ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್‌ಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ: ಎರಡು ಯುವ ವೇಗಿಗಳಿಗೆ ಸ್ಥಾನ

By Naveen KodaseFirst Published Sep 9, 2024, 11:33 AM IST
Highlights

ಬಾಂಗ್ಲಾದೇಶ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರಿಷಭ್ ಪಂತ್ ಕಮ್‌ಬ್ಯಾಕ್ ಮಾಡಿದ್ದಾರೆ

ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕೊನೆಗೂ ಟೆಸ್ಟ್‌ ಕ್ರಿಕೆಟ್‌ಗೆ ವಾಪಾಸ್ಸಾಗಿದ್ದಾರೆ. ಬಾಂಗ್ಲಾದೇಶ ಎದುರು ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಬರೋಬ್ಬರಿ 20 ತಿಂಗಳ ಬಳಿಕ ರಿಷಭ್ ಪಂತ್, ಭಾರತ ಟೆಸ್ಟ್‌ ತಂಡಕ್ಕೆ ವಾಪಾಸ್ಸಾಗಿದ್ದಾರೆ. 

ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಭಾರತ ತಂಡ ಕೂಡಿಕೊಂಡಿದ್ದಾರೆ. ಆಕಾಶ್‌ ದೀಪ್ ಹಾಗೂ ಎಡಗೈ ವೇಗಿ ಯಶ್ ದಯಾಳ್ ಇದೇ ಮೊದಲ ಬಾರಿಗೆ ಭಾರತ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

Latest Videos

ಟೀಂ ಇಂಡಿಯಾ ಪ್ರಿನ್ಸ್ ಶುಭ್‌ಮನ್‌ ಗಿಲ್ ಗರ್ಲ್‌ಫ್ರೆಂಡ್ಸ್‌ ಒಬ್ಬಿಬ್ಬರಲ್ಲ..! ಗಿಲ್ ನಿಜವಾದ ಗೆಳತಿ ಯಾರು?

2022ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಎದುರು ಎರಡನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ರಿಷಭ್ ಪಂತ್ ಟೀಂ ಇಂಡಿಯಾ ಪರ ಕೊನೆಯದಾಗಿ ಬಿಳಿ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಹೊಸವರ್ಷದ ಮುನ್ನ ದಿನ ಭೀಕರ ರಸ್ತೆ ಅಪಘಾತಕ್ಕೊಳಗಾಗಿದ್ದರು. 2024ರ ಟಿ20 ವಿಶ್ವಕಪ್ ಟೂರ್ನಿ ಮೂಲಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದ ಪಂತ್, ಇದೀಗ ಟೆಸ್ಟ್‌ ತಂಡಕ್ಕೂ ಎಂಟ್ರಿಕೊಟ್ಟಿದ್ದಾರೆ. ಇನ್ನು ಅನುಭವಿ ವೇಗಿ ಮೊಹಮ್ಮದ್ ಶಮಿ ಅವರು ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. 2023ರ ಏಕದಿನ ವಿಶ್ವಕಪ್ ಬಳಿಕ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶಮಿ, ಬಾಂಗ್ಲಾದೇಶ ಎದುರಿನ ಎರಡನೇ ಪಂದ್ಯಕ್ಕೆ ಟೀಂ ಇಂಡಿಯಾ ಕೂಡಿಕೊಳ್ಳುವ ನಿರೀಕ್ಷೆಯಿದೆ.

🚨 NEWS 🚨- Team India's squad for the 1st Test of the IDFC FIRST Bank Test series against Bangladesh announced.

Rohit Sharma (C), Yashasvi Jaiswal, Shubman Gill, Virat Kohli, KL Rahul, Sarfaraz Khan, Rishabh Pant (WK), Dhruv Jurel (WK), R Ashwin, R Jadeja, Axar Patel, Kuldeep… pic.twitter.com/pQn7Ll7k3X

— BCCI (@BCCI)

ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಪಂದ್ಯವು ಸೆಪ್ಟೆಂಬರ್ 19ರಿಂದ ಚೆನ್ನೈನಲ್ಲಿ ಆರಂಭವಾದರೆ, ಎರಡನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್‌ 27ರಿಂದ ಕಾನ್ಪುರದಲ್ಲಿ ನಡೆಯಲಿದೆ. ಉಭಯ ತಂಡಗಳು ಇದುವರೆಗೂ 13 ಟೆಸ್ಟ್‌ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 11 ಪಂದ್ಯಗಳನ್ನು ಜಯಿಸಿದರೆ, ಎರಡು ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿವೆ. 

RCBಗೆ ಆ ಪ್ಲೇಯರ್ ಬೇಕೇ ಬೇಕು ಅಂತ ಅಭಿಮಾನಿಗಳ ಪಟ್ಟು..! ಫ್ಯಾನ್ಸ್ ಬೇಡಿಕೆ ಈಡೇರಿಸುತ್ತಾ ಬೆಂಗಳೂರು ಫ್ರಾಂಚೈಸಿ..?

ಬಾಂಗ್ಲಾದೇಶ ಎದುರಿನ ತಂಡಕ್ಕೆ ಭಾರತ ತಂಡ ಹೀಗಿದೆ ನೋಡಿ:

ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್(ವಿಕೆಟ್ ಕೀಪರ್), ಧೃವ್ ಜುರೆಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್‌ ದಯಾಲ್.

click me!