ಕೋವಿಡ್‌ ವಿರುದ್ದದ ಸಮರಕ್ಕೆ 2000 ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ ಒದಗಿಸಿದ ಬಿಸಿಸಿಐ

By Suvarna NewsFirst Published May 24, 2021, 4:10 PM IST
Highlights

* ಕೋವಿಡ್ ವಿರುದ್ದ ಹೋರಾಟಕ್ಕೆ ದೇಶದ ಜತೆ ಕೈಜೋಡಿಸಿದ ಬಿಸಿಸಿಐ

* 2 ಸಾವಿರ ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ ದೇಣಿಗೆ ನೀಡಿದ ಬಿಸಿಸಿಐ

* ಕೋವಿಡ್ ಎರಡನೇ ಅಲೆಗೆ ನಲುಗಿ ಹೋಗಿರುವ ಭಾರತ

ಮುಂಬೈ(ಮೇ.24): ಇಡೀ ದೇಶವೇ ಕೋವಿಡ್ ಎರಡನೇ ಅಲೆಯ ವಿರುದ್ದ ಹೋರಾಟ ನಡೆಸುತ್ತಿದೆ, ಇಂತಹ ಸಂಕಷ್ಟದ ಸಮಯದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ದೇಶದ ನೆರವಿಗೆ ಧಾವಿಸಿದೆ. ಇದೀಗ ಬಿಸಿಸಿಐ ಬರೋಬ್ಬರಿ 2 ಸಾವಿರ 10 ಲೀಟರ್‌ನ ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ಗಳನ್ನು ಒದಗಿಸಿದೆ.

ಮುಂದಿನ ಕೆಲವು ತಿಂಗಳುಗಳಲ್ಲಿ ದೇಶದ ಅಗತ್ಯವಿರುವಲ್ಲಿಗೆ ಬಿಸಿಸಿಐ 2,000 ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ ಹಂಚಿಕೆ ಮಾಡಲು ನಿರ್ಧರಿಸಿದೆ. ಕೋವಿಡ್ ವಿರುದ್ದ  ದೀರ್ಘಕಾಲಿಕ ಹೋರಾಟಕ್ಕೆ ಮೆಡಿಕಲ್ ಹಾಗೂ ಹೆಲ್ತ್‌ಕೇರ್ ಸಮುದಾಯದ ಪಾತ್ರ ಎಷ್ಟು ಮಹತ್ವದ ಎನ್ನುವುದರ ಅರಿವು ಬಿಸಿಸಿಐಗೆ ಇದೆ. ಇವರು ನಮ್ಮನ್ನು ಕಾಪಾಡುವ ನಿಟ್ಟಿನಲ್ಲಿ ಫ್ರಂಟ್‌ಲೈನ್‌ ವಾರಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಸಿಸಿಐ ಯಾವಾಗಲೂ ಆರೋಗ್ಯ ಹಾಗೂ ರಕ್ಷಣೆಗೆ ಮೊದಲ ಆದ್ಯತೆಯನ್ನು ನೀಡುತ್ತಾ ಬಂದಿದೆ. ಹೀಗಾಗಿ ಸಂಕಷ್ಟದಲ್ಲಿರುವ ಸೋಂಕಿತರಿಗೆ ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ಗಳು ತಕ್ಷಣವೇ ಚೇತರಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

BCCI to contribute 10-Litre 2000 Oxygen concentrators to boost India’s efforts in overcoming the COVID-19 pandemic.

More details here - https://t.co/XDiP374v8q pic.twitter.com/BhfX8fwirH

— BCCI (@BCCI)

ಕೋವಿಡ್ 19 ಎರಡನೇ ಅಲೆಗೆ ಭಾರತ ಅಕ್ಷರಶಃ ನಲುಗಿ ಹೋಗಿದ್ದು, ಪ್ರತಿನಿತ್ಯ 4 ಸಾವಿರಕ್ಕೂ ಅಧಿಕ ಮಂದಿ ಕೋವಿಡ್‌ನಿಂದಾಗಿ ಕೊನೆಯುಸಿರೆಳೆಯುತ್ತಿದ್ದಾರೆ. ಹೀಗಾಗಿ ದೇಶದ ಹಲವು ರಾಜ್ಯಗಳು ಲಾಕ್‌ಡೌನ್‌ ಘೋಷಣೆ ಮಾಡುವ ಕೋವಿಡ್ ಕೊರೋನಾ ಹೆಮ್ಮಾರಿಯನ್ನು ಕಟ್ಟಿಹಾಕುವ ಪ್ರಯತ್ನ ಮಾಡುತ್ತಿದೆ.      

ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ IPL 2021; ದುಬೈನಲ್ಲಿ ಆಯೋಜಿಸಲು BCCI ಪ್ಲಾನ್!

ಈ ಹಿಂದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ದಂಪತಿ, ಯುಜುವೇಂದ್ರ ಚಹಲ್‌, ಸಚಿನ್‌ ತೆಂಡುಲ್ಕರ್ ಸೇರಿದಂತೆ ಹಲವು ಹಿರಿಕಿರಿಯ ಕ್ರಿಕೆಟಿಗರು ಕೋವಿಡ್ ವಿರುದ್ದದ ಹೋರಾಟಕ್ಕೆ ತಮ್ಮ ಕೈಲಾದ ದೇಣಿಗೆಯನ್ನು ನೀಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!