ಇಂಗ್ಲೆಂಡ್ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಸ್ಥಾನ ಪಡೆದ ಆರ್ಶದೀಪ್ ಸಿಂಗ್..!

By Suvarna NewsFirst Published Jul 2, 2022, 8:20 AM IST
Highlights

* ಇಂಗ್ಲೆಂಡ್ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಭಾರತ ತಂಡ ಪ್ರಕಟ
* ಇಂಗ್ಲೆಂಡ್ ಎದುರು ಮೂರು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ
* ಇದೇ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದ ಆರ್ಶದೀಪ್ ಸಿಂಗ್

ನವದೆಹಲಿ(ಜು.02): ಇಂಗ್ಲೆಂಡ್‌ ವಿರುದ್ಧದ ತಲಾ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ಎರಡೂ ವಿಭಾಗಗಳಲ್ಲಿ ತಂಡವನ್ನು ರೋಹಿತ್‌ ಶರ್ಮಾ ಮುನ್ನಡೆಸಲಿದ್ದಾರೆ. ಅವರು ಇಂಗ್ಲೆಂಡ್‌ ವಿರುದ್ಧದ ಕೊನೆ ಟೆಸ್ಟ್‌ಗೆ ಕೋವಿಡ್‌ನಿಂದಾಗಿ ಅಲಭ್ಯರಾದರೂ ಸೀಮಿತ ಓವರ್‌ ಸರಣಿಗೆ ಮರಳಲಿದ್ದಾರೆ.

ಟೆಸ್ಟ್‌ ಆಡುತ್ತಿರುವ ವಿರಾಟ್‌ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ, ಶ್ರೇಯಸ್‌ ಅಯ್ಯರ್‌, ರಿಷಭ್‌ ಪಂತ್‌ ಹಾಗೂ ರವೀಂದ್ರ ಜಡೇಜಾ ಮೊದಲ ಟಿ20ಯಿಂದ ಹೊರಗುಳಿಯಲಿದ್ದು, ಉಳಿದೆರಡು ಪಂದ್ಯಗಳಿಗೆ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಐರ್ಲೆಂಡ್‌ ವಿರುದ್ದದ ಸರಣಿಯಲ್ಲಿ ಆಡಿದ್ದ ಬಹುತೇಕ ಆಟಗಾರರು ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದರೆ ಮೊದಲ ಟಿ20 ಪಂದ್ಯಕ್ಕೆ ಆಯ್ಕೆಯಾಗಿರುವ ಋುತುರಾಜ್‌ ಗಾಯಕ್ವಾಡ್‌, ಸಂಜು ಸ್ಯಾಮ್ಸನ್‌, ರಾಹುಲ್‌ ತ್ರಿಪಾಠಿ, ವೆಂಕಟೇಶ್‌ ಹಾಗೂ ಅರ್ಶದೀಪ್‌ ಸಿಂಗ್‌ ನಂತರದ 2 ಟಿ20 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇನ್ನು, ಐಪಿಎಲ್‌ನಲ್ಲಿ ಮಿಂಚಿದ್ದ ವೇಗಿ ಅರ್ಶದೀಪ್‌ ಸಿಂಗ್‌ ಮೊದಲ ಬಾರಿ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಶಿಖರ್‌ ಧವನ್‌, ಶಮಿ, ಬುಮ್ರಾ, ಜಡೇಜಾ ಕೂಡಾ ತಂಡಕ್ಕೆ ಮರಳಿದ್ದಾರೆ.

ಟಿ20 ಸರಣಿ ಜುಲೈ 7ಕ್ಕೆ ಆರಂಭವಾಗಲಿದ್ದು, ಮೊದಲ ಪಂದ್ಯಕ್ಕೆ ಸೌಥಾಂಪ್ಟನ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಬಳಿಕ ಜುಲೈ 9, 10ಕ್ಕೆ ಉಳಿದೆರಡು ಪಂದ್ಯಗಳು ಕ್ರಮವಾಗಿ ಬಮಿಂಗ್‌ಹ್ಯಾಮ್‌ ಹಾಗೂ ನಾಟಿಂಗ್‌ಹ್ಯಾಮ್‌ನಲ್ಲಿ ನಿಗದಿಯಾಗಿವೆ. ಏಕದಿನ ಪಂದ್ಯಗಳು ಜುಲೈ 12, 14 ಮತ್ತು 17ಕ್ಕೆ ಕ್ರಮವಾಗಿ ಓವಲ್‌, ಲಾರ್ಡ್ಸ್ ಹಾಗೂ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿವೆ.

ಮೊದಲ ಟಿ20 ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಶದೀಪ್‌ ಸಿಂಗ್, ಉಮ್ರಾನ್ ಮಲಿಕ್.

ಎರಡನೇ ಹಾಗೂ ಮೂರನೇ ಟಿ20 ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್‌ ಪಟೇಲ್, ಉಮ್ರಾನ್ ಮಲಿಕ್.

ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್‌, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್ಶದೀಪ್ ಸಿಂಗ್.

click me!