ಏಷ್ಯಾಕಪ್ ಹಾಗೂ ವಿಶ್ವಕಪ್ ಟೂರ್ನಿಗೆ ಇಂದು ಭಾರತ ತಂಡ ಪ್ರಕಟ; ಈ ಸಮಯಕ್ಕೆ ಸರಿಯಾಗಿ ಅಧಿಕೃತ ಘೋಷಣೆ!

Published : Aug 19, 2025, 11:53 AM IST
Gautam Gambhir outbursts

ಸಾರಾಂಶ

2025ರ ಏಷ್ಯಾಕಪ್ ಮತ್ತು ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಗಳಿಗೆ ಭಾರತ ತಂಡಗಳನ್ನು ಪ್ರಕಟಿಸಲಾಗಿದೆ. ಏಷ್ಯಾಕಪ್ ಸೆಪ್ಟೆಂಬರ್ 9 ರಿಂದ ಯುಎಇನಲ್ಲಿ ಆರಂಭವಾಗಲಿದ್ದು, ವಿಶ್ವಕಪ್ ಸೆಪ್ಟೆಂಬರ್ 30 ರಿಂದ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.

ಬೆಂಗಳೂರು: ಬಹುನಿರೀಕ್ಷಿತ 2025ರ ಏಷ್ಯಾಕಪ್ ಟೂರ್ನಿ ಹಾಗೂ 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. 2025ರ ಏಷ್ಯಾಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ 09ರಿಂದ ಆರಂಭವಾಗಲಿದೆ. ಇನ್ನು 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ 30ರಿಂದ ಆರಂಭವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ಮಹಿಳಾ ಕ್ರಿಕೆಟ್‌ ತಂಡವು ಪೂರ್ವತಯಾರಿ ರೂಪದಲ್ಲಿ ಆಸ್ಟ್ರೇಲಿಯಾ ವಿರುದ್ದ ಏಕದಿನ ಸರಣಿಯನ್ನಾಡಲಿದೆ. ಈ ಸರಣಿಗೂ ಇಂದೇ ಭಾರತ ತಂಡವನ್ನು ಆಯ್ಕೆ ಮಾಡಲಾಗುವುದು. ಈ ಕುರಿತಂತೆ ಭಾರತ ಪುರುಷರ ತಂಡದ ಆಯ್ಕೆ ಸಮಿತಿ ಹಾಗೂ ಮಹಿಳಾ ತಂಡದ ಆಯ್ಕೆ ಸಮಿತಿ ಇಂದು ಪ್ರೆಸ್ ಕಾನ್ಫರೆನ್ಸ್ ನಡೆಸಿ ತಂಡವನ್ನು ಘೋಷಿಸಲಾಗುತ್ತದೆ. ಈ ಪ್ರೆಸ್ ಕಾನ್ಫರೆನ್ಸ್ ಎಷ್ಟು ಹೊತ್ತಿಗೆ ಆರಂಭವಾಗಲಿದೆ, ಯಾವ ಚಾನೆಲ್‌ನಲ್ಲಿ ಈ ಪ್ರೆಸ್ ಕಾನ್ಫರೆನ್ಸ್ ಪ್ರಸಾರವಾಗಲಿದೆ ಎನ್ನುವುದನ್ನು ನೋಡೋಣ ಬನ್ನಿ.

ಇವತ್ತಿನ ದಿನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಸಾಕಷ್ಟು ಮಹತ್ವದ ದಿನ ಎನಿಸಿಕೊಂಡಿದೆ. ಬಿಸಿಸಿಐ ಆಯ್ಕೆ ಸಮಿತಿಯು ಇಂದು ಎರಡು ಮಹತ್ವದ ಟೂರ್ನಿಗಳಿಗೆ ಭಾರತ ಕ್ರಿಕೆಟ್ ತಂಡವನ್ನು ಘೋಷಿಸಲಿದೆ. ಮೊದಲಿಗೆ 2025ರ ಏಷ್ಯಾಕಪ್ ಟೂರ್ನಿಗೆ ಭಾರತ ಪುರುಷರ ಕ್ರಿಕೆಟ್ ತಂಡ ಪ್ರಕಟವಾಗಲಿದೆ. ಇದಾದ ಬಳಿಕ 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟವಾಗಲಿದೆ. ಮೊದಲಿಗೆ ಅಜಿತ್‌ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಇಂದು ಮಧ್ಯಾಹ್ನ 1.30ಕ್ಕೆ ಪ್ರೆಸ್ ಕಾನ್ಫರೆನ್ಸ್ ನಡೆಸಿ, ಏಷ್ಯಾಕಪ್ ಟೂರ್ನಿಗೆ ಭಾರತ ಪುರುಷರ ಕ್ರಿಕೆಟ್ ತಂಡವನ್ನು ಘೋಷಿಸಲಿದೆ. ಇನ್ನೊಂದೆಡೆ ಇಂದು ಮಧ್ಯಾಹ್ನ ಮೂರು ಗಂಟೆಗೆ ಬಿಸಿಸಿಐ ಮಹಿಳಾ ಆಯ್ಕೆ ಸಮಿತಿಯು ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಘೋಷಿಸಲಿದೆ. ಈ ಎರಡು ಪ್ರೆಸ್ ಕಾನ್ಫರೆನ್ಸ್‌ಗಳು ಸ್ಟಾರ್ ಸ್ಪೋರ್ಟ್ಸ್‌ 1 ಹಾಗೂ ಜಿಯೋಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ.

 

2025ರ ಏಷ್ಯಾಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದೆಯಾದರೂ, ಈ ಪಂದ್ಯಾವಳಿಗಳು ಯುಎಇನ ದುಬೈ ಹಾಗೂ ಅಬುದಾಬಿಯಲ್ಲಿ ನಡೆಯಲಿದೆ. ಇನ್ನು 2025ರ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಆಯೋಜನೆಗೊಳ್ಳುತ್ತಿದೆ. ಸೆಪ್ಟೆಂಬರ್ 10ರಂದು ಆತಿಥೇಯ ಟೀಂ ಇಂಡಿಯಾ ಯುಎಇ ವಿರುದ್ದ ಕಣಕ್ಕಿಳಿಯುವ ಮೂಲಕ ಏಷ್ಯಾಕಪ್ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇನ್ನೊಂದೆಡೆ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಭಾರತ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸಲು ರೆಡಿಯಾಗಿದ್ದಾರೆ. ಇನ್ನು ಉಪನಾಯಕನಾಗಿ ಯಾರು ನೇಮಕವಾಗಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.

2023ರಲ್ಲಿ ನಡೆದ ಕಳೆದ ಬಾರಿಯ ಏಷ್ಯಾಕಪ್ ಟೂರ್ನಿಯು ಏಕದಿನ ಮಾದರಿಯಲ್ಲಿ ನಡೆದಿತ್ತು. ಆಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ಈ ಬಾರಿಯ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದರಿಂದ, ಸೂರ್ಯ ನಾಯಕತ್ವದಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ, ಮತ್ತೊಮ್ಮೆ ಏಷ್ಯಾಕಪ್ ಜಯಿಸುವ ವಿಶ್ವಾಸದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಏಷ್ಯಾಕಪ್ ಟೂರ್ನಿಯನ್ನು ಟಿ20 ಮಾದರಿಯಲ್ಲಿ ಅಯೋಜಿಸುತ್ತಿದೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್.

ಇನ್ನೊಂದೆಡೆ 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ 30ರಿಂದ ಆರಂಭವಾಗಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಭಾರತ ತಂಡವು ಶ್ರೀಲಂಕಾ ವಿರುದ್ದ ಕಣಕ್ಕಿಳಿಯುವ ಮೂಲಕ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ