ಏಕದಿನ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿದೆ. ಇಂದಿನ ಪಂದ್ಯದಲ್ಲಿ ಗೆದ್ದವರಿಗೆ ಸರಣಿ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಈ ಪಂದ್ಯದಿಂದಲೂ ರೋಹಿತ್ ಶರ್ಮಾ ಹಾಗೂ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಟ್ರಿನಿಡಾಡ್(ಆ.01) ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತದ ತಂಡ ಮೊದಲ ಪಂದ್ಯ ಗೆದ್ದು, ಎರಡನೇ ಪಂದ್ಯ ಸೋತಿದೆ. ಇಂದು ನಡೆಯುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಸರಣಿ ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ವಿಂಡೀಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಮಾಡಲಾಗಿದೆ. ರುತುರಾಜ್ ಗಾಯಕ್ವಾಡ್ ಹಾಗೂ ಜಯದೇವ್ ಉನಾದ್ಕಟ್ ತಂಡ ಸೇರಿಕೊಂಡಿದ್ದಾರೆ. ಇತ್ತ ಉಮ್ರಾನ್ ಮಲಿಕ್ ಹಾಗೂ ಅಕ್ಸರ್ ಪಟೇಲ್ ತಂಡದಿಂದ ಹೊರಬಿದ್ದಿದ್ದಾರೆ. ಈ ಪಂದ್ಯದಿಂದಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11
ಇಶಾನ್ ಕಿಶನ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಜಯದೇವ್ ಉನಾದ್ಕಟ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್
undefined
ಐರ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ಕಮ್‌ಬ್ಯಾಕ್ ಮಾಡಿದ ಜಸ್ಪ್ರೀತ್ ಬುಮ್ರಾ ನಾಯಕ ಪಟ್ಟ!
ಟ್ರಿನಿಡಾಡ್‌ನಲ್ಲಿ ಮಳೆ ಮುನ್ಸೂಚನೆ ಇದೆ. ಇಂದಿನ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆ ಇದೆ. ಜೊತೆಗೆ ಸರಣಿ ನಿರ್ಧಾರದ ಪಂದ್ಯವಾಗಿರವು ಕಾರಣ ಒಂದೊಂದು ಓವರ್ ಕೂಡ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಉಭಯ ತಂಡ ರೋಚಕ ಹೋರಾಟ ನೀಡುವ ನಿರೀಕ್ಷೆ ಇದೆ.
ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ಏಕದಿನ ಪಂದ್ಯ ಆಯೋಜಿಸಲಾಗಿದೆ. ಏಷ್ಯಾಕಪ್ ಹಾಗೂ ವಿಶ್ವಕಪ್ ಟೂರ್ನಿಗೆ ತಾಲೀಮು ಸರಣಿ ಇದಾಗಿದ್ದು ಭಾರತದ ಹಲವು ಪ್ರಯೋಗ ಮಾಡಿದೆ. ಆದರೆ ಪ್ರಯೋಗಗಳಿಂದ ಕೈಸುಟ್ಟುಕೊಂಡಿದ್ದೇ ಹೆಚ್ಚು. ದ್ವಿತೀಯ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಇದರ ಜೊತಗೆ ಭಾರತ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಮುಗ್ಗರಿಸಿತು.
ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಅದ್ಭುತ ಬೌಲಿಂಗ್ ದಾಳಿಗೆ ವೆಸ್ಟ್ ಇಂಡೀಸ್ ಕೇವಲ 114 ರನ್‌ಗೆ ಆಲೌಟ್ ಆಗಿತ್ತು. 23 ಓವರ್‌ಗಳಲ್ಲಿ ವೆಸ್ಟ್ ಇಂಡೀಸ್ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತ್ತು. ಕುಲ್ದೀಪ್ ಯಾದವ್ 4 ವಿಕೆಟ್ ಕಬಳಿಸಿದರೆ, ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿ ಮಿಂಚಿದ್ದರು. 115 ರನ್ ಟಾರ್ಗೆಟನ್ನು ಭಾರತ 22.5 ಓವರ್‌ಗಳಲ್ಲಿ ಚೇಸ್ ಮಾಡಿತ್ತು. 5 ವಿಕೆಟ್ ಗೆಲುವು ದಾಖಲಿಸಿದ ಟೀಂ ಇಂಡಿಯಾ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.
55 ಎಸೆತಗಳಲ್ಲಿ ಅಜೇಯ 137 ರನ್ ಚಚ್ಚಿದ ನಿಕೋಲಸ್ ಪೂರನ್; ಮುಂಬೈ ಮುಡಿಗೆ ಚೊಚ್ಚಲ MLC ಟ್ರೋಫಿ
ಮೊದಲ ಏಕದಿನ ಪಂದ್ಯದ ಸುಲಭ ಗೆಲುವಿನ ಬೆನ್ನಲ್ಲೇ ಭಾರತ ತಂಡ 2ನೇ ಪಂದ್ಯಕ್ಕೆ ಮಹತ್ವದ ಬದಲಾವಣೆ ಮಾಡಲಾಗಿತ್ತು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿತ್ತು. ಇತ್ತ ಮೊದಲು ಬ್ಯಾಟಿಂಗ್ ಮಾಡಿದ ಭಾರತ ರನ್‌ಗಳಿಸಲು ಪರದಾಡಿತ್ತು. ಇಶಾನ್ ಕಿಶನ್ ಸಿಡಿಸಿದ 55 ರನ್ ಹಾಗೂ ಶುಭಮನ್ ಗಿಲ್ ಸಿಡಿಸಿದ 34 ರನ್‌ಗಳ ನೆರವಿನಿಂದ ಟೀಂ ಇಂಡಿಯಾ 40.5 ಓವರ್‌ಗಲ್ಲಿ 181 ರನ್‌ಗೆ ಆಲೌಟ್ ಆಯಿತು. ಗುರಿಯನ್ನು ವೆಸ್ಟ್ ಇಂಡೀಸ್ 36.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಈ ಮೂಲಕ 6 ವಿಕೆಟ್ ಗೆಲುವು ದಾಖಲಿಸಿತು. ಹೀಗಾಗಿ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿತ್ತು.