
ಮೊಹಾಲಿ(ಮಾ.04): ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಅಕ್ಷರಶಃ ಅಬ್ಬರಿಸಿದ್ದಾರೆ. ಲಂಕಾ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಡೆಲ್ಲಿ ಮೂಲದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕೇವಲ 4 ರನ್‌ಗಳ ಅಂತರದಲ್ಲಿ 5ನೇ ಟೆಸ್ಟ್ ಶತಕ ಬಾರಿಸುವ ಅವಕಾಶವನ್ನು ಕೈಚೆಲ್ಲಿದರು. ಮೊಹಾಲಿ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯದ ವೇಳೆಗೆ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡು 357 ರನ್ ಬಾರಿಸಿದೆ.
ಇಲ್ಲಿನ ಪಂಜಾಬ್ ಕ್ರಿಕೆಟ್ ಸಂಸ್ಥೆಯ ಐ.ಎಸ್. ಬಿಂದ್ರಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಾಸ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸುತ್ತಿರುವ ಟೀಂ ಇಂಡಿಯಾ (Team India) ಬೃಹತ್ ಮೊತ್ತದತ್ತ ದಾಪುಗಾಲಿಡಲಾರಂಭಿಸಿದೆ. ಮೊದಲ ವಿಕೆಟ್‌ಗೆ ಮಯಾಂಕ್ ಅಗರ್‌ವಾಲ್ (Mayank Agarwal) ಹಾಗೂ ರೋಹಿತ್ ಶರ್ಮಾ (Rohit Sharma) 52 ರನ್‌ಗಳ ಜತೆಯಾಟವಾಡಿದರು. ಟೆಸ್ಟ್ ವೃತ್ತಿಜೀವನದ 100ನೇ ಪಂದ್ಯವನ್ನಾಡುತ್ತಿರುವ ವಿರಾಟ್ ಕೊಹ್ಲಿ 45 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ನೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎನ್ನುವ ಅಭಿಮಾನಿಗಳ ನಿರೀಕ್ಷೆಯನ್ನು ಕೊಹ್ಲಿ ಮೊದಲ ಇನಿಂಗ್ಸ್‌ನಲ್ಲಿ ಹುಸಿಗೊಳಿಸಿದರು. ಇನ್ನು ಚೇತೇಶ್ವರ್ ಪೂಜಾರ ಬದಲಿಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದ ಹನುಮ ವಿಹಾರಿ (Hanuma Vihari) 128 ಎಸೆತಗಳನ್ನು ಎದುರಿಸಿ 58 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಕೊಹ್ಲಿ ವಿಕೆಟ್ ಪತನವಾದಾಗ ಭಾರತ ತಂಡವು 3 ವಿಕೆಟ್ ಕಳೆದುಕೊಂಡು 170 ರನ್ ಬಾರಿಸಿತ್ತು. ವಿರಾಟ್ ಕೊಹ್ಲಿ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ರಿಷಭ್ ಪಂತ್ ಮನಮೋಹಕ ಇನಿಂಗ್ಸ್ ಆಡುವ ಮೂಲಕ ಗಮನ ಸೆಳೆದಿದ್ದಾರೆ. 5ನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ರಿಷಭ್ ಪಂತ್ ಜೋಡಿ 53 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸಿದರು. ಶ್ರೇಯಸ್ ಅಯ್ಯರ್ 27 ರನ್ ಬಾರಿಸಿ ಧನಂಜಯ ಡಿ ಸಿಲ್ವಾಗೆ ವಿಕೆಟ್ ಒಪ್ಪಿಸಿದರು
ಅಕ್ಷರಶಃ ಅಬ್ಬರಿಸಿದ ರಿಷಭ್ ಪಂತ್: ಆರಂಭದಲ್ಲಿ ಎಚ್ಚರಿಕೆ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಲಂಕಾ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ರಿಷಭ್ ಪಂತ್ 73 ಎಸೆತಗಳನ್ನು ಎದುರಿಸಿ ಅರ್ಧಶತಕ ಬಾರಿಸಿದ ಪಂತ್, ಅರ್ಧಶತಕ ಬಾರಿಸುತ್ತಿದ್ದಂತೆಯೇ ಮತ್ತಷ್ಟು ಆಕ್ರಮಣಕಾರಿ ಆಟವಾಡಲಾರಂಭಿಸಿದರು. ಅದರಲ್ಲೂ ಲಸಿತ್ ಎಂಬುಲ್ಡೆನಿಯಾ ಬೌಲಿಂಗ್‌ನಲ್ಲಿ ಮೈಚಳಿ ಬಿಟ್ಟು ಬ್ಯಾಟಿಂಗ್ ನಡೆಸಿದ ಪಂತ್ ಒಂದೇ ಓವರ್‌ನಲ್ಲಿ 2 ಸಿಕ್ಸ್ ಹಾಗೂ 2 ಬೌಂಡರಿ ಸಹಿತ 22 ರನ್ ಸಿಡಿಸಿದರು. ಅಂತಿಮವಾಗಿ ರಿಷಭ್ ಪಂತ್ 97 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 96 ರನ್ ಬಾರಿಸಿ ಲಕ್ಮಲ್‌ಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ 5ನೇ ಬಾರಿಗೆ 90ರ ಹೊಸ್ತಿಲಲ್ಲಿ ಎಡವಿದ್ದಾರೆ.
Virat Kohli 100th Test: 8 ಸಾವಿರ ರನ್ ಬಾರಿಸಿ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ..!
ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja), ಪಂತ್‌ಗೆ ಉತ್ತಮ ಸಾಥ್ ನೀಡಿದರು. 6ನೇ ವಿಕೆಟ್‌ಗೆ ಈ ಜೋಡಿ 104 ರನ್‌ಗಳ ಜತೆಯಾಟ ನಿಭಾಯಿಸಿತು. ರವೀಂದ್ರ ಜಡೇಜಾ 82 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 45 ರನ್ ಬಾರಿಸಿ ಅಜೇಯರಾಗುಳಿದಿದ್ದರೆ, ಮತ್ತೊಂದು ಬದಿಯಲ್ಲಿ ಅಶ್ವಿನ್ 10 ರನ್ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.