Ind vs SL: ಲಂಕಾ ಎದುರು ಆಕರ್ಷಕ ಶತಕ ಚಚ್ಚಿದ ರವೀಂದ್ರ ಜಡೇಜಾ

Suvarna News   | Asianet News
Published : Mar 05, 2022, 11:41 AM ISTUpdated : Mar 05, 2022, 11:44 AM IST
Ind vs SL: ಲಂಕಾ ಎದುರು ಆಕರ್ಷಕ ಶತಕ ಚಚ್ಚಿದ ರವೀಂದ್ರ ಜಡೇಜಾ

ಸಾರಾಂಶ

* ವೃತ್ತಿಜೀವನದ ಎರಡನೇ ಟೆಸ್ಟ್ ಶತಕ ಬಾರಿಸಿದ ರವೀಂದ್ರ ಜಡೇಜಾ * ಲಂಕಾ ಎದುರು ಬೃಹತ್ ಮೊತ್ತದತ್ತ ಟೀಂ ಇಂಡಿಯಾ ದಾಪುಗಾಲು * ಅಶ್ವಿನ್‌ ಜತೆ ಆಕರ್ಷಕ ಶತಕದ ಜತೆಯಾಟ ನಿಭಾಯಿಸಿದ ಜಡ್ಡು

ಮೊಹಾಲಿ(ಮಾ.05): ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವಿನ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಆಲ್ರೌಂಡರ್‌ ರವೀಂದ್ರ ಜಡೇಜಾ (Ravindra Jadeja) ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ನೀಡಿರುವ ಅನುಭವಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್‌ (Ravichandran Ashwin) ಸಮಯೋಚಿತ ಅರ್ಧಶತಕ ಬಾರಿಸಿದ್ದು, ಟೀಂ ಇಂಡಿಯಾ (Team India) ಇದೀಗ ಬೃಹತ್ ಮೊತ್ತದತ್ತ ದಾಪುಗಾಲಿಡಲಾರಂಭಿಸಿದೆ. ಎರಡನೇ ದಿನದಾಟದ ಲಂಚ್‌ ಬ್ರೇಕ್ ವೇಳೆಗೆ ಟೀಂ ಇಂಡಿಯಾ 7 ವಿಕೆಟ್ ಕಳೆದುಕೊಂಡು 468 ರನ್ ಬಾರಿಸಿದೆ. ಶತಕ ಬಾರಿಸಿದ ಜಡೇಜಾ ಕ್ರೀಸ್ ಕಾಯ್ದುಕೊಂಡಿದ್ದಾರೆ. ಎರಡನೇ ದಿನದಾಟದ ಮೊದಲ ಸೆಷನ್‌ನಲ್ಲಿ ಭಾರತ ಕ್ರಿಕೆಟ್ ತಂಡವು ಬರೋಬ್ಬರಿ 111 ರನ್ ಕಲೆಹಾಕಿದೆ.

ಇಲ್ಲಿನ ಪಂಜಾಬ್‌ ಕ್ರಿಕೆಟ್ ಸಂಸ್ಥೆಯ ಐ.ಎಸ್. ಬಿಂದ್ರಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ದಿನದಾಟದಂತ್ಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 357 ರನ್ ಬಾರಿಸಿದ್ದ ಟೀಂ ಇಂಡಿಯಾ, ಎರಡನೇ ದಿನದಾಟವನ್ನು ಭರ್ಜರಿಯಾಗಿಯೇ ಆರಂಭಿಸಿದೆ. ಏಳನೇ ವಿಕೆಟ್‌ಗೆ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಜೋಡಿ ಶತಕದ ಜತೆಯಾಟ ನಿಭಾಯಿಸುವ ಮೂಲಕ ತಂಡದ ಮೊತ್ತವನ್ನು 460ರ ಗಡಿ ದಾಟಿಸಿದೆ. ಮೊದಲ ದಿನದಾಟದಲ್ಲಿ 350+ ರನ್ ಬಾರಿಸಿದ್ದ ಭಾರತ, ಎರಡನೇ ದಿನ ಮತ್ತಷ್ಟು ಚುರುಕಿನ ಜತೆಯಾಟವಾಡುವ ಮೂಲಕ ಪಂದ್ಯದ ಮೇಲೆ ಭಾರತ ತನ್ನ ಹಿಡಿತವನ್ನು ಮತ್ತಷ್ಟು ಬಿಗಿ ಮಾಡಿಕೊಂಡಿದೆ. ಆರನೇ ವಿಕೆಟ್‌ಗೆ ಜಡ್ಡು-ಅಶ್ವಿನ್ ಜೋಡಿ ಕೇವಲ 138 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತದ ಜತೆಯಾಟ ನಿಭಾಯಿಸಿತು. 7ನೇ ವಿಕೆಟ್‌ಗೆ 130 ರನ್‌ಗಳ ಜತೆಯಾಟವಾಡುವ ಮೂಲಕ ಲಂಕಾ ವಿರುದ್ದ 7ನೇ ವಿಕೆಟ್‌ಗೆ ಗರಿಷ್ಠ ರನ್‌ಗಳ ಜತೆಯಾಟ ನಿಭಾಯಿಸಿದ ಸಾಧನೆ ಮಾಡಿತು. 

ವೃತ್ತಿಜೀವನದ ಎರಡನೇ ಟೆಸ್ಟ್ ಶತಕ ಚಚ್ಚಿದ ಜಡೇಜಾ: ಫಿಟ್ನೆಸ್ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ತಾರಾ ಆಲ್ರೌಂಡರ್ ರವೀಂದ್ರ ಜಡೇಜಾ, ಇದೀಗ ಶತಕ ಸಿಡಿಸುವ ಮೂಲಕ ಭರ್ಜರಿಯಾಗಿಯೇ ಕಮ್‌ಬ್ಯಾಕ್‌ ಮಾಡಿದ್ದಾರೆ. ಲಂಕಾ ಬೌಲರ್‌ಗಳ ಮೇಲೆ ಸವಾರಿ ಮಾಡಿದ ರವೀಂದ್ರ ಜಡೇಜಾ ಒಟ್ಟು 160 ಎಸೆತಗಳನ್ನು ಎದುರಿಸಿ 10 ಬೌಂಡರಿ ಸಹಿತ ವೃತ್ತಿಜೀವನದ ಎರಡನೇ ಶತಕ ಸಿಡಿಸಿ ಸಂಭ್ರಮಿಸಿದರು. ಅವಿಚಂದ್ರನ್ ಅಶ್ವಿನ್‌ ಜತೆ ಆಕರ್ಷಕ ಜತೆಯಾಟ ನಿಭಾಯಿಸಿದ ಜಡೇಜಾ, ಅವಕಾಶ ಸಿಕ್ಕಾಗಲೆಲ್ಲಾ ಬೌಂಡರಿ ಬಾರಿಸುತ್ತಾ ತಂಡದ ರನ್‌ ಗಳಿಕೆಗೂ ಚುರುಕು ಮುಟ್ಟಿಸಿದರು. 

Ind vs SL: ಶತಕದ ಹೊಸ್ತಿಲಲ್ಲಿ ಮುಗ್ಗರಿಸಿದ ರಿಷಭ್ ಪಂತ್, ಬೃಹತ್ ಮೊತ್ತದತ್ತ ಭಾರತ

12ನೇ ಅರ್ಧಶತಕ ಪೂರೈಸಿದ ಅಶ್ವಿನ್‌: ರಿಷಭ್ ಪಂತ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದಿರುವ ಅಶ್ವಿನ್‌ ಚುರುಕಿನ ಬ್ಯಾಟಿಂಗ್ ಮೂಲಕ ಆಕರ್ಷಕ ಅರ್ಧಶತಕ ಬಾರಿಸಿ ತಂಡಕ್ಕೆ ನೆರವಾಗಿದ್ದಾರೆ. ಕೇವಲ 67 ಎಸೆತಗಳನ್ನು ಎದುರಿಸಿದ ಅಶ್ವಿನ್ 6 ಬೌಂಡರಿ ಸಹಿತ ವೃತ್ತಿಜೀವನದ 12ನೇ ಟೆಸ್ಟ್ ಅರ್ಧಶತಕ ಬಾರಿಸಿ ಸಂಭ್ರಮಿಸಿದ್ದಾರೆ. ಜಡೇಜಾ ಜತೆ ಸಮಯೋಚಿತ ಶತಕದ ಜತೆಯಾಟ ನಿಭಾಯಿಸುವುದರ ಜತೆಗೆ ವೈಯುಕ್ತಿಕ ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಅಂತಿಮವಾಗಿ ರವಿಚಂದ್ರನ್ ಅಶ್ವಿನ್ 82 ಎಸೆತಗಳನ್ನು ಎದುರಿಸಿ 8 ಬೌಂಡರಿ ಸಹಿತ 61 ರನ್‌ ಬಾರಿಸಿ ಸುರಂಗ ಲಕ್ಮಲ್‌ಗೆ ವಿಕೆಟ್‌ ಒಪ್ಪಿಸಿದರು.

ಸಂಕ್ಷಿಪ್ತ ಸ್ಕೋರ್

ಭಾರತ: 468/7
ರವೀಂದ್ರ ಜಡೇಜಾ: 102*
ರಿಷಭ್ ಪಂತ್: 96

ಸುರಂಗ ಲಕ್ಮಲ್: 86-2

(* ಎರಡನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ)

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?