Ind vs WI: ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

Suvarna News   | Asianet News
Published : Feb 11, 2022, 01:10 PM ISTUpdated : Feb 11, 2022, 01:28 PM IST
Ind vs WI: ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ

ಸಾರಾಂಶ

* ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ * ಉಭಯ ತಂಡಗಳಲ್ಲು ಮಹತ್ವದ ಬದಲಾವಣೆ * ತಂಡ ಕೂಡಿಕೊಂಡ ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹಾಗೂ ಕುಲ್ದೀಪ್ ಯಾದವ್

ಅಹಮದಾಬಾದ್‌(ಫೆ.11): ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ (Team India) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ, ಇದೀಗ ಕ್ಲೀನ್ ಸ್ವೀಪ್‌ ಮಾಡುವತ್ತ ಚಿತ್ತ ನೆಟ್ಟಿದ್ದರೆ, ಕೆರಿಬಿಯನ್ ಪಡೆ ವೈಟ್‌ವಾಷ್ ಮುಖಭಂಗದಿಂದ ಪಾರಾಗಲು ಎದುರು ನೋಡುತ್ತಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯುತ್ತಿರುವ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಉಭಯ ತಂಡಗಳಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.  ಈಗಾಗಲೇ ಏಕದಿನ ಸರಣಿ ಕೈವಶ ಮಾಡಿಕೊಂಡಿರುವ ಭಾರತ ತಂಡದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಲಾಗಿದ್ದು, ಗಾಯದ ಸಮಸ್ಯೆಯಿಂದ ಕೆ.ಎಲ್ ರಾಹುಲ್ (KL Rahul) ಹಾಗೂ ದೀಪಕ್ ಹೂಡಾ, ಶಾರ್ದೂಲ್ ಠಾಕೂರ್ ಹೊರಬಿದ್ದಿದ್ದರೆ, ಯುಜುವೇಂದ್ರ ಚಹಲ್‌ಗೆ ವಿಶ್ರಾಂತಿ ನೀಡಲಾಗಿದೆ. ಇವರ ಬದಲಿಗೆ ಶಿಖರ್ ಧವನ್ (Shikhar Dhawan), ಶ್ರೇಯಸ್ ಅಯ್ಯರ್ (Shreyas Iyer), ಕುಲ್ದೀಪ್‌ ಯಾದವ್‌ ಹಾಗೂ ದೀಪಕ್ ಚಹರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅಕೀಲ್ ಹುಸೇನ್ ಬದಲಿಗೆ ಹೇಡನ್ ವಾಲ್ಷ್ಯ್ ತಂಡ ಕೂಡಿಕೊಂಡಿದ್ದಾರೆ.  

ತಂಡ ಕೂಡಿಕೊಂಡ ಶಿಖರ್, ಶ್ರೇಯಸ್: ಕೋವಿಡ್‌ ತಗುಲಿದ್ದರಿಂದ ಮೊದಲೆರಡು ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಹಾಗೂ ಶಿಖರ್ ತಂಡ ಕೂಡಿಕೊಂಡಿದ್ದು, ರನ್‌ ಮಳೆ ಹರಿಸಲು ಎದುರು ನೋಡುತ್ತಿದ್ದಾರೆ. ಭಾರತ ಕಂಡ ಯಶಸ್ವಿ ಆರಂಭಿಕ ಜೋಡಿ ಎನಿಸಿಕೊಂಡಿರುವ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ, ಇದೀಗ ಮತ್ತೊಮ್ಮೆ ಉತ್ತಮ ಆರಂಭ ಒದಗಿಸಿಕೊಡಲು ಎದುರು ನೋಡುತ್ತಿದ್ದಾರೆ. ಇನ್ನುಳಿದಂತೆ ರಾಹುಲ್ ತಂಡದಿಂದ ಹೊರಗುಳಿದಿರುವುದರಿಂದ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡಾ ಸ್ಥಾನ ಪಡೆದಿದ್ದು, ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಇದೇ ರೀತಿ ಕುಲ್ದೀಪ್ ಯಾದವ್ ಹಾಗೂ ದೀಪಕ್ ಚಹರ್ ಕೂಡಾ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

Ind vs WI: ಟೀಂ ಇಂಡಿಯಾಗಿಂದು ಸರಣಿ ಕ್ಲೀನ್‌ ಸ್ವೀಪ್‌ ಗುರಿ

ಇಂದಾದರೂ ಮೂರಂಕಿ ಮೊತ್ತ ದಾಖಲಿಸುತ್ತಾರಾ ವಿರಾಟ್ ಕೊಹ್ಲಿ..?: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದೆರಡು ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ತಡವರಿಸುತ್ತಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ಎದುರಿನ ಮೊದಲೆರಡು ಪಂದ್ಯಗಳಲ್ಲೂ ಸಹಾ ಕ್ರಮವಾಗಿ 8 ಹಾಗೂ 18 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಹೀಗಾಗಿ ವಿಂಡೀಸ್ ಎದುರಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಾದರೂ ಕೊಹ್ಲಿ ಮೂರಂಕಿ ಮೊತ್ತ ದಾಖಲಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ತಂಡಗಳು ಹೀಗಿವೆ ನೋಡಿ

ಭಾರತ: ರೋಹಿತ್‌(ನಾಯಕ), ಶಿಖರ್ ಧವನ್‌, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್‌, ರಿಷಭ್ ಪಂತ್‌, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್‌, ದೀಪಕ್ ಚಹರ್, ಮೊಹಮ್ಮದ್ ಸಿರಾಜ್‌, ಕುಲ್ದೀಪ್ ಯಾದವ್‌, ಪ್ರಸಿದ್ಧ್ ಕೃಷ್ಣ.

ವಿಂಡೀಸ್‌: ಶಾಯ್‌ ಹೋಪ್‌, ಬ್ರೆಂಡನ್ ಕಿಂಗ್‌, ಡ್ಯಾರನ್ ಬ್ರಾವೋ‌, ಸಮರ್ಥ್ ಬ್ರೂಕ್ಸ್‌, ನಿಕೋಲಸ್ ಪೂರನ್‌(ನಾಯಕ)‌, ಜೇಸನ್ ಹೋಲ್ಡರ್‌, ಓಡೆನ್ ಸ್ಮಿತ್ ಫ್ಯಾಬಿನ್ ಆ್ಯಲೆನ್‌, ಹೇಡನ್ ವಾಲ್ಷ್‌, ಅಲ್ಜೆರಿ ಜೋಸೆಫ್‌, ಕೀಮಾರ್ ಕೋಚ್‌.

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ