
ಹರಾರೆ(ಆ.20): ಭಾರತ ಹಾಗೂ ಜಿಂಬಾಬ್ವೆ ತಂಡಗಳ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡದಲ್ಲಿ ಒಂದು ಹಾಗೂ ಜಿಂಬಾಬ್ವೆ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಗೆಲುವು ಸಾಧಿಸಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ, ಇಂದಿನ ಪಂದ್ಯವನ್ನು ಗೆದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ.
ಇಲ್ಲಿನ ಹರಾರೆ ಕ್ರಿಕೆಟ್ ಕ್ಲಬ್‌ನಲ್ಲಿ ಆರಂಭವಾದ ಎರಡನೇ ಏಕದಿನ ಪಂದ್ಯದಲ್ಲಿ ಅಚ್ಚರಿಯ ಬದಲಾವಣೆ ಎನ್ನುವಂತೆ ಕಳೆದ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ದೀಪಕ್ ಚಹರ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಾರ್ದೂಲ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಜಿಂಬಾಬ್ವೆ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಕೈಟಾನೋ ಮತ್ತು ಚಿವಾಂಗ ತಂಡ ಕೂಡಿಕೊಂಡಿದ್ದಾರೆ.
Ind vs ZIM ಏಕದಿನ ಸರಣಿ ಜಯದ ವಿಶ್ವಾಸದಲ್ಲಿ ಟೀಂ ಇಂಡಿಯಾ
ಮೊದಲ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಮೊದಲು ಬ್ಯಾಟ್ ಮಾಡಿ ಕೇವಲ 189 ರನ್‌ಗಳಿಗೆ ಸರ್ವಪತನ ಕಂಡಿತ್ತು. ಇನ್ನು ಸಾದಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ 10 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತ್ತು. ಶಿಖರ್ ಧವನ್ ಹಾಗೂ ಶುಭ್‌ಮನ್ ಗಿಲ್ ಆಕರ್ಷಕ ಅರ್ಧಶತಕ ಬಾರಿಸಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದರು. ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಹಾಗೂ ಶುಭ್‌ಮನ್ ಗಿಲ್ ಅವರೇ ಇನಿಂಗ್ಸ್ ಆರಂಭಿಸುತ್ತಾರೋ ಅಥವಾ ಕೆ ಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಾರೋ ಎನ್ನುವ ಕುತೂಹಲ ಜೋರಾಗಿದೆ.
ಎರಡನೇ ಏಕದಿನ ಪಂದ್ಯಕ್ಕೆ ತಂಡಗಳು ಹೀಗಿವೆ
ಭಾರತ: ಶಿಖರ್ ಧವನ್, ಶುಭ್‌ಮನ್ ಗಿಲ್, ಇಶಾನ್ ಕಿಶನ್, ಕೆ ಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಪ್ರಸಿದ್ದ್ ಕೃಷ್ಣ, ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ: ಇನೊಸೆಂಟ್, ತಕುವಾನ್ಸೆ ಕೈಟಾನೊ, ಮಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಾಜಾ, ಚಕಾಬ್ವ(ನಾಯಕ), ರಿಯಾನ್ ಬರ್ಲ್, ಜಾಂಗ್ವೆ, ಬ್ರಾಡ್ ಎವಾನ್ಸ್, ತನಕ ಚಿವಾಂಗ, ವಿಕ್ಟರ್.
ಪಂದ್ಯ ಆರಂಭ: ಮಧ್ಯಾಹ್ನ 12.45ಕ್ಕೆ
ನೇರ ಪ್ರಸಾರ: ಸೋನಿ ಟೆನ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.