Ind vs SA: ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದು ಭರ್ಜರಿ ಸ್ಟೆಪ್ಸ್ ಹಾಕಿದ ಟೀಂ ಇಂಡಿಯಾ ಕ್ರಿಕೆಟರ್ಸ್..!

Suvarna News   | Asianet News
Published : Dec 31, 2021, 12:34 PM IST
Ind vs SA: ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದು ಭರ್ಜರಿ ಸ್ಟೆಪ್ಸ್ ಹಾಕಿದ ಟೀಂ ಇಂಡಿಯಾ ಕ್ರಿಕೆಟರ್ಸ್..!

ಸಾರಾಂಶ

* ಸೆಂಚೂರಿಯನ್‌ ಟೆಸ್ಟ್‌ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟೀಂ ಇಂಡಿಯಾ * ಗೆಲುವಿನ ಖುಷಿಯನ್ನು ವಿಭಿನ್ನವಾಗಿ ಆಚರಿಸಿದ ರವಿಚಂದ್ರನ್‌ ಅಶ್ವಿನ್‌ * ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾಗೆ 113 ರನ್‌ಗಳ ಜಯ

ಸೆಂಚೂರಿಯನ್‌(ಡಿ.31): ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ(Team India), ದಕ್ಷಿಣ ಆಫ್ರಿಕಾ ವಿರುದ್ದದ ಬಾಕ್ಸಿಂಗ್ ಡೇ ಟೆಸ್ಟ್ (Boxing Day Test) ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ಸೂಪರ್‌ ಸ್ಪೋರ್ಟ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಹರಿಣಗಳ ಮೇಲೆ ಸವಾರಿ ಮಾಡಿದ ಟೀಂ ಇಂಡಿಯಾ 113 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಸೆಂಚೂರಿಯನ್‌ನಲ್ಲಿ ಟೆಸ್ಟ್ ಪಂದ್ಯ ಜಯಿಸಿದ ಏಷ್ಯಾದ ಮೊದಲ ತಂಡ ಎನ್ನುವ ದಾಖಲೆ ಟೀಂ ಇಂಡಿಯಾ ಪಾಲಾಗಿದೆ.

ಪಂದ್ಯ ಮುಕ್ತಾಯದ ಬಳಿಕ ಭಾರತೀಯ ಆಟಗಾರರು ಭರ್ಜರಿಯಾಗಿಯೇ ಸಂಭ್ರಮವನ್ನು ಆಚರಿಸಿದ್ದಾರೆ. ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ (Ravichandran Ashwin) ಸಹ ಆಟಗಾರರೊಂದಿಗೆ ಡ್ಯಾನ್ಸ್‌ ಮಾಡುವ ಮೂಲಕ ಸೆಂಚೂರಿಯನ್ ಟೆಸ್ಟ್‌ ಗೆಲುವನ್ನು ಮತ್ತಷ್ಟು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ಸೆಂಚೂರಿಯನ್‌ನಲ್ಲಿ ಟೀಂ ಇಂಡಿಯಾ ಆಟಗಾರರ ಪ್ರದರ್ಶನಕ್ಕೆ ಜಗತ್ತಿನಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮೊದಲ ಟೆಸ್ಟ್‌ ಪಂದ್ಯದ ಗೆಲುವಿನೊಂದಿಗೆ 3 ಪಂದ್ಯಗಳ ಫ್ರೀಡಂ ಟ್ರೋಫಿ ಸರಣಿಯಲ್ಲಿ ಭಾರತ ತಂಡವು 1-0 ಮುನ್ನಡೆ ಸಾಧಿಸಿದೆ. ಪ್ರತಿಪಂದ್ಯದ ಗೆಲುವಿನ ಬಳಿಕ ಎಲ್ಲಾ ಆಟಗಾರರು ಗೆಲುವಿನ ಸುಂದರ ಕ್ಷಣಗಳ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ. ಆದರೆ ಇದೀಗ ರವಿಚಂದ್ರನ್ ಅಶ್ವಿನ್‌ ಒಂದು ಹೆಜ್ಜೆ ಮುಂದೆ ಹೋಗಿ, ಸೆಂಚೂರಿಯನ್ ಗೆಲುವನ್ನು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. 

Ind vs SA: ಬಾಕ್ಸಿಂಗ್ ಡೇ ಟೆಸ್ಟ್ ಗೆದ್ದು ಹಲವು ದಾಖಲೆ ಬರೆದ ಟೀಂ ಇಂಡಿಯಾ..!

ಅನುಭವಿ ಆಫ್‌ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್‌ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಒಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮೊದಲ ಟೆಸ್ಟ್ ಗೆಲುವಿನ ಬಳಿಕ ಸಹ ಆಟಗಾರರೊಂದಿಗೆ ಬಿಂದಾಸ್ ಸ್ಟೆಫ್ ಹಾಕಿದ್ದಾರೆ. ಟೀಂ ಇಂಡಿಯಾ ಸಹ ಆಟಗಾರರಾದ ಚೇತೇಶ್ವರ್ ಪೂಜಾರ(Cheteshwar Pujara), ಮೊಹಮ್ಮದ್ ಸಿರಾಜ್ ಹಾಗೂ ಸ್ಥಳೀಯರ ಜತೆ ರವಿಚಂದ್ರನ್‌ ಅಶ್ವಿನ್‌, ಮ್ಯೂಸಿಕ್‌ಗೆ ಹೆಜ್ಜೆ ಹಾಕಿದ್ದಾರೆ.

ಸಾಂಪ್ರದಾಯಿಕವಾಗಿ ಬಂದಂತಹ ಪಂದ್ಯ ಮುಕ್ತಾಯದ ಬಳಿಕ ಫೋಟೋ ಕ್ಲಿಕ್ಕಿಸಿಕೊಳ್ಳುವುದು ತುಂಬಾ ಹಳೆಯದಾಯಿತು. ಹೀಗಾಗಿ ಚೇತೇಶ್ವರ್ ಪೂಜಾರ ಅವರು ಮೊದಲ ಬಾರಿಗೆ ಮೊಹಮ್ಮದ್ ಸಿರಾಜ್(Mohammed Siraj) ಜತೆ ಡ್ಯಾನ್ಸ್ ಮಾಡುವ ಮೂಲಕ ಈ ಗೆಲುವನ್ನು ಸ್ಮರಣೀಯವಾಗಿಸಿಕೊಂಡರು. ಎಂತಹ ಅದ್ಭುತ ಗೆಲುವಿದು ಎಂದು ಅಶ್ವಿನ್‌ ವಿಡಿಯೋ ಜತೆಗೆ ಬರೆದುಕೊಂಡಿದ್ದಾರೆ. 

ಭಾರತ ನೀಡಿದ್ದ 305 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆತಿಥೇಯ ದಕ್ಷಿಣ ಆಫ್ರಿಕಾ ತಂಡಕ್ಕೆ ವೇಗಿಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು. ಎರಡನೇ ಇನಿಂಗ್ಸ್‌ನಲ್ಲಿ ಹರಿಣಗಳ ತಂಡದ ನಾಯಕ ಡೀನ್ ಎಲ್ಗಾರ್(77) ಕೊಂಚ ಪ್ರತಿರೋಧ ತೋರಿದರು. ಇದನ್ನು ಹೊರತುಪಡಿಸಿ ಉಳಿದ್ಯಾವ ದಕ್ಷಿಣ ಆಫ್ರಿಕಾದ ಬ್ಯಾಟರ್‌ಗಳು ಸಹ ಜವಾಬ್ದಾರಿಯುತ ಪ್ರದರ್ಶನ ತೋರಲಿಲ್ಲ. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡವು 191 ರನ್‌ಗಳಿಗೆ ಸರ್ವಪತನ ಕಂಡಿತು.

ಭಾರತ ಪರ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ತಲಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಹಾಗೂ ರವಿಚಂದ್ರನ್ ಅಶ್ವಿನ್‌ ತಲಾ 2 ವಿಕೆಟ್‌ ಪಡೆದರು. ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿ ಮಿಂಚಿದ ಕೆ.ಎಲ್‌. ರಾಹುಲ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?