Ind vs SL: ಲಂಕಾ ಎದುರು ಟಾಸ್ ಗೆದ್ದು ಎಚ್ಚರಿಕೆ ಆರಂಭ ಪಡೆದ ಟೀಂ ಇಂಡಿಯಾ

Suvarna News   | Asianet News
Published : Mar 04, 2022, 11:45 AM ISTUpdated : Mar 04, 2022, 11:55 AM IST
Ind vs SL: ಲಂಕಾ ಎದುರು ಟಾಸ್ ಗೆದ್ದು ಎಚ್ಚರಿಕೆ ಆರಂಭ ಪಡೆದ ಟೀಂ ಇಂಡಿಯಾ

ಸಾರಾಂಶ

* ಮೊಹಾಲಿ ಟೆಸ್ಟ್‌ನಲ್ಲಿ ಎಚ್ಚರಿಕೆಯ ಆರಂಭ ಪಡೆದ ಟೀಂ ಇಂಡಿಯಾ * ಮೊದಲ ಟೆಸ್ಟ್‌ನ ಆರಂಭದಲ್ಲೇ ರೋಹಿತ್, ಅಗರ್‌ವಾಲ್ ವಿಕೆಟ್ ಕಳೆದುಕೊಂಡ ಭಾರತ * ನೂರನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಕೊಹ್ಲಿ ಮೇಲಿದೆ ಎಲ್ಲರ ಚಿತ್ತ

ಮೊಹಾಲಿ(ಮಾ.04): ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಟೀಂ ಇಂಡಿಯಾ (Team India) ಎಚ್ಚರಿಕೆಯ ಆರಂಭ ಪಡೆದಿದೆ. ಮೊದಲ ದಿನದಾಟದ ಲಂಚ್‌ ಬ್ರೇಕ್‌ ವೇಳೆಗೆ ಭಾರತ ಎರಡು ವಿಕೆಟ್ ಕಳೆದುಕೊಂಡು 109 ರನ್‌ ಬಾರಿಸಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಹನುಮ ವಿಹಾರಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ನೂರನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ವಿರಾಟ್ ಕೊಹ್ಲಿ 15 ರನ್ ಹಾಗೂ ಹನುಮ ವಿಹಾರಿ 30 ರನ್‌ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಪಂಜಾಬ್‌ ಕ್ರಿಕೆಟ್ ಸಂಸ್ಥೆಯ ಐ.ಎಸ್. ಬಿಂದ್ರಾ ಮೈದಾನದಲ್ಲಿ ಆರಂಭವಾದ ಮೊದಲ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿ (Virat Kohli) ಪಾಲಿಗೆ ನೂರನೇ ಟೆಸ್ಟ್ ಪಂದ್ಯವೆನಿಸಿದೆ. ಮೊದಲ ಪಂದ್ಯದ ಮೊದಲ ಇನಿಂಗ್ಸ್‌ ಆರಂಭಿಸಿದ ಟೀಂ ಇಂಡಿಯಾ ಚುರುಕಿನ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಮಯಾಂಕ್ ಅಗರ್‌ವಾಲ್‌ (Mayank Agarwal) 9.5 ಓವರ್‌ಗಳಲ್ಲಿ 52 ರನ್‌ಗಳ ಜತೆಯಾಟವನ್ನು ನಿಭಾಯಿಸಿತು. ಏಕದಿನ ಕ್ರಿಕೆಟ್ ಮಾದರಿಯಲ್ಲಿ ಬ್ಯಾಟ್‌ ಬೀಸಿದ ನಾಯಕ ರೋಹಿತ್ ಶರ್ಮಾ 28 ಎಸೆತಗಳನ್ನು ಎದುರಿಸಿ 6 ಬೌಂಡರಿ ಸಹಿತ 29 ರನ್‌ ಬಾರಿಸಿ ಲಹಿರು ಕುಮಾರ ಬೌಲಿಂಗ್‌ನಲ್ಲಿ ಸುರಂಗ ಲಕ್ಮಲ್‌ ಅವರಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಮಯಾಂಕ್ ಅಗರ್‌ವಾಲ್ ಕೂಡಾ ಉತ್ತಮ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಲು ವಿಫಲರಾದರು.  ಮಯಾಂಕ್ ಅಗರ್‌ವಾಲ್ 49 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 33 ರನ್ ಬಾರಿಸಿ ಲಸಿತ್ ಎಂಬುಲ್ಡೆನಿಯಾ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. ಕೆ.ಎಲ್. ರಾಹುಲ್ ಹಾಗೂ ಶುಭ್‌ಗಿಲ್‌ ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಮಯಾಂಕ್‌ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಮೊದಲ ಇನಿಂಗ್ಸ್‌ನಲ್ಲಿ ವಿಫಲರಾದರು.

ನೆಲಕಚ್ಚಿ ಆಡುತ್ತಿರುವ ಹನುಮ ವಿಹಾರಿ: ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ಹನುಮ ವಿಹಾರಿ (Hanuma Vihari) ಎಚ್ಚರಿಕೆಯ ಬ್ಯಾಟಿಂಗ್ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಬಲಗೈ ಬ್ಯಾಟರ್ ಹನುಮ ವಿಹಾರಿ 59 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 30 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಅಜಿಂಕ್ಯ ರಹಾನೆ ಹಾಗೂ ಚೇತೇಶ್ವರ್ ಪೂಜಾರ ಅನುಪಸ್ಥಿತಿಯಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಹನುಮ ವಿಹಾರಿ ದಿಟ್ಟ ಹೆಜ್ಜೆಯನ್ನಿಡಲಾರಂಭಿಸಿದ್ದಾರೆ. 

Ind vs SL: ಲಂಕಾ ಎದುರು ಮೊದಲ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಕಿಂಗ್ ಕೊಹ್ಲಿ: ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿ ಪಾಲಿನ ನೂರನೇ ಟೆಸ್ಟ್ ಪಂದ್ಯವಾಗಿದ್ದು, ಕೊಹ್ಲಿ ಕೂಡಾ ಎಚ್ಚರಿಕೆಯ ಬ್ಯಾಟಿಂಗ್ ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ 22 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 15 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ವಿರಾಟ್ ಕೊಹ್ಲಿ 2019ರಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ದ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಇದಾದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ಪದೇ ಪದೇ ವಿಫಲರಾಗುತ್ತಲೇ ಬಂದಿದ್ದಾರೆ. ಹೀಗಾಗಿ ವೃತ್ತಿಜೀವನದ ನೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಲಿದ್ದಾರೆ ಎಂದು ಅವರ ಅಭಿಮಾನಿಗಳು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?