ಪಾಕಿಸ್ತಾನ ಮಣಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಸ್ಥಾನ ಖಚಿತಪಡಿಸಿದ ಭಾರತ

Published : Feb 23, 2025, 09:47 PM ISTUpdated : Feb 23, 2025, 09:53 PM IST
ಪಾಕಿಸ್ತಾನ ಮಣಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಸ್ಥಾನ ಖಚಿತಪಡಿಸಿದ ಭಾರತ

ಸಾರಾಂಶ

ದೇಶಾದ್ಯಂತ ಸಂಡೇ ಮಜಾ  ಜೋರಾಗಿದೆ. ಕಾರಣ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ದ ಭಾರತದ ಭರ್ಜರಿ ಗೆಲುವು. ಇಷ್ಟೇ ಅಲ್ಲ ಭಾರತದ ಸೆಮಿಫೈನಲ್ ಸ್ಥಾನ ಕೂಡ ಖಚಿತಗೊಂಡಿದೆ. 

ದುಬೈ(ಫೆ.23) ಭಾರತದೆಲ್ಲೆಡೆ ಸಂಭ್ರಮ ಜೋರಾಗಿದೆ. ಭಾನುವಾರ ಕ್ರಿಕೆಟ್ ಪ್ರಿಯರು ಮಾತ್ರವಲ್ಲ, ಬಹುತೇಕರು ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ವೀಕ್ಷಿಸಿದ್ದಾರೆ. ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬದ್ಧವೈರಿ ಪಾಕಿಸ್ತಾನ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದೆ. ದುಬೈನಲ್ಲಿ ನಡದ ಈ ಪಂದ್ಯದಲ್ಲಿ ಭಾರತ ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಮಿಂಚಿನ ಪ್ರದರ್ಶನ ನೀಡಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಸೆಮಿಫೈನಲ್ ಸ್ಥಾನ ಖಚಿತಪಡಿಸಿದೆ. 

ಈ ಪಂದ್ಯದಲ್ಲಿ ಹಲವು ವಿಶೇಷತೆಗಳಿವೆ. ಎಲ್ಲಕ್ಕಿಂತ ಮಿಗಿಲಾಗಿ ಪಾಕಿಸ್ತಾನದ ವಿರುದ್ಧ ಭಾರತದ ಗೆಲುವು ಯಾವತ್ತೂ ಸ್ಪೆಷಲ್. ಇದರಲ್ಲಿ ಎರಡು ಮಾತಿಲ್ಲ. ಜೊತೆಗೆ ಸೆಮಿಫೈನಲ್ ಸ್ಥಾನ ಮಾತ್ರವಲ್ಲ, ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಈ ಮೂಲಕ ಪಾಕಿಸ್ತಾನ ವಿರುದ್ಧ ಯಾವತ್ತೂ ವಿರಾಟ್ ಕೊಹ್ವಿ ಆರ್ಭಟಿಸುತ್ತಾರೆ ಅನ್ನೋದು ಮತ್ತೆ ಸಾಬೀತುಪಡಿಸಿದ್ದಾರೆ. ಅತೀವ ಒತ್ತಡ, ಬದ್ಧವೈರಿಗಳ ಕದನ, ಚೇಸಿಂಗ್ ವೇಳೆ ಕೊಹ್ಲಿ ಮಾಸ್ಟರ್ ಅನ್ನೋದು ಸಾಬೀತಾಗಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿ ಬೇಗನೆ ಲಯ ಕಂಡುಕೊಂಡಿರುವುದು ಟೀಂ ಇಂಡಿಯಾದ ಆತ್ಮವಿಶ್ವಾಸ ಹೆಚ್ಚಿಸಿದೆ. 

ಪಾಕಿಸ್ತಾನ ತಂಡವನ್ನು 241 ರನ್‌ಗೆ ಆಲೌಟ್ ಮಾಡಿದ ಟೀಂ ಇಂಡಿಯಾ ಚೇಸಿಂಗ್ ಇಳಿದಿತ್ತು. ರೋಹಿತ್ ಶರ್ಮಾ ಹಾಗೂ ಶುಬಮನ್ ಗಿಲ್ ಉತ್ತಮ ಆರಂಭ ನೀಡಿದರು. ಸಿಕ್ಸರ್ ಮೂಲಕ ನಾಯಕ ರೋಹಿತ್ ಶರ್ಮಾ ಅಬ್ಬರಿಸಿದ್ದರು. ಆದರೆ ರೋಹಿತ್ 20 ರನ್ ಸಿಡಿಸಿ ನಿರ್ಗಮಿಸಿದರು. ಗಿಲ್ ಹಾಗೂ ವಿರಾಟ್ ಕೊಹ್ಲಿ ಜೊತೆಯಾಟ ಪಾಕಿಸ್ತಾನದ ಎಲ್ಲಾ ಲೆಕ್ಕಾಚಾರ ಉಲ್ಟಾ ಮಾಡಿತು. ಗಿಲ್ 46 ರನ್ ಸಿಡಿಸಿ ಔಟಾದರು.

ಇತ್ತ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಜೊತೆಯಾಟ ಭಾರತದ ಗೆಲುವು ಖಚಿತಪಡಿಸಿತು. ಕೊಹ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಇತ್ತ ಶ್ರೇಯಸ್ ಅಯ್ಯರ್ ಕೂಡ ಅರ್ಧಶತಕ ಸಿಡಿಸಿದರು. ಹಾಫ್ ಸೆಂಚುರಿ ಬಳಿಕ ವಿರಾಟ್ ಕೊಹ್ಲಿ ಸ್ಟ್ರೈಕ್ ರೇಟ್ ಹೆಚ್ಚಿಸಿದರು. ಇದು ಭಾರತದ ಗೆಲುವಿನ ವೇಗವನ್ನು ಹೆಚ್ಚಿಸಿತು. 

ಶ್ರೇಯಸ್ ಅಯ್ಯರ್ 56 ರನ್ ಸಿಡಿಸಿ ಔಟಾದರು. ಇತ್ತ ಹಾರ್ದಿಕ್ ಪಾಂಡ್ಯ 8 ರನ್ ಸಿಡಿಸಿ ಔಟಾದರು. ಅಭಿಮಾನಿಗಳ ಹರ್ಷದ್ಘಾರ ಹೆಚ್ಚಾಗಿತ್ತು. ಕೇವಲ ಗೆಲುವು ಮಾತ್ರವಲ್ಲ, ಕೊಹ್ಲಿ ಸೆಂಚುರಿಗಾಗಿ ಅಭಿಮಾನಿಗಳು ಪ್ರಾರ್ಥಿಸಿತು. ಎರಡೂ ಆಸೆಗಳೂ ಈಡೇರಿತ್ತು. ಬೌಂಡರಿ ಸಿಡಿಸುವ ಮೂಲಕ ಭಾರತ ಗೆಲುವಿನ ದಡ ಸೇರಿದರೆ ಇತ್ತ ಕೊಹ್ಲಿ ಶತಕ ಪೂರೈಸಿದರು. ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸಿದ ಭಾರತ ಸೆಮಿಫೈನಲ್ ಸ್ಥಾನ ಖಚಿತಪಡಿಸಿತು. ಇತ್ತ ಪಾಕಿಸ್ತಾನದ ಚಾಂಪಿಯನ್ಸ್ ಟ್ರೋಫಿ ಪಯಣ ಬಹುತೇಕ ಅಂತ್ಯಗೊಂಡಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!