Ind vs SA, Boxing Day Test: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

Suvarna News   | Asianet News
Published : Dec 26, 2021, 01:06 PM ISTUpdated : Dec 26, 2021, 01:12 PM IST
Ind vs SA, Boxing Day Test: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

ಸಾರಾಂಶ

* ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ಗೆ ಸೆಂಚೂರಿಯನ್ ಆತಿಥ್ಯ * ದಕ್ಷಿಣ ಆಫ್ರಿಕಾ ವಿರುದ್ದ 3 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿರುವ ಭಾರತ * ಸರಣಿಯಲ್ಲಿ ಶುಭಾರಂಭ ಮಾಡುವ ಲೆಕ್ಕಾಚಾರದಲ್ಲಿದೆ ವಿರಾಟ್ ಕೊಹ್ಲಿ

ಸೆಂಚೂರಿಯನ್‌(ಡಿ.26): ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಮೂರು ಪಂದ್ಯಗಳ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯ (Freedom Trophy Test Series) ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಉಭಯ ತಂಡಗಳ ನಡುವಿನ ಈ ಹೈವೋಲ್ಟೇಜ್ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ಸೂಪರ್ ಸ್ಪೋರ್ಟ್‌ ಪಾರ್ಕ್‌ ಆತಿಥ್ಯವನ್ನು ವಹಿಸಿದೆ. ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡುವ ಲೆಕ್ಕಾಚಾರದೊಂದಿಗೆ ಉಭಯ ತಂಡಗಳು ಕಣಕ್ಕಿಳಿದಿವೆ.

ನಿರೀಕ್ಷೆಯಂತೆಯೇ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಗಳಾಗಿದ್ದು, ಶ್ರೇಯಸ್ ಅಯ್ಯರ್ ಅವರನ್ನು ಹಿಂದಿಕ್ಕಿ ಮತ್ತೊಮ್ಮೆ ಅಜಿಂಕ್ಯ ರಹಾನೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ಆರು ಬ್ಯಾಟರ್‌ಗಳು ಹಾಗೂ ಐವರು ಬೌಲರ್‌ಗಳೊಂದಿಗೆ ಕಣಕ್ಕಿಳಿದಿದೆ. 

ಫಾರ್ಮ್‌ಗೆ ಮರಳುತ್ತಾರಾ ಕೊಹ್ಲಿ-ಪೂಜಾರ: ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಿಲ್ಲ. ಹೀಗಾಗಿ ವರ್ಷಾಂತ್ಯದ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿ ಫಾರ್ಮ್‌ಗೆ ಮರಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ಇನ್ನು ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಕೂಡಾ ರನ್‌ ಗಳಿಸಲು ಪರದಾಡುತ್ತಿದ್ದು, ಹರಿಣಗಳ ನಾಡಿನಲ್ಲಿ ಫಾರ್ಮ್‌ಗೆ ಮರಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. 

ಮೊದಲೆರೆಡು ದಿನ ಮಳೆ ಮುನ್ಸೂಚನೆ

ಸೆಂಚೂರಿಯನ್‌ನಲ್ಲಿ ಮೊದಲೆರಡು ದಿನ ಮಳೆ ಮುನ್ಸೂಚನೆ ಇದ್ದು, ಕೊನೆ 3 ದಿನಕ್ಕೆ ವಾತಾವರಣ ತಿಳಿಯಾಗಿರಲಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ. ಮೊದಲೆರಡು ದಿನದಾಟದಲ್ಲಿ ಕೆಲ ಓವರ್‌ಗಳ ಕಡಿತಗೊಳ್ಳುವ ಸಾಧ್ಯತೆ ಇದೆ.

Ind vs SA Boxing Day Test: ದಕ್ಷಿಣ ಆಫ್ರಿಕಾ ಭದ್ರಕೋಟೆ ಭೇದಿಸುತ್ತಾ ಟೀಂ ಇಂಡಿಯಾ?

ದಕ್ಷಿಣ ಆಫ್ರಿಕಾದಲ್ಲಷ್ಟೇ ಭಾರತ ಇದುವರೆಗೂ ಟೆಸ್ಟ್ ಸರಣಿ ಗೆದ್ದಿಲ್ಲ!

ಭಾರತ ತಂಡ ದಕ್ಷಿಣ ಆಫ್ರಿಕಾದಲ್ಲಿ ಮಾತ್ರ ಟೆಸ್ಟ್‌ ಸರಣಿ ಗೆದ್ದಿಲ್ಲ. 1992ರಿಂದ ಈ ವರೆಗೂ ಒಟ್ಟು 7 ಸರಣಿಗಳನ್ನು ಆಡಿದ್ದು, 6ರಲ್ಲಿ ಸೋಲುಂಡಿದೆ. 1 ಸರಣಿ(2010-11ರಲ್ಲಿ)ಯನ್ನು ಡ್ರಾ ಮಾಡಿಕೊಂಡಿತ್ತು. ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಭಾರತ ಕೆಲ ಐತಿಹಾಸಿಕ ಸರಣಿ ಗೆಲ್ಲುವುಗಳನ್ನು ಕಂಡಿದ್ದು ದಕ್ಷಿಣ ಆಫ್ರಿಕಾದಲ್ಲಿ ಚೊಚ್ಚಲ ಸರಣಿ ಗೆಲುವು ಸಾಧಿಸುವ ತವಕದಲ್ಲಿದೆ. ಟೆಸ್ಟ್‌ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಉಳಿಸಿಕೊಳ್ಳಬೇಕಿದ್ದರೆ, ಟೀಂ ಇಂಡಿಯಾ ಈ ಟೆಸ್ಟ್‌ ಸರಣಿಯನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. 

2014ರಿಂದ ಸೆಂಚೂರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ಟೆಸ್ಟ್‌ ಪಂದ್ಯ ಸೋತಿಲ್ಲ!

ಸೆಂಚೂರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್ ಮೈದಾನವು ದಕ್ಷಿಣ ಆಫ್ರಿಕಾ ತಂಡದ ಭದ್ರಕೋಟೆ. ತಂಡ ಇಲ್ಲಿ 2014ರಿಂದ ಒಂದೂ ಟೆಸ್ಟ್‌ ಸೋತಿಲ್ಲ. ಅಲ್ಲದೆ ಇಲ್ಲಿ ಆಡಿರುವ 26 ಟೆಸ್ಟ್‌ಗಳಲ್ಲಿ 21ರಲ್ಲಿ ಗೆದ್ದಿದೆ. ಕೇವಲ 2ರಲ್ಲಿ ಸೋತಿದ್ದು 3 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಭಾರತ ಇಲ್ಲಿ 2010, 2018ರಲ್ಲಿ ಸೋತಿತ್ತು. ಹೀಗಾಗಿ ಮೊದಲ ಟೆಸ್ಟ್ ಪಂದ್ಯವು ಭಾರತದ ಪಾಲಿಗೆ ಅಗ್ನಿ ಪರೀಕ್ಷೆ ಎನಿಸಲಿದೆ.

ಉಭಯ ತಂಡಗಳು ಹೀಗಿವೆ ನೋಡಿ:

ಭಾರತ: ಕೆ.ಎಲ್‌.ರಾಹುಲ್‌, ಮಯಾಂಕ್‌ ಅಗರ್‌ವಾಲ್‌, ಚೇತೇಶ್ವರ್‌ ಪೂಜಾರ, ವಿರಾಟ್‌ ಕೊಹ್ಲಿ(ನಾಯಕ), ರಹಾನೆ, ರಿಷಭ್‌ ಪಂತ್‌, ಆರ್‌.ಅಶ್ವಿನ್‌, ಶಾರ್ದೂಲ್‌ ಠಾಕೂರ್‌, ಮೊಹಮದ್‌ ಶಮಿ, ಮೊಹಮ್ಮದ್ ಸಿರಾಜ್ ಜಸ್ಪ್ರೀತ್ ಬುಮ್ರಾ.

ದ.ಆಫ್ರಿಕಾ:  
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!