
ಅಹಮದಾಬಾದ್(ಫೆ.04): ಏಕದಿನ ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ಇದೀಗ ಎಲ್ಲರ ಚಿತ್ತ ವಿರಾಟ್ ಕೊಹ್ಲಿಯತ್ತ ನೆಟ್ಟಿದೆ. ಎಲ್ಲಾ ನಾಯಕತ್ವದ ಭಾರವನ್ನು ಕೆಳಗಿಳಿಸಿಕೊಂಡಿರುವ ವಿರಾಟ್ ಕೊಹ್ಲಿ (Virat Kohli) ಇದೀಗ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಸೀಮಿತ ಓವರ್‌ಗಳ ಸರಣಿಯನ್ನಾಡಲು ಸಜ್ಜಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯು ಫೆಬ್ರವರಿ 06ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ವಿಂಡೀಸ್ ಎದುರಿನ ಮೊದಲ ಏಕದಿನ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಶತಕದ ಭರವನ್ನು ನೀಗಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. 2019ರ ಬಳಿಕ ವಿರಾಟ್ ಕೊಹ್ಲಿ ಇದುವರೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸಲು ಪದೇ ಪದೇ ವಿಫಲವಾಗುತ್ತಲೇ ಬಂದಿದ್ದಾರೆ. ಇದೀಗ 33 ವರ್ಷದ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಕೇವಲ 6 ರನ್ ಬಾರಿಸಿದರೆ, ವೈಯುಕ್ತಿಕ ವಿಭಾಗದಲ್ಲಿ ಭಾರತ ಪರ ಅಪರೂಪದ ದಾಖಲೆಯೊಂದನ್ನು ಸರಿಗಟ್ಟಲಿದ್ದಾರೆ.
ಹೌದು, ತವರಿನಲ್ಲಿ 5,000 ಏಕದಿನ ರನ್ ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲು ವಿರಾಟ್ ಕೊಹ್ಲಿಗೆ ಇನ್ನು ಕೇವಲ ಆರು ರನ್‌ಗಳ ಅಗತ್ಯವಿದೆಯಷ್ಟೇ. ಭಾರತ ಪರ ತವರಿನಲ್ಲಿ 5 ಸಾವಿರಕ್ಕೂ ಅಧಿಕ ರನ್ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎನ್ನುವ ದಾಖಲೆ ಸಚಿನ್ ತೆಂಡುಲ್ಕರ್ (Sachin Tendulkar) ಅವರ ಹೆಸರಿನಲ್ಲಿದೆ. ಇದೀಗ ವಿರಾಟ್ ಕೊಹ್ಲಿ ಇನ್ನು ಕೇವಲ 6 ರನ್ ಬಾರಿಸಿದರೆ, ಈ ಸಾಧನೆ ಮಾಡಿದ ಭಾರತದ ಎರಡನೇ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾಗಲಿದ್ದಾರೆ
ಇನ್ನು ಕಾಕತಾಳೀಯ ಸಂಗತಿಯೆಂದರೆ, ಸಚಿನ್ ತೆಂಡುಲ್ಕರ್ ಕೂಡಾ ವೆಸ್ಟ್ ಇಂಡೀಸ್ ವಿರುದ್ದವೇ ತವರಿನಲ್ಲಿ 5000+ ರನ್ ಪೂರೈಸಿದ್ದರು. ತವರಿನಲ್ಲಿ 5000+ ರನ್ ಬಾರಿಸಲು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ 121 ಇನಿಂಗ್ಸ್‌ಗಳನ್ನಾಡಿದ್ದರು. ಇನ್ನು ರನ್ ಮಷೀನ್ ವಿರಾಟ್ ಕೊಹ್ಲಿ 96ನೇ ಇನಿಂಗ್ಸ್‌ನಲ್ಲೇ 5,000+ ರನ್ ಬಾರಿಸುವ ಸಾಧ್ಯತೆಯಿದೆ. ಫೆಬ್ರವರಿ 06ರಂದು ನಡೆಯಲಿರುವ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಕೇವಲ 6 ರನ್ ಬಾರಿಸಿದರೆ, ತವರಿನಲ್ಲಿ ಅತಿವೇಗವಾಗಿ 5,000 ರನ್ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎನ್ನುವ ಅಪರೂಪದ ದಾಖಲೆ ನಿರ್ಮಿಸಲಿದ್ದಾರೆ.
Ind vs WI: ಐತಿಹಾಸಿಕ 1000ನೇ ಏಕದಿನ ಪಂದ್ಯವನ್ನಾಡಲು ಸಜ್ಜಾದ ಟೀಂ ಇಂಡಿಯಾ..!
ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಗೂ ಮುನ್ನ ಭಾರತೀಯ ಪಾಳಯದಲ್ಲಿ ಕೋವಿಡ್ ಆತಂಕ ಎದುರಾಗಿದೆ. ಟೀಂ ಇಂಡಿಯಾ (Team India) ಆರಂಭಿಕ ಬ್ಯಾಟರ್‌ಗಳಾದ ಶಿಖರ್ ಧವನ್(Shikhar Dhawan), ಋತುರಾಜ್ ಗಾಯಕ್ವಾಡ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ (Shreyas Iyer) ಸೇರಿ ಭಾರತ ತಂಡದ ಒಟ್ಟು 7 ಮಂದಿಗೆ ಕೋವಿಡ್ 19 (COVID 19) ಸೋಂಕು ದೃಢಪಟ್ಟಿತ್ತು. ಇನ್ನು ಇದರ ಬೆನ್ನಲ್ಲೇ ಕನ್ನಡಿಗ ಮಯಾಂಕ್ ಅಗರ್‌ವಾಲ್‌ಗೆ ಟೀಂ ಇಂಡಿಯಾದಿಂದ ಬುಲಾವ್ ಬಂದಿದ್ದು, ಭಾರತ ತಂಡವನ್ನು ಕೂಡಿಕೊಂಡಿದ್ದಾರೆ.
ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ತಂಡಗಳ ನಡುವೆ ಭಾನುವಾರ ನಡೆಯಲಿರುವ ಮೊದಲ ಏಕದಿನ ಪಂದ್ಯವು, ಟೀಂ ಇಂಡಿಯಾ ಆಡಲಿರುವ 1,000ನೆಯ ಏಕದಿನ ಪಂದ್ಯವೆನಿಸಲಿದೆ. ಈ ಮೂಲಕ ಒಂದು ಸಾವಿರ ಏಕದಿನ ಕ್ರಿಕೆಟ್ ಪಂದ್ಯವನ್ನಾಡಿದ ಮೊದಲ ತಂಡ ಎನ್ನುವ ಐತಿಹಾಸಿಕ ದಾಖಲೆಗೆ ಟೀಂ ಇಂಡಿಯಾ ಪಾತ್ರವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.