ನ್ಯೂಜಿಲೆಂಡ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಐಸಿಸಿ ಟೂರ್ನಿಯಲ್ಲಿ ಹೊಸ ದಾಖಲೆ

Published : Mar 09, 2025, 09:50 PM ISTUpdated : Mar 09, 2025, 11:05 PM IST
ನ್ಯೂಜಿಲೆಂಡ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಐಸಿಸಿ ಟೂರ್ನಿಯಲ್ಲಿ ಹೊಸ ದಾಖಲೆ

ಸಾರಾಂಶ

ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ಚಾಂಪಿಯನ್. ನ್ಯೂಜಿಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ  4 ವಿಕೆಟ್ ಗೆಲುವು ದಾಖಲಿಸಿ ಟ್ರೋಫಿ ಗೆದ್ದುಕೊಂಡಿದೆ. 12 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದಿದೆ.

ದುಬೈ(ಮಾ.09)ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸಿತು. ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಕ್ಷಣ ಕ್ಷಣಕ್ಕೂ ಆತಂಕವನ್ನೂ ಹೆಚ್ಚಿಸಿತ್ತು. ರೋಹಿತ್ ಶರ್ಮಾ ಅಬ್ಬರದ ಆರಂಭದ ನಡುವೆಯೂ ಭಾರತ ದಿಢೀರ್ ವಿಕೆಟ್ ಪತನ ಪಂದ್ಯದ ಗತಿ ಬದಲಿಸಿದ್ದು ಸುಳ್ಳಲ್ಲ. ಆದರೆ ಸತತ ಹೋರಾಟ ಟೀಂ ಇಂಡಿಯಾ ಕೈಹಿಡಿಯಿತು . ಆರಂಭದಲ್ಲಿ ರೋಹಿತ್, ಬಳಿಕ ಶ್ರೇಯಸ್ ಅಯ್ಯರ್, ಕೊನೆಯಲ್ಲಿ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಗೆಲುವು ಖಚಿತಪಡಿಸಿದರು. ಭಾರತ 4 ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ ಟ್ರೋಫಿ ಗೆದ್ದುಕೊಂಡಿದೆ. 2024ರಲ್ಲಿ ಐಸಿಸಿ ಟಿ20 ಟ್ರೋಫಿ ಗೆದ್ದಿದ್ದ ಭಾರತ ಇದೀಗ 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ಸತತ 2 ಐಸಿಸಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ. 

ಭಾರತಕ್ಕೆ ನ್ಯೂಜಿಲೆಂಡ್ ಕೊಟ್ಟ ಟಾರ್ಗೆಟ್ 252 ರನ್. ಆದರೆ ನಾಯಕ ರೋಹಿತ್ ಶರ್ಮಾ ಆರಂಭ ನೋಡಿದರೆ ಈ ಟಾರ್ಗೆಟ್ ಅಲ್ಪವಾಯತು ಅನ್ನೋ ಮಟ್ಟಿಗೆ ಇತ್ತು. ಇತ್ತ ಶುಭಮನ್ ಗಿಲ್ ನಿಧಾನದ ಆಟಕ್ಕೆ ಒತ್ತು ನೀಡಿದರೆ, ರೋಹಿತ್ ಮಾತ್ರ ಅಬ್ಬರಿಸಿದರು. ಹೀಗಾಗಿ ಟೀಂ ಇಂಡಿಯಾ ಸ್ಫೋಟಕ ಆರಂಭ ಪಡೆಯಿತು. ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ಒತ್ತಡ ನಿಧಾನವಾಗಿ ಮರೆಯಾಗ ತೊಡಗಿತು. ರೋಹಿತ್ ಹಾಗೂ ಶುಭಮನ್ ಗಿಲ್ ಜೊತೆಯಾಟ ಟೀಂ ಇಂಡಿಯಾ ಆತ್ಮವಿಶ್ವಾಸ ಹೆಚ್ಚಿಸಿತು. ಈ ಜೋಡಿ 100 ರನ್ ಜೊತೆಯಾಟ ನೀಡಿತು.

ಭಾರತದ ರನ್ ವೇಗ ಪಡೆದುಕೊಳ್ಳುತ್ತಿದ್ದಂತೆ ನ್ಯೂಜಿಲೆಂಡ್ ಗೇಮ್ ಪ್ಲಾನ್ ಬದಲಿಸಿತು. ಸ್ಪಿನ್ ದಾಳಿ ಮೂಲಕ ಟೀಂ ಇಂಡಿಯಾ ಕಟ್ಟಿಹಾಕಲು ಮುಂದಾಗಿತ್ತು. ಅಲ್ಲಿಂದ ಟೀಂ ಇಂಡಿಯಾ ವಿಕೆಟ್ ಪತನವೂ ಆರಂಭಗೊಂಡಿತು. ಶುಭಮನ್ ಗಿಲ್ 31 ರನ್ ಸಿಡಿಸಿ ಔಟಾಗಿದ್ದರು. ಗಿಲ್ ವಿಕೆಟ್ ಪತನ ಯಾವುದೇ ಆತಂಕ ತಂದಿರಲಿಲ್ಲ. ಕಾರಣ ಗಿಲ್ 50 ಎಸೆತದಲ್ಲಿ 31 ರನ್ ಸಿಡಿಸಿದ್ದರು. ಹೀಗಾಗಿ ಅಭಿಮಾನಿಗಳು ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಕಾಯುತ್ತಿದ್ದರು. ಆದರೆ ಕೊಹ್ಲಿ ಬಂದ ರಭಸದಲ್ಲಿ ವಿಕೆಟ್ ಕೈಚೆಲ್ಲಿದರು. ಇದು ಆತಂಕ ಸೃಷ್ಟಿಸಿತ್ತು. ಕಾರಣ 105 ರನ್‌ಗೆ ಭಾರತ ಮೊದಲ ವಿಕೆಟ್ ಕಳೆದುಕೊಂಡಿತ್ತು. 106 ರನ್‌ಗೆ ಟೀಂ ಇಂಡಿಯಾ 2ನೇ ವಿಕೆಟ್ ಕಳೆದುಕೊಂಡಿತ್ತು.

ಕೋಹ್ಲಿ ವಿಕೆಟ್ ಪತನಗೊಂಡರೂ ಅಭಿಮಾನಿಗಳಿಗೆ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಕೊಂಚ ಸಮಾಧಾನ ತಂದಿತ್ತು. ಆದರೆ ರೋಹಿತ್ ಶರ್ಮಾ 76 ರನ್ ಸಿಡಿಸಿ ಔಟಾದರು. ಭಾರತದ 3ನೇ ವಿಕೆಟ್ ಪತನ ತೀವ್ರ ಆತಂಕ ಸೃಷ್ಟಿಸಿತ್ತು. ನ್ಯೂಜಿಲೆಂಡ್ ಸ್ಪಿನ್ ದಾಳಿ ಮೂಲಕ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತು. 

ಶ್ರೇಯಸ್ ಅಯ್ಯರ್ ಹಾಗೂ ಅಕ್ಸರ್ ಪಟೇಲ್ ಹೋರಾಟ ಟೀಂ ಇಂಡಿಯಾಗೆ ಸಮಧಾನ ತಂದಿತ್ತು. ಅಕ್ಸರ್ ಹಾಗೂ ಶ್ರೇಯಸ್ ಇಬ್ಬರ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ ನಿಧಾನವಾಗಿ ಆಘಾತದಿಂದ ಚೇತರಿಸಿಕೊಳ್ಳಲು ಆರಂಭಿಸಿತು. ಜವಾಬ್ದಾರಿಗೆ ತಕ್ಕಂತೆ ಆಡಿದ ಶ್ರೇಯಸ್ ಅಯ್ಯರ್ 48 ರನ್ ಸಿಡಿಸಿ ಔಟಾದರು. ಇದು ಮತ್ತೆ ತಳಮಳ ಸೃಷ್ಟಿಸಿತ್ತು. ಇತ್ತ ಅಕ್ಸರ್ ಪಟೇಲ್ ಕೂಡ 29 ರನ್ ಸಿಡಿಸಿ ಔಟಾದರು.  ಅಂತಿಮ ಹಂತದಲ್ಲಿ ಚಿತ್ರಣ ಬದಲಾಯಿತು. ಎಸೆತಗಳು ಕಡಿಮೆಯಾಯಿತು. ರನ್ ಹೆಚ್ಚಾಯಿತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೆಲವೇ ದಿನದಲ್ಲಿ ಸ್ಮೃತಿ ಮಂಧನಾ ಮದುವೆ ಆಘಾತದಿಂದ ಹೊರಬಂದಿದ್ದೇಗೆ? 3 ವರ್ಷ ಹಿಂದೆ ಹೇಳಿದ್ದ ಟಿಪ್ಸ್
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮೊದಲು ಗೊಂದಲಕ್ಕೆ ಸಿಲುಕಿದ ಗೌತಮ್ ಗಂಭೀರ್!