
ಬೆಂಗಳೂರು: ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಹೈವೋಲ್ಟೇಜ್ ಟಿ20 ಸರಣಿಗೆ ಕ್ಷಣಗಣನೆ ಶುರುವಾಗಿದೆ. ಟೂರ್ನಿಗೆ ಆಫ್ಘಾನಿಸ್ತಾನವೇ ಆತಿಥ್ಯ ವಹಿಸಿದ್ದರೂ, ಈ ಮೂರು ಪಂದ್ಯಗಳು ಭಾರತದಲ್ಲಿಯೇ ನಡೆಯಲಿದೆ. ನವದೆಹಲಿಯ ಅರುಣ್ ಜೇಟ್ಲೀ ಮೈದಾನದಲ್ಲಿ ಸೆಪ್ಟೆಂಬರ್ 13, ಸೆ.15, ಸೆ.17ಕ್ಕೆ ಪಂದ್ಯಗಳು ನಡೆಯಲಿವೆ.
ಈ ಮೊದಲು ಭಾರತ ಹಾಗೂ ಆಫ್ಘಾನಿಸ್ತಾನ ತಂಡಗಳು ಒಂದು ಟೆಸ್ಟ್ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯನ್ನಾಡಿದ್ದವು. ಇದೀಗ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಆಯೋಜನೆಗೊಂಡಿದೆ. ಮುಂಬರುವ ಏಷ್ಯನ್ ಗೇಮ್ಸ್ ಟೂರ್ನಿಗೂ ಮುನ್ನ ಈ ಸರಣಿಯನ್ನು ವಾರ್ಮ್ ಅಪ್ ಮ್ಯಾಚ್ ಆಗಿ ಭಾರತ ಬಳಸಿಕೊಳ್ಳುವ ಸಾಧ್ಯತೆಯಿದೆ.
ಮೊದಲ ಟಿ20 ಪಂದ್ಯ: ಭಾನುವಾರ, 13 ಸೆಪ್ಟೆಂಬರ್ 2026
ಎರಡನೇ ಟಿ20 ಪಂದ್ಯ: ಮಂಗಳವಾರ, 15 ಸೆಪ್ಟೆಂಬರ್ 2026
ಮೂರನೇ ಟಿ20 ಪಂದ್ಯ: ಗುರುವಾರ, 17 ಸೆಪ್ಟೆಂಬರ್ 2026
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಸೆ.13ರಿಂದ ಅರಂಭವಾಗಲಿರುವ ಭಾರತ-ಅಪ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಟಿ.ವಿ. ನೇರ ಪ್ರಸಾರದ ಹಕ್ಕು ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ ಪಾಲಾಗಿದೆ. ಟೀಂ ಇಂಡಿಯಾವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಅಫ್ಘಾನಿಸ್ತಾನ ನಾಯಕತ್ವ ಜವಾಬ್ದಾರಿಯನ್ನು ಇಬ್ರಾಹಿಂ ಜದ್ರಾನ್ ವಹಿಸಿಕೊಂಡಿದ್ದಾರೆ.
ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ(ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ.
ಇಬ್ರಾಹಿಂ ಜದ್ರಾನ್(ನಾಯಕ), ರೆಹಮನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ನೂರ್ ರೆಹಮಾನ್(ವಿಕೆಟ್ ಕೀಪರ್), ಸೆದಿಕ್ಕುಲ್ಲಾ ಅಟಲ್, ಡೌರಿಶ್ ರಸೋಲಿ, ಅಜ್ಮತುಲ್ಲಾ ಓಮರ್‌ಝೈ, ಗುಲ್ಬದ್ದೀನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋಟಿ, ನೂರ್ ಅಹಮ್ಮದ್, ಮುಜೀಬ್ ಉರ್ ರೆಹಮಾನ್, ಫಝಲ್‌ಹಕ್ ಫಾರೂಕಿ, ಅಬ್ದುಲ್ಲಾ ಅಹಮದ್‌ಝೈ, ನವೀನ್ ಉಲ್ ಹಕ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.