
ರಾಜ್‌ಕೋಟ್(ಜೂ.17): ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಹೋರಾಟದಿಂದ ಭಾರತ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಪಾರಾಗಿದೆ. ಸೌತ್ ಆಫ್ರಿಕಾ ವಿರುದ್ಧದ 4ನೇ ಹಾಗೂ ಮಹತ್ವದ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ನಷ್ಟಕ್ಕೆ 169 ರನ್ ಸಿಡಿಸಿದೆ.
4ನೇ ಪಂದ್ಯದಲ್ಲೂ ಟಾಸ್ ಸೋತ ಟೀಂ ಇಂಡಿಯಾ ಒಲ್ಲದ ಮನಸ್ಸಿನಿಂದ ಬ್ಯಾಟಿಂಗ್ ಇಳಿಯಿತು. ಜೊತೆಗೆ ಉತ್ತಮ ಆರಂಭವೂ ಸಿಗಲಿಲ್ಲ. ರುತುರಾಜ್ ಗಾಯಕ್ವಾಡ್ 5 ರನ್ ಸಿಡಿಸಿ ಔಟಾದರು. ಇತ್ತ ಇಶಾನ್ ಕಿಶನ್ ಹೋರಾಟದ ಸೂಚನೆ ನೀಡಿದರು. ಆದರೆ ಶ್ರೇಯಸ್ ಅಯ್ಯರ್ 4 ರನ್ ಸಿಡಿಸಿ ಔಟಾದರು.
6 ತಿಂಗಳಲ್ಲಿ ಟೀಂ ಇಂಡಿಯಾಗೆ 5 ನಾಯಕರು!
ಇಶಾನ್ ಕಿಶನ್ 27 ರನ್ ಸಿಡಿಸಿ ಔಟಾದರು. ನಾಯಕ ರಿಷಬ್ ಪಂತ್ ಆಟ 17 ರನ್‌ಗೆ ಅಂತ್ಯವಾಯಿತು. 81 ರನ್‌ಗಳಿಗೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡಿತು. ಆದರೆ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಹೋರಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು.
ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್‌ನಿಂದ ಅಲ್ಪಮೊತ್ತಕ್ಕೆ ಕುಸಿಯು ಭೀತಿಯಿಂದ ಪಾರಾಯಿತು. ಹಾರ್ದಿಕ್ ಪಾಂಡ್ಯ 31 ಎಸೆತದಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 46 ರನ್ ಸಿಡಿಸಿ ಔಟಾದರು. ಅಕ್ಸರ್ ಪಟೇಲ್ ಜೊತೆ ಹೋರಾಟ ಮುಂದುವರಿಸಿದ ದಿನೇಶ್ ಕಾರ್ತಿಕ್ ಭಾರತದ ಸ್ಪರ್ಧಾತ್ಮಕ ಮೊತ್ತ ಸಿಡಿಸುವಲ್ಲಿ ನೆರವಾದರು.
ದಿನೇಶ್ ಕಾರ್ತಿಕ್ 27 ಎಸೆತದಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 55 ರನ್ ಸಿಡಿಸಿ ಔಟಾದರು . ಈ ಮೂಲಕ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 169 ರನ್ ಸಿಡಿಸಿತು.
Ind vs SA: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ನಮ್ಮ ಮೆಟ್ರೋ..!
4ನೇ ಟಿ20 ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಕಾರಣ ಆರಂಭಿಕ 2 ಪಂದ್ಯದಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ 3ನೇ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡಿತ್ತು. ಈ ಮೂಲಕ ಸರಣಿಯನ್ನು ಜೀವಂತವಾಗಿರಿಸಿತು. ಇದೀಗ ನಾಲ್ಕನೇ ಪಂದ್ಯವೂ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಮುಂದಿನ ಪಂದ್ಯದಲ್ಲಿ ಸರಣಿ ಯಾರಿಗೆ ಅನ್ನೋದು ನಿರ್ಧಾರವಾಗಲಿದೆ. ಈಗಾಗಲೇ 2 ಪಂದ್ಯ ಗೆದ್ದಿರುವ ಸೌತ್ ಆಫ್ರಿಕಾ ಸರಣಿ ಕೈವಶ ಮಾಡಲು ಸಜ್ಜಾಗಿದೆ.
ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮುಗ್ಗರಿಸಿತು. ಭಾರತದ ಬೃಹತ್ ಮೊತ್ತ ಬೆನ್ನಟ್ಟಿದ ಸೌತ್ ಆಫ್ರಿಕಾ 7 ವಿಕೆಟ್ ಗೆಲುವು ಕಂಡಿತ್ತು. ಇತ್ತ ಎರಡನೇ ಪಂದ್ಯದಲ್ಲೂ ಭಾರತ ಮುಗ್ಗರಿಸಿತು. ಬ್ಯಾಟಿಂಗ್‌ನಲ್ಲಿ ಎಡವಿದ ಭಾರತ ಸಾಧಾರಣ ಮೊತ್ತ ಪೇರಿಸಿತ್ತು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ 4 ವಿಕೆಟ್ ಗೆಲುವು ಕಂಡಿತು. ಆದರೆ ಮೂರನೇ ಪಂದ್ಯದಲ್ಲಿ ಭಾರತ ಕಮ್‌ಬ್ಯಾಕ್ ಮಾಡಿತು. ಈ ಮೂಲಕ 48 ರನ್ ಗೆಲುವು ದಾಖಲಿಸಿತು. ಸರಣಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.