
ಪೋರ್ಟ್ ಆಫ್ ಸ್ಪೇನ್(ಜು.25): ವೆಸ್ಟ್ ಇಂಡೀಸ್ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಕೊನೆಗೂ ಗೆಲುವಿನ ಕೇಕೆ ಹಾಕುವಲ್ಲಿ ಭಾರತ ಕ್ರಿಕೆಟ್ ತಂಡವು ಯಶಸ್ವಿಯಾಗಿದೆ. ಇಲ್ಲಿನ ಕ್ವೀನ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಏಕದಿನ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ವೆಸ್ಟ್ ಇಂಡೀಸ್ ನೀಡಿದ್ದ 312 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ 38.4 ಓವರ್ ವೇಳೆಗೆ 5 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿತ್ತು. ಆದರೆ ಕೊನೆಯಲ್ಲಿ ಆಲ್ರೌಂಡರ್ ಅಕ್ಷರ್ ಪಟೇಲ್ ಕೇವಲ 35 ಎಸೆತಗಳಲ್ಲಿ ಅಜೇಯ 64 ರನ್ ಸಿಡಿಸುವ ಮೂಲಕ ಇನ್ನೂ ಎರಡು ಎಸೆತಗಳು ಬಾಕಿ ಇರುವಂತೆಯೇ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಅಕ್ಷರ್ ಪಟೇಲ್ ಅವರ ಸ್ಪೋಟಕ ಇನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 5 ಮುಗಿಲೆತ್ತರದ ಸಿಕ್ಸರ್‌ಗಳು ಸೇರಿದ್ದವು.
ಪಂದ್ಯ ಮುಕ್ತಾಯದ ಬಳಿಕ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದು, ಯುಜುವೇಂದ್ರ ಚಹಲ್, ಆಲ್ರೌಂಡರ್ ಅಕ್ಷರ್ ಪಟೇಲ್ ಹಾಗೂ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವೇಗಿ ಆವೇಶ್ ಖಾನ್ ಜತೆ ಮಾತನಾಡಿದ್ದಾರೆ. ಈ ವಿಡಿಯೋದಲ್ಲಿ ಕೊನೆಯ ಓವರ್‌ನ ರೋಚಕತೆಯ ಕುರಿತಂತೆ ಮಾತನಾಡಿದ್ದಾರೆ.
Ind vs WI ವಿಂಡೀಸ್ ಎದುರಿನ ಗೆಲುವಿನ ಬೆನ್ನಲ್ಲೇ ಬೇಸರ ಹೊರಹಾಕಿದ ಶ್ರೇಯಸ್ ಅಯ್ಯರ್..!
ನನ್ನ ಕೈಬೆರಳಿನಲ್ಲಿರುವ ಎಲ್ಲಾ ಉಗುರುಗಳನ್ನು ಕಚ್ಚಿಕೊಂಡೆ. ಯಾಕೆಂದರೆ ಮೈದಾನದ ಹೊರಗೆ ಅಷ್ಟರಮಟ್ಟಿಗಿನ ಒತ್ತಡವಿತ್ತು. ಈ ಒತ್ತಡವೆಷ್ಟರ ಮಟ್ಟಿಗೆ ಇತ್ತು ಎಂದರೇ ನನ್ನ ಮದುವೆ ಸಂದರ್ಭದಲ್ಲೂ ಇಷ್ಟೊಂದು ಟೆನ್ಷನ್ ಇರಲಿಲ್ಲ ಎಂದು ಯುಜುವೇಂದ್ರ ಚಹಲ್ ಹೇಳಿದ್ದಾರೆ. ಆವೇಶ್ ಖಾನ್ ಹಾಗೂ ಅಕ್ಷರ್ ಪಟೇಲ್ ಇನಿಂಗ್ಸ್‌ನ ಕೊನೆಯಲ್ಲಿ ಯಾವ ರೀತಿ ಬ್ಯಾಟ್ ಮಾಡಬೇಕು ಎನ್ನುವುದರ ಕುರಿತಂತೆ ಹೆಣೆದ ರಣತಂತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಇನ್ನು ಅಜೇಯ ಅರ್ಧಶತಕ ಸಿಡಿಸಿ ಪಂದ್ಯದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ಅಕ್ಷರ್ ಪಟೇಲ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಕ್ಷರ್ ಪಟೇಲ್, ಇದೊಂದು ತುಂಬ ವಿಶೇಷವಾದ ಇನಿಂಗ್ಸ್. ಇದು ಸರಣಿ ಗೆಲ್ಲಲು ಅನುಕೂಲವಾದ ಮಹತ್ವದ ಇನಿಂಗ್ಸ್. ನಾನು ಕ್ರೀಸ್‌ಗಿಳಿದಾಗ ಪ್ರತಿ ಓವರ್‌ನಲ್ಲೂ 10-11 ರನ್ ಗಳಿಸಬೇಕು ಎನ್ನುವ ಗುರಿಯೊಂದಿಗೆ ಕಣಕ್ಕಿಳಿದೆ. ಐಪಿಎಲ್‌ನಲ್ಲಿ ಗಳಿಸಿದ ಅನುಭವ ನಮ್ಮ ನೆರವಿಗೆ ಬಂತು ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.