ಭಾರತ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ: ಉಭಯ ತಂಡದಲ್ಲೂ ಒಬ್ಬರು ಪಾದಾರ್ಪಣೆ

By Naveen Kodase  |  First Published Dec 17, 2023, 1:13 PM IST

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನ್ಯೂ ವಾಂಡರರ್ಸ್‌ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ಟಿ20 ಸರಣಿಯಲ್ಲಿ ಮಿಂಚಿದ್ದ ನಂದ್ರೆ ಬರ್ಗರ್‌ ಇದೀಗ ಏಕದಿನ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾ ಪರ ಪಾದಾರ್ಪಣೆ ಮಾಡಿದ್ದಾರೆ. ಇನ್ನೊಂದೆಡೆ ಟೀಂ ಇಂಡಿಯಾ ಪರ ತಮಿಳುನಾಡು ಮೂಲದ ಸಾಯಿ ಸುದರ್ಶನ್‌ ಪಾದಾರ್ಪಣೆ ಮಾಡಿದ್ದಾರೆ.

ಜೋಹಾನ್ಸ್‌ಬರ್ಗ್‌(ಡಿ.17): 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ, ಇದೀಗ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಕೆ ಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಎದುರು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನ್ಯೂ ವಾಂಡರರ್ಸ್‌ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ಟಿ20 ಸರಣಿಯಲ್ಲಿ ಮಿಂಚಿದ್ದ ನಂದ್ರೆ ಬರ್ಗರ್‌ ಇದೀಗ ಏಕದಿನ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾ ಪರ ಪಾದಾರ್ಪಣೆ ಮಾಡಿದ್ದಾರೆ. ಇನ್ನೊಂದೆಡೆ ಟೀಂ ಇಂಡಿಯಾ ಪರ ತಮಿಳುನಾಡು ಮೂಲದ ಸಾಯಿ ಸುದರ್ಶನ್‌ ಪಾದಾರ್ಪಣೆ ಮಾಡಿದ್ದಾರೆ.

🚨 Toss News 🚨

South Africa have elected to bat against in the first ODI.

Follow the Match ▶️ https://t.co/tHxu0nUwwH pic.twitter.com/YrYs20n60Z

— BCCI (@BCCI)

Latest Videos

undefined

ಪಿಂಕ್ ಜೆರ್ಸಿ ತೊಟ್ಟು ಕಣಕ್ಕಿಳಿದ ಹರಿಣಗಳ ಪಡೆ: ಸ್ತನ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವ ಸಲುವಾಗಿ ಏಯ್ಡನ್ ಮಾರ್ಕ್‌ರಮ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು ಇಂದು ಪಿಂಕ್ ಜೆರ್ಸಿ ತೊಟ್ಟು ಕಣಕ್ಕಿಳಿದಿದೆ. ಈ ಹಿಂದೆಯೂ ಹರಿಣಗಳ ಪಡೆ ಪಿಂಕ್ ಜೆರ್ಸಿ ತೊಟ್ಟು ಸ್ತನ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾ ಬಂದಿದೆ.

ಸಂಜುಗೆ ಸ್ಥಾನ: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದ ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ ಇದೀಗ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಅಕ್ಷರ್ ಪಟೇಲ್‌ ಕೂಡಾ ಏಕದಿನ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುವಲ್ಲಿ ಸಫಲವಾಗಿದ್ದಾರೆ. ಆಲ್ರೌಂಡರ್ ಅಕ್ಷರ್ ಪಟೇಲ್ ಕೂಡಾ ಗಾಯದ ಸಮಸ್ಯೆಯಿಂದ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದರು.
 
click me!