
ಸೆಂಚೂರಿಯನ್(ಡಿ.25): ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಡಿ.26ರಂದು ಆರಂಭಗೊಳ್ಳಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಭೀತಿ ಇದೆ. ಅದರಲ್ಲೂ ಮೊದಲ ದಿನದಾಟ ಸಂಪೂರ್ಣವಾಗಿ ಮಳೆಗಾಹುತಿ ಆಗಬಹುದು ಎಂದು ಸ್ವತಃ ಸೆಂಚೂರಿಯನ್ ಕ್ರೀಡಾಂಗಣದ ಪಿಚ್ ಕ್ಯುರೇಟರ್ ಬ್ರಿಯಾನ್ ಬ್ಲೊಯ್ ತಿಳಿಸಿದ್ದಾರೆ.
ಶನಿವಾರ ಪಿಚ್ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಇಲ್ಲಿ ತಾಪಮಾನ ಕುಸಿಯುತ್ತಲೇ ಇದೆ. ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಮೊದಲ ದಿನ ಪಂದ್ಯ ನಡೆಯುವ ಬಗ್ಗೆ ಅನುಮಾನವಿದೆ. 2 ಮತ್ತು 3ನೇ ದಿನಕ್ಕೂ ಮಳೆ ಅಡ್ಡಿಪಡಿಸಬಹುದು’ ಎಂದಿದ್ದಾರೆ.
ಪಂದ್ಯದ ಆರಂಭದಲ್ಲಿ ವೇಗಿಗಳು ಹೆಚ್ಚಿನ ನೆರವು ಪಡೆಯಬಹುದು. ಇದರಿಂದ ಬ್ಯಾಟರ್‌ಗಳಿಗೆ ಕಠಿಣ ಸವಾಲು ಎದುರಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಟೆಸ್ಟ್ ಸರಣಿ: ಗಾಯಕ್ವಾಡ್ ಬದಲು ಭಾರತಕ್ಕೆ ಈಶ್ವರನ್
ಮುಂಬೈ: ತಾರಾ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಗಾಯಗೊಂಡು ಹೊರಬಿದ್ದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಅಭಿಮನ್ಯು ಈಶ್ವರನ್ ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಋತುರಾಜ್ ಕೈಗೆ 2ನೇ ಏಕದಿನ ಪಂದ್ಯದ ವೇಳೆ ಗಾಯವಾಗಿತ್ತು. ಸದ್ಯ ಅವರು ಬೆಂಗಳೂರಿನ ಎನ್‌ಸಿಗೆ ಆಗಮಿಸಿದ್ದಾರೆ. ಹೀಗಾಗಿ ಈಶ್ವರನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಭಾರತದ ಗೆಲುವಿನ ಕ್ಷಣವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದ ಆಸೀಸ್ ನಾಯಕಿ..! ವಿಡಿಯೋ Viral
ಆದರೆ ಅವರು 2ನೇ ಟೆಸ್ಟ್‌ಗಷ್ಟೇ ತಂಡದ ಆಯ್ಕೆಗೆ ಲಭ್ಯವಿರಲಿದ್ದಾರೆ. ಸದ್ಯ ಅವರು ದ.ಆಫ್ರಿಕಾ ವಿರುದ್ಧ ಭಾರತ ‘ಎ’ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಮೊದಲ ಟೆಸ್ಟ್‌ಗೆ ಆಯ್ಕೆಗೆ ಲಭ್ಯವಿರುವುದಿಲ್ಲ. ಆರಂಭಿಕ ಟೆಸ್ಟ್ ಡಿ.26ರಿಂದ ಆರಂಭಗೊಳ್ಳಲಿದೆ.
ದಕ್ಷಿಣ ಆಫ್ರಿಕಾದ ಎಲ್ಗರ್ ಅಂ.ರಾ. ಕ್ರಿಕೆಟ್‌ಗೆ ನಿವೃತ್ತಿ
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಡೀನ್ ಎಲ್ಗರ್ ಭಾರತ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. 2012ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಎಲ್ಗರ್, ಇದುವರೆಗೂ 84 ಟೆಸ್ಟ್ ಪಂದ್ಯಗಳನ್ನಾಡಿದ್ದು, 13 ಶತಕ, 32 ಅರ್ಧಶತಕ ಸೇರಿದಂತೆ 37.28ರ ಸರಾಸರಿಯಲ್ಲಿ 5146 ರನ್ ಗಳಿಸಿದ್ದಾರೆ. 8 ಏಕದಿನ ಪಂದ್ಯಗಳನ್ನಾಡಿದ್ದಾರೆ.
ಋತುರಾಜ್ ಗಾಯಕ್ವಾಡ್ ಗಾಯಾಳುವಾಗಿದಕ್ಕೆ RCBಗೆ 30 ಲಕ್ಷ ನಷ್ಟ..! ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ
ಅಂ.ರಾ. ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಮೈದಾನದಲ್ಲೆ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದೇನೆ ಎಂದು ಡೀನ್ ಎಲ್ಗರ್ ತಿಳಿದ್ದಾರೆ. ಜ.3ರಿಂದ ಕೇಪ್‌ಟೌನ್‌ನಲ್ಲಿ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಟೆಸ್ಟ್ ಪಂದ್ಯವಾಡಲಿದೆ. ಅದು ಎಲ್ಗರ್ ಅವರ ಕೊನೆ ಪಂದ್ಯವಾಗಿರಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.