
ಮುಂಬೈ: ಇದೇ ಡಿಸೆಂಬರ್ 09ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ಎದುರಿನ 5 ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದ್ದು, ಸೂರ್ಯಕುಮಾರ್ ಯಾದವ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಒಂದು ಕಂಡೀಷನ್ ಮೇರೆಗೆ ಶುಭ್‌ಮನ್ ಗಿಲ್‌ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.
ಹೌದು, ಟಿ20 ಸರಣಿಗೂ ಮುನ್ನ ಶುಭ್‌ಮನ್ ಗಿಲ್, ಬಿಸಿಸಿಐ ಮೆಡಿಕಲ್ ತಂಡದಿಂದ ಫಿಟ್ನೆಸ್ ಟೆಸ್ಟ್ ಕ್ಲಿಯರ್ ಮಾಡಿದರಷ್ಟೇ ಗಿಲ್ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಶುಭ್‌ಮನ್ ಗಿಲ್, ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್ ವೇಳೆ ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಇದಾದ ಬಳಿಕ ಗಿಲ್ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ.
ಇನ್ನು ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಆಟಗಾರರು ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಲ್ಲಿ ಸ್ಥಾನ ಪಡೆದಿರಲಿಲ್ಲ. ಅದರಲ್ಲೂ 30 ವರ್ಷದ ಹಾರ್ದಿಕ್ ಪಾಂಡ್ಯ ಸೆಪ್ಟೆಂಬರ್ 26ರಂದು ಏಷ್ಯಾಕಪ್ ಟೂರ್ನಿಯ ಶ್ರೀಲಂಕಾ ಎದುರಿನ ಸೂಪರ್ ಹಂತದ ಪಂದ್ಯದ ವೇಳೆಯಲ್ಲಿ ಗಾಯಗೊಂಡು ಭಾರತ ತಂಡದಿಂದ ಹೊರಬಿದ್ದಿದ್ದರು. ಇತ್ತೀಚೆಗಷ್ಟೇ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಪಂಜಾಬ್ ವಿರುದ್ದ ಬರೋಡಾ ಪರ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಅಜೇಯ 77 ರನ್ ಸಿಡಿಸುವ ಮೂಲಕ ತಮ್ಮ ಫಿಟ್ನೆಸ್ ಸಾಬೀತುಪಡಿಸಿದ್ದರು.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20 ಸರಣಿಯು ಡಿಸೆಂಬರ್ 09ರಿಂದ ಕಟಕ್‌ನಲ್ಲಿ ಆರಂಭವಾಗಲಿದ್ದು, ಇದಾದ ಬಳಿಕ ಮುಲ್ಲಾನ್‌ಪುರ್, ಧರ್ಮಶಾಲಾ, ಲಖನೌ ಹಾಗೂ ಅಹಮದಾಬಾದ್‌ನಲ್ಲಿ ನಡೆಯಲಿದೆ.
ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.