Ind vs SA: ಮೊದಲ ಟಿ20 ಪಂದ್ಯದ ಟಿಕೆಟ್ಸ್‌ ಸೋಲ್ಡ್‌ ಔಟ್‌..!

By Naveen KodaseFirst Published Jun 7, 2022, 5:14 PM IST
Highlights

* ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಗೆ ಕ್ಷಣಗಣನೆ

* ಜೂನ್ 09ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭ

* ದೆಹಲಿಯಲ್ಲಿ ನಡೆಯಲಿರುವ ಪಂದ್ಯದ ಬಹುತೇಕ ಟಿಕೆಟ್‌ಗಳು ಸೋಲ್ಡೌಟ್

ನವದೆಹಲಿ(ಜೂ.07): ಕೋವಿಡ್ ಅಟ್ಟಹಾಸ ನಿಧಾನವಾಗಿ ಕಡಿಮೆಯಾದ ಬೆನ್ನಲ್ಲೇ ಮೈದಾನಗಳತ್ತ ಪ್ರೇಕ್ಷಕರ ಆಗಮನವಾಗತೊಡಗಿದೆ. ಭಾರತದಲ್ಲೇ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2022) ಟೂರ್ನಿ ಯಶಸ್ವಿಯಾದ ಬೆನ್ನಲ್ಲೇ ಇದೀಗ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೂನ್ 09ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ (Arun Jaitly Stadium) ನಡೆಯಲಿರುವ ಮೊದಲ ಟಿ20 ಪಂದ್ಯದ ಶೇ.94% ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ ಎಂದು ವರದಿಯಾಗಿದೆ.

ಹೌದು, ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿಗೆ 100% ಪ್ರೇಕ್ಷಕರು ಮೈದಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಪಂದ್ಯಕ್ಕೆ 35,000 ಪ್ರೇಕ್ಷಕರು ಮೈದಾನಕ್ಕೆ ಬರಲು ಅವಕಾಶವಿದೆ. 2019ರ ಬಳಿಕ ಮೊದಲ ಬಾರಿಗೆ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಮೊದಲ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿಯೇ ಕ್ರಿಕೆಟ್ ಅಭಿಮಾನಿಗಳು ನಾ ಮುಂದೆ, ತಾ ಮುಂದೆ ಎನ್ನುವಂತೆ ಟಿಕೆಟ್ ಖರೀದಿಸಲು ಮುಗಿಬಿದ್ದಿದ್ದಾರೆ. 

Latest Videos

ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ದೃಷ್ಟಿಯಿಂದ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಭಾರತ ತಂಡದ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ. ಹಿರಿಯ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಕೆ ಎಲ್ ರಾಹುಲ್ ಅವರ ನೇತೃತ್ವದ ಯುವ ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡವು ಯಾವ ರೀತಿ ಪ್ರದರ್ಶನ ತೋರಲಿದೆ ಎನ್ನುವ ಕುತೂಹಲ ಜೋರಾಗಿದೆ. ಇದೇ ಮೊದಲ ಬಾರಿಗೆ ಯುವ ವೇಗಿಗಳಾದ ಆರ್ಶದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ (Umran Malik) ಭಾರತ ಕ್ರಿಕೆಟ್ ತಂಡದಲ್ಲಿ (Indian Cricket Team) ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

Ind vs SA: ಟಿ20 ಸರಣಿಗಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ ನೋಡಿ

1st T20I: ಜೂನ್ 9 (ಡೆಲ್ಲಿ)
2nd T20I: ಜೂನ್ 12 (ಕಟಕ್)
3rd T20I: ಜೂನ್ 14 (ವಿಶಾಖಪಟ್ಟಣಂ)
4th T20I: ಜೂನ್ 17 (ರಾಜ್‌ಕೋಟ್)
5th T20I: ಜೂನ್ 19 (ಬೆಂಗಳೂರು)

ಟಿ20 ಸರಣಿಗೆ ಉಭಯ ತಂಡಗಳು ಹೀಗಿವೆ ನೋಡಿ

ದಕ್ಷಿಣ ಆಫ್ರಿಕಾ ತಂಡ: ತೆಂಬಾ ಬವುಮಾ(ನಾಯಕ), ಡಿ ಕಾಕ್‌, ಹೆಂಡ್ರಿಕ್ಸ್‌, ಕ್ಲಾಸೆನ್‌, ಮಹಾರಾಜ್‌, ಮಾರ್ಕ್ರಮ್‌, ಮಿಲ್ಲರ್‌, ಎನ್‌ಗಿಡಿ, ನೋಕಿಯಾ,ಪಾರ್ನೆಲ್‌, ಪ್ರಿಟೋರಿಯಸ್‌, ರಬಾಡ, ಶಮ್ಸಿ, ಸ್ಟಬ್ಸ್‌, ಡುಸ್ಸೆನ್‌, ಯಾನ್ಸನ್‌.

ಟಿಂ ಇಂಡಿಯಾ: ಕೆ ಎಲ್ ರಾಹುಲ್(ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶಾನ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್


 

click me!