IND vs SA ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಸೌತ್ ಆಫ್ರಿಕಾ, ತಂಡದಲ್ಲಿ ಯಾರಿಗೆ ಸ್ಥಾನ?

Published : Jun 09, 2022, 06:32 PM ISTUpdated : Jun 09, 2022, 06:48 PM IST
IND vs SA ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಸೌತ್ ಆಫ್ರಿಕಾ, ತಂಡದಲ್ಲಿ ಯಾರಿಗೆ ಸ್ಥಾನ?

ಸಾರಾಂಶ

ಭಾರತ ಸೌತ್ ಆಫ್ರಿಕಾ ನಡುವಿನ ಟಿ20 ಸರಣಿ ಆರಂಭ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ರಿಷಬ್ ಪಂತ್‌ಗೆ ನಾಯಕತ್ವ

ದೆಹಲಿ(ಜೂ.09): ಐಪಿಎಲ್ ಟೂರ್ನಿ ಬಳಿಕ ಕ್ರಿಕೆಟ್ ಹಬ್ಬಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಇಂದಿನಿಂದ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ಸರಣಿ ಮತ್ತಷ್ಟು ರಂಜನೆ ನೀಡಲಿದೆ. ದೆಹಲಿಯಲ್ಲಿ ನಡೆಯತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ಇಶಾನ್ ಕಿಶನ್, ರುತುರಾತ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್ ಅವೇಶ್ ಖಾನ್

 ಹಲವು ದಾಖಲೆಗಳಿಗೆ ಸಾಕ್ಷಿಯಾಗಲಿದೆ ಇಂಡೋ-ಆಫ್ರಿಕಾ ಮೊದಲ ಟಿ20 ಪಂದ್ಯ..!

ಸೌತ್ ಆಫ್ರಿಕಾ ಪ್ಲೇಯಿಂಗ್ 11
ಕ್ವಿಂಟನ್ ಡಿಕಾಕ್, ತೆಂಬಾ ಬವುಮಾ(ನಾಯಕ), ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ತ್ರಿಸ್ಟಾನ್ ಸ್ಟಬ್ಸ್, ವೆಯ್ನ್ ಪಾರ್ನೆಲ್, ಡ್ವೇನ್ ಪ್ರೆಟೋರಿಯಸ್, ಕೇಶವ್ ಮಹಾರಾಜ್, ತಬ್ರೈಜ್ ಶಂಸಿ, ಕಾಗಿಸೋ ರಬಾಡಾ, ಆನ್ರಿತ್ ನೋರ್ಜೆ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಸೆಕೆಂಡ್ ಬ್ಯಾಟಿಂಗ್ ತಂಡಕ್ಕೆ ಕೊಂಚ ನರೆವು ನೀಡಲಿದೆ. ಹೀಗಾಗಿ ಟಾಸ್ ಬಳಿಕ ಮಾತನಾಡಿದ ನಾಯಕ ರಿಷಬ್ ಪಂತ್, ಟಾಸ್ ಗೆದ್ದರೆ ನಾವು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೇವು. ಆದರೆ ಮೊದಲು ಬ್ಯಾಟಿಂಗ್ ಮಾಡಿ ಉತ್ತಮ ಮೊತ್ತ ದಾಖಲಿಸುವ ವಿಶ್ವಾಸವಿದೆ ಎಂದರು. ನನಗೆ ಇದು ಅತ್ಯಂತ ಪ್ರಮುಖ ಪಂದ್ಯ. ಕಾರಣ ದೆಹಲಿ ಕ್ರಿಕೆಟಿಗ, ದೆಹಲಿ ಕ್ರೀಡಾಂಗಣದಲ್ಲೇ ನಾಯನಾಗಿ ತಂಡವನ್ನು ಮುನ್ನಡೆಸುತ್ತಿದ್ದೇನೆ ಎಂದು ರಿಷಬ್ ಪಂತ್ ಹೇಳಿದ್ದಾರೆ.

ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20 ಸರಣಿ ಇದೀಗ ತೀವ್ರ ಕುತೂಹಲಕ್ಕೆ ಕಾರಣಾಗಿದೆ. ಟೂರ್ನಿಯಿಂದ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿತ್ತು. ಆದರೆ ಕೆಎಲ್ ರಾಹುಲ್ ಹಾಗೂ ಕುಲ್ದೀಪ್ ಯಾದವ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ಹೀಗಾಗಿ ರಾಹುಲ್ ಹಾಗೂ ಕುಲ್ದೀಪ್ ಇಬ್ಬರೂ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. 

ಟಿ20 ಸರಣಿಯಿಂದ ಹೊರಬಿದ್ದ ಬೆನ್ನಲ್ಲೇ ಭಾವನಾತ್ಮಕ ಸಂದೇಶ ರವಾನಿಸಿದ ಕೆ ಎಲ್ ರಾಹುಲ್

ರಾಹುಲ್ ಅನುಪಸ್ಥಿತಿಯಲ್ಲಿ ರಿಷಬ್ ಪಂತ್‌ಗೆ ನಾಯಕತ್ವ ನೀಡಿದ್ದರೆ, ಹಾರ್ದಿಕ್ ಪಾಂಡ್ಯಗೆ ಉಪನಾಯಕ ಪಟ್ಟ ನೀಡಲಾಗಿದೆ. ಅತ್ತ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ ಕಂಡುಕೊಂಡಿರುವ ಸೌತ್ ಆಫ್ರಿಕಾ ಆಟಗಾರರು ಇದೀಗ ಅಬ್ಬರಿಸಲು ರೆಡಿಯಾಗಿದ್ದಾರೆ. ಕ್ವಿಂಟನ್ ಡಿಕಾಕ್, ಡೇವಿಡ್ ಮಿಲ್ಲರ್, ಕಾಗಿಸೋ ರಬಾಡ ಸೇರಿಂತೆ ಸೌತ್ ಆಫ್ರಿಕಾ ತಂಡ ಉತ್ತಮ ಪಾರ್ಮ್‌ನಲ್ಲಿದೆ.

ಜೂನ್ 12, ಎರಡನೇ ಟಿ20 ಪಂದ್ಯ, ಬಾರಬತಿ ಕ್ರೀಡಾಂಗಣ ಕಟಕ್, ಸಂಜೆ 7 ಗಂಟೆಗೆ
ಜೂನ್ 14, ಮೂರನೇ ಟಿ20 ಪಂದ್ಯ, ವೈಎಸ್ಆರ್ ಕ್ರೀಡಾಂಗಣ ವಿಶಾಖಪಟ್ಟಣಂ, ಸಂಜೆ 7 ಗಂಟೆಗೆ
ಜೂನ್ 17, ನಾಲ್ಕನೇ ಟಿ20 ಪಂದ್ಯ, ಸೌರಾಷ್ಟ್ರ ಕ್ರೀಡಾಂಗಣ ರಾಜ್‌ಕೋಟ್, ಸಂಜೆ 7 ಗಂಟೆಗೆ
ಜೂನ್ 19, ಐದನೇ ಟಿ20 ಪಂದ್ಯ, ಚಿನ್ನಸ್ವಾಮಿ ಕ್ರೀಡಾಂಗಣ ಬೆಂಗಳೂರು, ಸಂಜೆ 7 ಗಂಟೆಗೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?