
ಸೌತ್ ಆಫ್ರಿಕಾ(ಸೆ.6): ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಸರಣಿ ಆರಂಭಗೊಳ್ಳಲಿದೆ. ಟಿ20 ಹಾಗೂ ಏಕದಿನ ಸರಣಿಗಾಗಿ ಸೌತ್ ಆಫ್ರಿಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ. ಭಾರತ ವಿರುದ್ಧದ ಸರಣಿ ಹಾಗೂ ಟಿ20 ವಿಶ್ವಕಪ್ ಟೂರ್ನಿಗೆ ಸೌತ್ ಆಫ್ರಿಕಾ ತಂಡ ಪ್ರಕಟಿಸಿದೆ. ಸೆಪ್ಟೆಂಬರ್ 28 ರಿಂದ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ಟೂರ್ನಿ ಆರಂಭಗೊಳ್ಳಲಿದೆ. ಅಕ್ಟೋಬರ್ 6 ರಿಂದ ಏಕದಿನ ಸರಣಿ ನಡೆಯಲಿದೆ. 3 ಟಿ20 ಹಾಗೂ 3 ಏಕದಿನ ಪಂದ್ಯಕ್ಕೆ ಸೌತ್ ಆಫ್ರಿಕಾ ತಂಡ ಪ್ರಕಟಗೊಂಡಿದೆ. ಭಾರತ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ತಂಡವನ್ನೇ ಟಿ20 ವಿಶ್ವಕಪ್ ಟೂರ್ನಿಗೂ ಉಳಿಸಿಕೊಳ್ಳಲಾಗಿದೆ. ಈ ಮಹತ್ವದ ಟೂರ್ನಿಗೆ ಸೌತ್ ಆಫ್ರಿಕಾ ಪ್ರಮುಖ ಬ್ಯಾಟ್ಸ್‌ಮನ್ ರಸಿ ವಾಂಡರ್ ಡಸೆನ್ ಹೊರಗುಳಿದಿದ್ದಾರೆ. ಜೂನ್ ತಿಂಗಳಲ್ಲಿ ಬಾರತ ವಿರುದ್ದದ ಸರಣಿಯಲ್ಲಿ ರಸಿ ಇಂಜುರಿಗೆ ತುತ್ತಾಗಿದ್ದರು. ಗಾಯದಿಂದ ಚೇತರಿಸಿಕೊಳ್ಳದ ರಸಿ ಭಾರತ ವಿರುದ್ಧದ ಹಾಗೂ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.
15 ಸದಸ್ಯರ ಸೌತ್ ಆಫ್ರಿಕಾ ತಂಡ(South Affrica Squad) ಪ್ರಕಟಗೊಂಡಿದೆ. ಟಿ20 ಹಾಗೂ ಏಕದಿನ(T20 And ODI) ಮಾದರಿಯಲ್ಲಿ ತೆಂಬಾ ಬುವುಮಾ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ವಿರುದ್ದದ ಸರಣಿ(India Tour of South Africa) ಹಾಗೂ ವಿಶ್ವಕಪ್ ಟೂರ್ನಿಗೆ(ICC T20 World Cup) ಪ್ರಕಟಿಸಿದ ತಂಡದ ವಿವರ ಇಲ್ಲಿದೆ.
Team India ಟೆಸ್ಟ್ ನಾಯಕತ್ವ ಬಿಟ್ಟಾಗ ಧೋನಿ ಬಿಟ್ಟು ಯಾರೂ ಮೆಸೇಜ್ ಮಾಡ್ಲಿಲ್ಲ..!
ಭಾರತ ವಿರುದ್ಧದ ಟಿ20 ಹಾಗೂ ಟಿ20 ವಿಶ್ವಕಪ್ ಟೂರ್ನಿಗೆ ಸೌತ್ ಆಫ್ರಿಕಾ ತಂಡ
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಾಗಿಸೊ ರಬಾಡ, ಟಬ್ರಾ ಸ್ಟೌಬ್ಸ್, ರಿಲೀ ಟ್ರಿಸ್ಟಾನ್ ಸ್ಸೌಬ್ಸ್,
ಭಾರತ ವಿರುದ್ಧದ ಏಕದಿನ ಸರಣಿಗೆ ಸೌತ್ ಆಫ್ರಿಕಾ ತಂಡ
ಟೆಂಬಾ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಜನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಆಂಡಿಲ್ ಫೆಲುಕ್ವಾಯೋ, ಡ್ವೈನ್ ಪ್ರಿಟೋರಿಯಸ್, ಕಾಗಿಸೋ ರಬಾಡ, ತಬ್ರೈಜ್ ಶಮ್ಸಿ
ಕ್ರಿಕೆಟಿಗ ಆರ್ಶದೀಪ್ ಸಿಂಗ್ ಕುರಿತು ಸುಳ್ಳು ಮಾಹಿತಿ ತುಂಬಿದ ವಿಕಿಪೀಡಿಯಾಗೆ ಕೇಂದ್ರದಿಂದ ಸಮನ್ಸ್ ಜಾರಿ!
ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ತಲಾ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿ ಅಕ್ಟೋಬರ್ 11 ರಂದು ಅಂತ್ಯಗೊಳ್ಳಲಿದೆ. ಬಳಿಕ ಸೌತ್ ಆಫ್ರಿಕಾ ಹಾಗೂ ಭಾರತ ತಂಡ ನೇರವಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿದೆ. ಕಾರಣ ಟಿ20 ವಿಶ್ವಕಪ್ ಟೂರ್ನಿಗೆ ಕೌಂಟ್‌ಡೌನ್ ಆರಂಭಗೊಂಡಿದೆ. ಅಕ್ಟೋಬರ್ 16 ರಿಂದ ಟೂರ್ನಿ ಆರಂಭಗೊಳ್ಳುತ್ತಿದೆ. ಈ ಬಾರಿ ಆಸ್ಟ್ರೇಲಿಯಾ ಆತಿಥ್ಯವಹಿಸಿದೆ. ಇದೀಗ ಈ ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಗೆ ಸೌತ್ ಆಫ್ರಿಕಾ ತಂಡ ಪ್ರಕಟಿಸಿದೆ. 15 ಸದಸ್ಯರ ತಂಡ ಪ್ರಕಟಿಸಲಾಗಿದ್ದು, ತೆಂಬಾ ಬವುಮಾ ತಂಡ ಮುನ್ನಡೆಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.