IND vs SL 2ನೇ ಟಿ20 ಪಂದ್ಯ, ಟಾಸ್ ಗೆದ್ದ ಟೀಂ ಇಂಡಿಯಾ, ತಂಡದಲ್ಲಿ ಮಹತ್ವದ ಬದಲಾವಣೆ!

By Suvarna NewsFirst Published Jan 5, 2023, 6:33 PM IST
Highlights

2ನೇ ಟಿ20 ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ತುದಿಗಾಲಲ್ಲಿ ನಿಂತಿರುವ ಟೀಂ ಇಂಡಿಯಾ ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪುಣೆ(ಜ.05): ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ 2ನೇ ಪಂದ್ಯಕ್ಕೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯ ಗೆದ್ದು ಸರಣಿ ಗೆಲುವಿಗೆ ಹೊಂಚು ಹಾಕಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಕೆಲ ಅನಿವಾರ್ಯ ಬದಲಾವಣೆ ಮಾಡಲಾಗಿದೆ. 2 ಬದಲಾವಣೆ ಮಾಡಲಾಗಿದೆ. ಅರ್ಶದೀಪ್ ತಂಡಕ್ಕೆ ಕಮ್ ಬ್ಯಾಕ್ ಮಾಡಿದರೆ, ರಾಹುಲ್ ತ್ರಿಪಾಠಿ ಪದಾರ್ಪಣೆ ಮಾಡಿದ್ದಾರೆ. ಗಾಯಗೊಂಡಿರುವ ಸಂಜು ಸ್ಯಾಮ್ಸನ್ ತಂಡದಿಂದ ಹೊರಬಿದ್ದಿದ್ದಾರೆ. 

ಟೀಂ ಇಂಡಿಯಾ ಪ್ಲೇಯಿಂಗ್ 11
ಇಶಾನ್ ಕಿಶನ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡ, ಅಕ್ಸರ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಅರ್ಶದೀಪ್ ಸಿಂಗ್, ಯುದವೇಂದ್ರ ಚಹಾಲ್ 

Asia Cup 2023: ಮತ್ತೆ ಇಂಡೋ-ಪಾಕ್ ಕದನಕ್ಕೆ ವೇದಿಕೆ ಫಿಕ್ಸ್‌

ಶ್ರೀಲಂಕಾ ಪ್ಲೇಯಿಂಗ್ 11
ಪಥುಮ್ ನಿಸಂಕ, ಕುಸಾಲ್ ಮೆಂಡೀಸ್, ಧನಂಜಯ ಡಿ ಸಿಲ್ವ, ಚಾರಿತ್ ಅಸಲಂಕ, ಭಾನುಕಾ ರಾಜಪಕ್ಸ, ದಸೂನ್ ಶನಕ(ನಾಯಕ), ವಾನಿಂಡು ಹಸರಂಗ, ಚಮಿಕ ಕರುಣಾರತ್ನೆ, ಮಹೀಶ್ ತೀಕ್ಷಾನ, ಕಸೂನ್ ರಾಜಿತ, ದಿಲ್ಶಾನ್ ಮಧುಶಂಕ

ಶ್ರೀಲಂಕಾ ಪಾಲಿಗೆ ಇದು ಮಹತ್ವದ ಪಂದ್ಯ. ಮೊದಲ ಪಂದ್ಯವನ್ನು ಕೊನೆಯ ಎಸೆತದಲ್ಲಿ ಕೈಚೆಲ್ಲಿರುವ ಶ್ರೀಲಂಕಾ ದ್ವಿತೀಯ ಪಂದ್ಯ ಗೆದ್ದು ಸರಣಿ ಉಳಿಸಿಕೊಳ್ಳಲು ಹೋರಾಟ ನಡೆಸಲಿದೆ. ಇಷ್ಟೇ ಅಲ್ಲ ಬಲಾಬಲದಲ್ಲಿ ಶ್ರೀಲಂಕಾ ತಂಡ ಕೂಡ ಭಾರತಕ್ಕೆ ಸರಿಸಮನಾಗಿದೆ. ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪ್ರದರ್ಶನದ ಜೊತೆಗೆ ಅದೃಷ್ಠವೂ ಕೈಹಿಡಿದಿತ್ತು. ಹೀಗಾಗಿ ಅಂತಿಮ ಎಸೆತದಲ್ಲಿ ಭಾರತ ಗೆಲುವಿನ ನಗೆ ಬೀರಿತ್ತು. ಇದೀಗ ಮೊದಲ ಪಂದ್ಯದಲ್ಲಿನ ತಪ್ಪು ಮರುಕಳಿಸದಂತ ಆಡಲು ಲಂಕಾ ಸಜ್ಜಾಗಿದೆ. ಹೀಗಾಗಿ ಇಂದಿನ ಪಂದ್ಯ ಮತ್ತಷ್ಟು ಪೈಪೋಟಿಯಿಂದ ಕೂಡಿರಲಿದೆ.

ಮೊದಲ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಅನುಪಸ್ಥಿತಿಯಲ್ಲೂ ಭಾರತ 162 ರನ್ ಡಿಫೆಂಡ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಬೌಲಿಂಗ್ ವಿಭಾಗ ಉತ್ತಮ ಹೋರಾಟ ನೀಡಿದೆ. ಆದರೆ ಟೀಂ ಇಂಡಿಯಾ ಬ್ಯಾಟಿಂಗ್ ವಿಭಾಗ ಎಚ್ಚೆತ್ತುಕೊಳ್ಳಬೇಕಿದೆ. ಶ್ರೀಲಂಕಾ ಬೌಲಿಂಗ್ ದಾಳಿಗೆ ಅಬ್ಬರಿಸಲು ಟೀಂ ಇಂಡಿಯಾಗೆ ಸಾಧ್ಯವಾಗಿಲ್ಲ. ಹೀಗಿರುವಾಗಿ ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ಸೌತ್ ಆಫ್ರಿಕಾ ದಂತ ಬಲಿಷ್ಠ ತಂಡಗಳ ದಾಳಿ ವಿರುದ್ಧ ದಿಟ್ಟ ಹೋರಾಟ ನೀಡಲು ಸಾಧ್ಯವೇ ಅನ್ನೋ ಮಾತುಗಳು ಕೇಳಿಬರುತ್ತಿದೆ.

LIGAMENT INJURY : ಕ್ರಿಕೆಟರ್ ರಿಷಭ್ ಪಂತ್‌ಗೆ ಕಾಡುತ್ತಿರುವ ಲೆಗಮೆಂಟ್ ಗಾಯದ ಬಗ್ಗೆ ನಿಮಗೆಷ್ಟು ಗೊತ್ತು..?

ಮೊದಲ ಪಂದ್ಯದಲ್ಲಿ ಭಾರತಕ್ಕೆ ರೋಚಕ ಗೆಲುವು
ಬ್ಯಾಟಿಂಗ‌್‌ನಲ್ಲಿ ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡ ಹಾಗೂ ಅಕ್ಸರ್ ಪಟೇಲ್ ಹೋರಾಟದಿಂದ 162 ರನ್ ಸಿಡಿಸಿದ್ದ ಟೀಂ ಇಂಡಿಯಾ ಬೌಲಿಂಗ್‌ನಲ್ಲಿ ದಿಟ್ಟ ಹೋರಾಟ ನೀಡಿತ್ತು. ಕೊನೆಯ ಓವರಲ್ಲಿ ಅಕ್ಷರ್‌ ಪಟೇಲ್‌ ಸಾಹಸದಿಂದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 2 ರನ್‌ ರೋಚಕ ಗೆಲುವು ಸಾಧಿಸಿದ ಭಾರತ, 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಯುವ ತಂಡದೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ, ಹೊಸ ವರ್ಷವನ್ನು ಯಶಸ್ವಿಯಾಗಿ ಆರಂಭಿಸಿತ್ತು.

ವಾಂಖೇಡೆ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಇಳಿಸಲ್ಪಟ್ಟಭಾರತ ಸ್ಫೋಟಕ ಆರಂಭದ ಹೊರತಾಗಿಯೂ ದಿಢೀರ್‌ ಕುಸಿತ ಕಂಡಿತು. ಆದರೆ 6ನೇ ವಿಕೆಟ್‌ಗೆ ದೀಪಕ್‌ ಹೂಡಾ ಹಾಗೂ ಅಕ್ಷರ್‌ ಪಟೇಲ್‌ ತೋರಿದ ಸಾಹಸ ಭಾರತ 20 ಓವರಲ್ಲಿ 5 ವಿಕೆಟ್‌ಗೆ 162 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾಯಿತು. ಅಂತಿಮ ಹಂತದಲ್ಲಿ ದೀಪಕ್ ಹೂಡ ಹಾಗೂ ಅಕ್ಸರ್ ಪಟೇಲ್ ಹೋರಾಟ ಟೀಂ ಇಂಡಿಯಾಗೆ ಸ್ಪರ್ಧಾತ್ಮಕ ಮೊತ್ತ ತಂದುಕೊಟ್ಟಿತು.

click me!