
India vs West Indies 4th T20I: India’s Predicted XI | ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಸದ್ಯ ಆತಿಥೇಯ ಟೀಂ ಇಂಡಿಯಾ 2-1ರ ಮುನ್ನಡೆ ಸಾಧಿಸಿದೆ. ಇದೀಗ ನಾಲ್ಕನೇ ಟಿ20 ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಅಕ್ಟೋಬರ್ 14ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಉಭಯ ತಂಡಗಳು ಕಾದಾಡಲಿವೆ. ಭಾರತ ತಂಡವು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದ್ದರೇ, ಪ್ರವಾಸಿ ವೆಸ್ಟ್ ಇಂಡೀಸ್ ತಂಡವು ನಾಲ್ಕನೇ ಟಿ20 ಪಂದ್ಯ ಗೆದ್ದು, ಸರಣಿ ಜೀವಂತವಾಗಿಟ್ಟುಕೊಳ್ಳಲು ಹೋರಾಡಲಿದೆ. ಹೀಗಾಗಿ ನಾಲ್ಕನೇ ಟಿ20 ಪಂದ್ಯವು ಕುತೂಹಲದ ಕೇಂದ್ರಬಿಂದುವಾಗಿದೆ. ಇಂದೋರ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದ ಬಳಿಕ ಭಾರತ ತಂಡದಲ್ಲಿ ಕೆಲವು ಮೇಜರ್ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಇದೀಗ ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ವೆಸ್ಟ್‌ಇಂಡೀಸ್ ಎದುರಿನ ನಾಲ್ಕನೇ ಟಿ20 ಪಂದ್ಯಕ್ಕೆ ಬಲಿಷ್ಠ ಭಾರತ ಟಿ20 ತಂಡವನ್ನು ಆಯ್ಕೆ ಮಾಡಿದೆ.
ವೆಸ್ಟ್ ಇಂಡೀಸ್ ಎದುರಿನ ಸರಣಿಯಲ್ಲಿ ಮೇಲ್ನೋಟಕ್ಕೆ ಭಾರತ ತಂಡವು ಸಾಕಷ್ಟು ಬಲಿಷ್ಠವಾಗಿಯೇ ಗುರುತಿಸಿಕೊಂಡಿದೆ. ತಂಡದಲ್ಲಿ ಸಾಕಷ್ಟು ಪ್ರಮುಖ ಆಟಗಾರರು ಕಳೆದ ಮೂರು ಪಂದ್ಯಗಳಲ್ಲಿ ಬೆಂಚ್ ಕಾಯಿಸುತ್ತಿದ್ದಾರೆ. ಸಂಜು ಸ್ಯಾಮ್ಸನ್ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದಾರೆ. ಹೀಗಿದ್ದೂ ಹೆಡ್‌ಕೋಚ್ ಗೌತಮ್ ಗಂಭೀರ್, ಸಂಜು ಸ್ಯಾಮ್ಸನ್ ಮೇಲೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದ್ದಾರೆ. ಮತ್ತೊಂದೆಡೆ ಅಭಿಷೇಕ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಹೀಗಿದ್ದೂ ಅಭಿಷೇಕ್ ಶರ್ಮಾ ನಾಲ್ಕನೇ ಪಂದ್ಯದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಮ್ಮಿಯಿದೆ ಎನ್ನಲಾಗುತ್ತಿದೆ.
ಹೌದು, ಅಭಿಷೇಕ್ ಶರ್ಮಾ ಕಳೆದೆರಡು ವರ್ಷಗಳಿಂದ ಸತತವಾಗಿ ಕ್ರಿಕೆಟ್ ಆಡುತ್ತಾ ಬಂದಿದ್ದಾರೆ. ಹೀಗಾಗಿ ವರ್ಕ್‌ಲೋಡ್ ಮ್ಯಾನೇಜ್ ಮಾಡುವ ನಿಟ್ಟಿನಲ್ಲಿ ನಾಲ್ಕನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾಗೆ ವಿಶ್ರಾಂತಿ ನೀಡಿ 15 ವರ್ಷದ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ. ಮತ್ತೆ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಕಡಿಮೆ.
ಇನ್ನು ಕಳೆದ ಪಂದ್ಯದ ಹೀರೋ ಅರ್ಶದೀಪ್ ಸಿಂಗ್‌ಗೂ ನಾಲ್ಕನೇ ಪಂದ್ಯದ ಮಟ್ಟಿಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದ್ದು, ಯುವ ವೇಗಿಗಳಾದ ಪ್ರಿನ್ಸ್ ಯಾದವ್ ಹಾಗೂ ಮಯಾಂಕ್ ಯಾದವ್ ಮೇಲೆ ಟೀಂ ಮ್ಯಾನೇಜ್‌ಮೆಂಟ್ ಹೆಚ್ಚು ವಿಶ್ವಾಸವಿಟ್ಟಿದೆ. ಹೀಗಾಗಿ ಅರ್ಶದೀಪ್ ಸಿಂಗ್‌ಗೆ ವಿಶ್ರಾಂತಿ ನೀಡಿ ಕುಲ್ದೀಪ್ ಯಾದವ್‌ಗೆ ಮತ್ತೊಮ್ಮೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ನಿರೀಕ್ಷೆಯಿದೆ.
ಹೈದರಾಬಾದ್ ಮೈದಾನವು ಸಾಕಷ್ಟು ದೊಡ್ಡ ಮೈದಾನವಾಗಿರುವುದರಿಂದ ಇಲ್ಲಿ ವೇಗದ ಬೌಲರ್‌ಗಳಿಗಿಂತ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಬಲ್ಲರು. ಹೀಗಾಗಿಯೇ ಕೇವಲ ಇಬ್ಬರು ತಜ್ಞ ವೇಗಿಗಳ ಜತೆ ಹೆಚ್ಚುವರಿ ಸ್ಪಿನ್ನರ್ ಕಣಕ್ಕಿಳಿಸಲು ಶ್ರೇಯಸ್ ಅಯ್ಯರ್ ಒಲವು ತೋರಬಹುದು. ಮುಂಬರುವ ನ್ಯೂಜಿಲೆಂಡ್ ಎದುರಿನ ಟಿ20 ಸರಣಿ ಗಮನದಲ್ಲಿಟ್ಟುಕೊಂಡು ಅರ್ಶದೀಪ್ ಸಿಂಗ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮಯಾಂಕ್ ಯಾದವ್, ಪ್ರಿನ್ಸ್ ಯಾದವ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.