ಟಿ20 ವಿಶ್ವಕಪ್‌ಗೆ ಇಂದು ಭಾರತ ತಂಡ ಪ್ರಕಟ ನಿರೀಕ್ಷೆ: ಮೇ 01 ಡೆಡ್‌ಲೈನ್‌

By Kannadaprabha NewsFirst Published Apr 30, 2024, 9:10 AM IST
Highlights

ಟೂರ್ನಿಯಲ್ಲಿ 20 ತಂಡಗಳು ಪಾಲ್ಗೊಳ್ಳಲಿದ್ದು, ನ್ಯೂಜಿಲೆಂಡ್‌ ಹೊರತುಪಡಿಸಿ ಇತರೆಲ್ಲಾ ತಂಡಗಳು ಇನ್ನಷ್ಟೇ ತಂಡ ಪ್ರಕಟಿಸಬೇಕಿದೆ. ಟೀಂ ಇಂಡಿಯಾದ ಆಯ್ಕೆಗಾಗಿ ಮಂಗಳವಾರ ಆಯ್ಕೆ ಸಮಿತಿಯು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರ ಜೊತೆ ಅಹಮದಾಬಾದ್‌ನಲ್ಲಿ ಸಭೆ ನಡೆಸಲಿದ್ದಾರೆ. ಬುಧವಾರ ತಂಡ ಅಧಿಕೃತವಾಗಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

ನ್ಯೂಯಾರ್ಕ್‌(ಏ.30): ಜೂ.1ರಿಂದ 29ರ ವರೆಗೆ ಅಮೆರಿಕ ಹಾಗೂ ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಟಿ20 ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಲು ಮೇ 1 ಕೊನೆ ದಿನವಾಗಿದೆ. ಹೀಗಾಗಿ ಭಾರತ ಸೇರಿದಂತೆ ಕೆಲ ತಂಡಗಳು ಮಂಗಳವಾರ(ಏ.30) ಆಟಗಾರರ ಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಟೂರ್ನಿಯಲ್ಲಿ 20 ತಂಡಗಳು ಪಾಲ್ಗೊಳ್ಳಲಿದ್ದು, ನ್ಯೂಜಿಲೆಂಡ್‌ ಹೊರತುಪಡಿಸಿ ಇತರೆಲ್ಲಾ ತಂಡಗಳು ಇನ್ನಷ್ಟೇ ತಂಡ ಪ್ರಕಟಿಸಬೇಕಿದೆ. ಟೀಂ ಇಂಡಿಯಾದ ಆಯ್ಕೆಗಾಗಿ ಮಂಗಳವಾರ ಆಯ್ಕೆ ಸಮಿತಿಯು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರ ಜೊತೆ ಅಹಮದಾಬಾದ್‌ನಲ್ಲಿ ಸಭೆ ನಡೆಸಲಿದ್ದಾರೆ. ಬುಧವಾರ ತಂಡ ಅಧಿಕೃತವಾಗಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ.

IPL 2024 ಕೆಕೆಆರ್‌ ಚಾಂಪಿಯನ್‌ ಆಟಕ್ಕೆ ಕ್ಯಾಪಿಟಲ್ಸ್‌ ಧೂಳೀಪಟ

ಐಪಿಎಲ್‌ನಲ್ಲಿ ಮಿಂಚಿರುವ ಆಟಗಾರರನ್ನು ನೇರವಾಗಿ ವಿಶ್ವಕಪ್‌ಗೆ ಆಯ್ಕೆ ಮಾಡುವ ಬದಲು ಈಗಾಗಲೇ ಭಾರತ ತಂಡದಲ್ಲಿ ಆಡಿರುವ ಹಾಗೂ ಸದ್ಯ ಉತ್ತಮ ಲಯದಲ್ಲಿರುವ ಆಟಗಾರರನ್ನೇ ಆಯ್ಕೆ ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಹೊಸ ಮುಖಗಳಿಗೆ ಅವಕಾಶ ಸಾಧ್ಯತೆ ಕಡಿಮೆ.

ವಿಕೆಟ್‌ ಕೀಪರ್‌ಗಳಾಗಿ ಸಂಜು ಸ್ಯಾಮ್ಸನ್‌, ರಿಷಭ್‌ ಪಂತ್‌ ಇಬ್ಬರೂ ಆಯ್ಕೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಹಾರ್ದಿಕ್‌ ಪಾಂಡ್ಯ ಬದಲು ಪಂತ್‌ಗೆ ಉಪನಾಯಕತ್ವ ಸಿಗಬಹುದು ಎನ್ನಲಾಗುತ್ತಿದೆ. ಜೊತೆಗೆ ಕೆ.ಎಲ್‌.ರಾಹುಲ್‌, ಯಜುವೇಂದ್ರ ಚಹಲ್‌ ಕೂಡಾ ವಿಶ್ವಕಪ್‌ ತಂಡದ ಆಯ್ಕೆ ರೇಸ್‌ನಲ್ಲಿದ್ದಾರೆ.

ಭಾರತದ ಸಂಭಾವ್ಯರ ಪಟ್ಟಿ

ರೋಹಿತ್‌ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಶಿವಂ ದುಬೆ, ರಿಂಕು ಸಿಂಗ್‌, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬೂಮ್ರಾ, ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌/ಮೊಹಮದ್‌ ಸಿರಾಜ್‌.

ಆಯ್ಕೆ ರೇಸ್‌ನಲ್ಲಿರುವವರು: ಕೆ.ಎಲ್‌.ರಾಹುಲ್‌, ಯಜುವೇಂದ್ರ ಚಹಲ್‌, ರವಿ ಬಿಷ್ಣೋಯ್‌, ಸಂದೀಪ್‌ ಶರ್ಮಾ.

ಚುಟುಕು ಕ್ರಿಕೆಟ್‌ ವಿಶ್ವಕಪ್‌ಗೆ ಬಲಿಷ್ಠ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರಕಟ

ಮುಂಬರುವ ಐಸಿಸಿ ಟಿ20  ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪ್ರಕಟಗೊಂಡಿದ್ದು, ಕೇನ್ ವಿಲಿಯಮ್ಸನ್ ಕಿವೀಸ್ ತಂಡವನ್ನು ಮುನ್ನಡೆಸಲಿದ್ದಾರೆ. 9ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಜೂನ್ 01ರಿಂದ ಆರಂಭವಾಗಲಿದೆ.

'ಕೂತು ಮಾತಾಡೋದು ಸುಲಭ..': ನಗುನಗುತ್ತಲೇ ಟೀಕಾಕಾರರ ಬಾಯಿ ಮುಚ್ಚಿಸಿದ ವಿರಾಟ್ ಕೊಹ್ಲಿ

ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವು 'ಸಿ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಜೂನ್ 07ರಂದು ಗಯಾನದಲ್ಲಿ ಆಫ್ಘಾನಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇನ್ನು ಇದೇ ಗುಂಪಿನಲ್ಲಿ ಆತಿಥೇಯ ವೆಸ್ಟ್ ಇಂಡೀಸ್, ಉಗಾಂಡ ಹಾಗೂ ಪಪುವಾ ನ್ಯೂಗಿನಿ ತಂಡಗಳು ಸ್ಥಾನ ಪಡೆದಿವೆ.

ಟಿ20 ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ ತಂಡ ಹೀಗಿದೆ ನೋಡಿ:

ಕೇನ್ ವಿಲಿಯಮ್ಸನ್(ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮಿಚೆಲ್ ಬ್ರಾಸ್‌ವೆಲ್, ಮಾರ್ಕ್‌ ಚಾಂಪ್ಮನ್, ಡೆವೊನ್ ಕಾನ್‌ವೇ, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಡೇರಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಫ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ. 
ಮೀಸಲು ಆಟಗಾರ: ಬೆನ್ ಸೀರ್ಸ್

click me!