* ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ
* ಟೆಸ್ಟ್ ಉಪನಾಯಕರಾಗಿ ರೋಹಿತ್ ಶರ್ಮಾ ನೇಮಕ
* ಇನ್ನು ಏಕದಿನ ಕ್ರಿಕೆಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ನೇಮಕ
ನವದೆಹಲಿ(ಡಿ.08): ಬಹುನಿರೀಕ್ಷಿತ ದಕ್ಷಿಣ ಆಫ್ರಿಕಾ ಎದುರಿನ ಸರಣಿಗೂ ಮುನ್ನ ಮಹತ್ವದ ಪ್ರಕಟಣೆಯೊಂದು ಹೊರಬಿದ್ದಿದ್ದು, ಭಾರತ ಏಕದಿನ ಕ್ರಿಕೆಟ್ ತಂಡಕ್ಕೂ ನಾಯಕನಾಗಿ ರೋಹಿತ್ ಶರ್ಮಾ(Rohit Sharma) ನೇಮಕವಾಗಿದ್ದಾರೆ. ಟಿ20 ವಿಶ್ವಕಪ್ (ICC T20 World Cup) ಬಳಿಕ ವಿರಾಟ್ ಕೊಹ್ಲಿ (Virat Kohli) ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ಏಕದಿನ ಕ್ರಿಕೆಟ್ ತಂಡಕ್ಕೆ ರೋಹಿತ್ ಶರ್ಮಾಗೆ ನಾಯಕತ್ವ ಪಟ್ಟ ಕಟ್ಟಲಾಗಿದೆ. ಇನ್ನು ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಾಗಿ ಮುಂದುವರೆಯಲಿದ್ದಾರೆ, ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಉಪನಾಯಕರಾಗಿ ರೋಹಿತ್ ಶರ್ಮಾ ಕಾರ್ಯನಿರ್ವಹಿಸಲಿದ್ದಾರೆ.
ಇದೀಗ ಡಿಸೆಂಬರ್ 26ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಚೇತನ್ ಶರ್ಮಾ (Chethan Sharma) ನೇತೃತ್ವದ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಿದೆ. ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಅಜಿಂಕ್ಯ ರಹಾನೆ (Ajinkya Rahane) ಟೆಸ್ಟ್ ಉಪನಾಯಕ ಪಟ್ಟ ಕಳೆದುಕೊಂಡಿದ್ದಾರೆ. ಆದರೆ ಟೆಸ್ಟ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಮುಂಬೈ ಮೂಲದ ರಹಾನೆ ಯಶಸ್ವಿಯಾಗಿದ್ದಾರೆ. ಇದೀಗ ರಹಾನೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಹನುಮ ವಿಹಾರಿ (Hanuma Vihari) ಜತೆ ಪ್ರಬಲ ಪೈಪೋಟಿ ನಡೆಸಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಇನ್ನು ತವರಿನಲ್ಲಿ ಕಿವೀಸ್ ವಿರುದ್ದ ಮಿಂಚಿನ ಪ್ರದರ್ಶನ ತೋರಿದ್ದ ಶ್ರೇಯಸ್ ಅಯ್ಯರ್ ಹಾಗೂ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ 'ಎ' ಪರ ಗಮನಾರ್ಹ ಪ್ರದರ್ಶನ ತೋರಿದ್ದ ಹನುಮ ವಿಹಾರಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
The All-India Senior Selection Committee also decided to name Mr Rohit Sharma as the Captain of the ODI & T20I teams going forward. | pic.twitter.com/hcg92sPtCa
— BCCI (@BCCI)
undefined
ಇನ್ನುಳಿದಂತೆ ನ್ಯೂಜಿಲೆಂಡ್ ವಿರುದ್ದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ (Jasprit Bumrah) ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಕೂಡಾ ತಂಡ ಕೂಡಿಕೊಂಡಿದ್ದಾರೆ. ಇದೆಲ್ಲದರ ನಡುವೆ ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಸ್ಟಾರ್ ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ (Ravindra Jadeja) ಹಾಗೂ ಅಕ್ಷರ್ ಪಟೇಲ್ (Axar Patel) ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಬಿದ್ದಿದ್ದಾರೆ. ಇನ್ನು ಕಿವೀಸ್ ಸರಣಿಗೆ ಆಯ್ಕೆಯಾಗಿದ್ದ ಕೆ ಎಸ್ ಭರತ್, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಲು ವಿಫಲರಾಗಿದ್ದಾರೆ.
India Tour of South Africa: ಭಾರತ ಸರಣಿಗೆ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡ ಪ್ರಕಟ..!
ಕೋವಿಡ್ ರೂಪಾಂತರಿಯಾದ ಒಮಿಕ್ರೋನ್ ಭೀತಿಯಿಂದಾಗಿ (Omicron Variant) ಡಿಸೆಂಬರ್ 17ರಿಂದ ಆರಂಭವಾಗಬೇಕಿದ್ದ ಟೆಸ್ಟ್ ಸರಣಿಯು ಒಂದು ವಾರ ತಡವಾಗಿ ಅಂದರೆ ಡಿಸೆಂಬರ್ 26ರಿಂದ ಪ್ರಾರಂಭವಾಗಲಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯವಾದ ಬಳಿಕ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.
Squad: Virat Kohli (Capt),Rohit Sharma(vc), KL Rahul, Mayank Agarwal, Cheteshwar Pujara, Ajinkya Rahane, Shreyas Iyer, Hanuma Vihari, Rishabh Pant(wk), Wriddhiman Saha(wk), R Ashwin, Jayant Yadav, Ishant Sharma, Mohd. Shami, Umesh Yadav, Jasprit Bumrah, Shardul Thakur, Md. Siraj. pic.twitter.com/6xSEwn9Rxb
— BCCI (@BCCI)ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಹೀಗಿದೆ ನೋಡಿ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಕೆ ಎಲ್ ರಾಹುಲ್, ಮಯಾಂಕ್ ಅಗರ್‌ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ವೃದ್ದಿಮಾನ್ ಸಾಹ(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.