* ಎರಡನೇ ಏಕದಿನ ಪಂದ್ಯ ಗೆಲ್ಲಲು ವಿಂಡೀಸ್‌ಗೆ 238 ರನ್‌ಗಳ ಗುರಿ
* ಸಮಯೋಚಿತ ಅರ್ಧಶತಕ ಬಾರಿಸಿ ಆಸರೆಯಾದ ಸೂರ್ಯಕುಮಾರ್ ಯಾದವ್
* ಈಗಾಗಲೇ ಮೊದಲ ಏಕದಿನ ಪಂದ್ಯ ಜಯಿಸಿರುವ ಟೀಂ ಇಂಡಿಯಾ
ಅಹಮದಾಬಾದ್(ಫೆ.09): ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದ ಹೊರತಾಗಿಯೂ ಸೂರ್ಯಕುಮಾರ್ ಯಾದವ್ (Suryakumar Yadav) ಆಕರ್ಷಕ ಅರ್ಧಶತಕ ಹಾಗೂ ಕೆ.ಎಲ್. ರಾಹುಲ್ (KL Rahul) ಆಕರ್ಷಕ ಬ್ಯಾಟಿಂಗ್ ನೆರವಿನಿಂದ ವೆಸ್ಟ್ ಇಂಡೀಸ್ ವಿರುದ್ದದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) 9 ವಿಕೆಟ್ ಕಳೆದುಕೊಂಡು 237 ರನ್ ಬಾರಿಸಿದ್ದು, ಪ್ರವಾಸಿ ವೆಸ್ಟ್ ಇಂಡೀಸ್ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ಹಂಗಾಮಿ ನಾಯಕ ನಿಕೋಲಸ್ ಪೂರನ್ (Nicholas Pooran) ಮೊದಲು ಬೌಲಿಂಗ್ ಮಾಡುವ ತೀರ್ಮಾನವನ್ನು ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಕೆರಿಬಿಯನ್ ಬೌಲರ್‌ಗಳು ಯಶಸ್ವಿಯಾದರು. ಮೊದಲ ಬಾರಿಗೆ ರಿಷಭ್ ಪಂತ್ ಆರಂಭಿಕನಾಗಿ ರೋಹಿತ್ ಶರ್ಮಾ (Rohit Sharma) ಜತೆ ಇನಿಂಗ್ಸ್ ಆರಂಭಿಸಿದರು. ಮೊದಲ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದ ನಾಯಕ ರೋಹಿತ್ ಶರ್ಮಾ ಕೇವಲ 5 ರನ್ ಬಾರಿಸಿ ಕೀಮರ್ ರೋಚ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ರಿಷಭ್ ಪಂತ್ ನೆಲಕಚ್ಚಿ ಆಡುವ ಮುನ್ಸೂಚನೆ ನೀಡಿದರು. ಆದರೆ 12ನೇ ಓವರ್‌ನಲ್ಲಿ ಓಡೆನ್ ಸ್ಮಿತ್, ಈ ಇಬ್ಬರು ಬ್ಯಾಟರ್‌ಗಳನ್ನು ಒಂದೇ ಓವರ್‌ನಲ್ಲಿ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಪಂತ್ ಹಾಗೂ ವಿರಾಟ್ ಕೊಹ್ಲಿ ತಲಾ 18 ರನ್ ಬಾರಿಸಿ ಪೆವಿಲಿಯನ್ ಸೇರಿದರು.
undefined
ಭಾರತದ ಸಂಕಷ್ಟಕ್ಕೆ ಆಸರೆಯಾದ ರಾಹುಲ್-ಸೂರ್ಯ: ಕೇವಲ 43 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನಾಲ್ಕನೇ ವಿಕೆಟ್‌ಗೆ ಉಪನಾಯಕ ಕೆ.ಎಲ್. ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಉಪಯುಕ್ತ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 4ನೇ ವಿಕೆಟ್‌ಗೆ ಈ ಜೋಡಿ 91 ರನ್‌ಗಳ ಜತೆಯಾಟವಾಡುವ ಮೂಲಕ ತಂಡವ ಮೊತ್ತವನ್ನು 130ರ ಗಡಿ ದಾಟಿಸಿತು. ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದ ರಾಹುಲ್ ಎರಡು ರನ್ ಕದಿಯುವ ಯತ್ನದಲ್ಲಿ ರನೌಟ್ ಆಗಿ ಪೆವಿಲಿಯನ್ ಸೇರಿದರು.
West Indies restrict India to 237/9 in 50 overs 👌🏻
Can they chase this down and level the series? | https://t.co/ZnRn9X2KQz pic.twitter.com/SU4v2oeuW5
Ind vs WI: 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ಕೆ
ಇನ್ನು ಮತ್ತೊಂದು ತುದಿಯಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಸೂರ್ಯ ಒಟ್ಟು 83 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 64 ರನ್ ಬಾರಿಸಿ ಫ್ಯಾಬಿನ್ ಅಲೆನ್ ಬೌಲಿಂಗ್‌ನಲ್ಲಿ ಸ್ವೀಪ್ ಮಾಡುವ ಯತ್ನದಲ್ಲಿ ಅಲ್ಜೆರಿ ಜೋಸೆಫ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.
ಇನ್ನು ಕೆಳ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್(24) ಹಾಗೂ ದೀಪಕ್ ಹೂಡಾ(29) ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಉಪಯುಕ್ತ ರನ್ ಕಾಣಿಕೆ ನೀಡಿದರು. ವೆಸ್ಟ್ ಇಂಡೀಸ್ ತಂಡದ ಪರ ಓಡೆನ್ ಸ್ಮಿತ್ ಹಾಗೂ ಅಲ್ಜೇರಿ ಜೋಸೆಫ್ ತಲಾ 2 ವಿಕೆಟ್ ಪಡೆದರೆ, ಕೀಮರ್ ರೋಚ್, ಜೇಸನ್ ಹೋಲ್ಡರ್, ಅಕೆಲ್ ಹುಸೈನ್ ಹಾಗೂ ಫ್ಯಾಬಿನ್ ಅಲೆನ್ ತಲಾ ಒಂದೊಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್
ವೆಸ್ಟ್ ಇಂಡೀಸ್: 237/9
ಸೂರ್ಯಕುಮಾರ್ ಯಾದವ್: 64
ಕೆ.ಎಲ್. ರಾಹುಲ್: 49
ಓಡೆನ್ ಸ್ಮಿತ್: 29/2
(* ಟೀಂ ಇಂಡಿಯಾ ಬ್ಯಾಟಿಂಗ್ ಮುಕ್ತಾಯದ ವೇಳೆಗೆ)