ್ಕ್‌ರಮ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದಲ್ಲಿ ನಾಯಕ ತೆಂಬಾ ಬವುಮಾ ಹಾಗೂ ಕೇಶವ್ ಮಹಾರಾಜ್‌ಗೆ ವಿಶ್ರಾಂತಿ ನೀಡಲಾಗಿದೆ. ಇನ್ನುಳಿದಂತೆ ಹರಿಣಗಳ ಪಡೆ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದೆ. ಇನ್ನೊಂದೆಡೆ ಭಾರತ ತಂಡದ ಪರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ. ಇನ್ನುಳಿದಂತೆ ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಜತೆ ಯಶಸ್ವಿ ಜೈಸ್ವಾಲ್ ಭಾರತ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಭಾರತ ತಂಡವು ಮೂರು ವೇಗಿಗಳು ಹಾಗೂ ಮೂವರು ಸ್ಪಿನ್ನರ್‌ಗಳ ಕಾಂಬಿನೇಷನ್‌ನೊಂದಿಗೆ ಕಣಕ್ಕಿಳಿದಿದೆ. ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್ ಹಾಗೂ ಪ್ರಸಿದ್ದ್ ಕೃಷ್ಣ ವೇಗಿಗಳಾಗಿ ಕಣಕ್ಕಿಳಿದರೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಹಾಗೂ ಕುಲ್ದೀಪ್ ಯಾದವ್ ಸ್ಪಿನ್ನರ್‌ಗಳಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ದೇಶಿಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಮಹಾರಾಷ್ಟ್ರ ಮೂಲದ ಪ್ರತಿಭಾನ್ವಿತ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಕೊನೆಗೂ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಿಕ್ಕ ಅವಕಾಶವನ್ನು ಗಾಯಕ್ವಾಡ್ ಯಾವ ರೀತಿ ಬಳಸಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಇನ್ನು ನಾಯಕ ಕೆ ಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸಲಿದ್ದು, ರಿಷಭ್ ಪಂತ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿಲ್ಲ.
ಏಕದಿನ ಕ್ರಿಕೆಟ್‌ನಲ್ಲಿ ಸತತ 19ನೇ ಸಲ ಟಾಸ್ ಸೋತ ಭಾರತ:
ಭಾರತಕ್ಕೂ ಟಾಸ್‌ಗೂ ಯಾಕೋ ಅದೃಷ್ಟ ಕೈಕೊಡುತ್ತಲೇ ಬಂದಿದೆ. ಭಾರತ ತಂಡವು 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಿಂದೀಚೆಗೆ 19 ಏಕದಿನ ಪಂದ್ಯಗಳನ್ನಾಡಿದೆ. ಇದುವರೆಗೂ ಏಕದಿನ ಕ್ರಿಕೆಟ್‌ನಲ್ಲಿ ಒಂದೇ ಒಂದು ಸಲವೂ ಟಾಸ್ ಗೆದ್ದಿಲ್ಲ ಎನ್ನುವುದು ಅಚ್ಚರಿ ಎನಿಸಿದ್ರೂ ಸತ್ಯ.
ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ಕೆ ಎಲ್ ರಾಹುಲ್(ನಾಯಕ,ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.
ದಕ್ಷಿಣ ಆಫ್ರಿಕಾ: ರಿಯಾನ್ ರಿಕೆಲ್ಟನ್, ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಏಯ್ಡನ್ ಮಾರ್ಕ್‌ರಮ್(ನಾಯಕ), ಮ್ಯಾಥ್ಯೂ ಬ್ರೇಡ್ಕೆ, ಟೋನಿ ಡಿ ಝೋರ್ಜಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸನ್, ಕಾರ್ಬಿನ್ ಬೋಷ್, ಪ್ರೆನೆಲನ್ ಸುಬ್ರಾಯೆನ್, ನಂದ್ರೆ ಬರ್ಗರ್, ಒಟ್ಟೇನಿಲ್ ಬಾರ್ಟ್‌ಮನ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.