
ಕ್ಯಾನ್‌ಬೆರ್ರಾ(ಡಿ.04): ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯವನ್ನು ಕೊನೆಗೂ ಟೀಂ ಇಂಡಿಯಾ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಯುಜುವೇಂದ್ರ ಚಹಲ್ ಹಾಗೂ ಟಿ. ನಟರಾಜನ್ ಆಕ್ರಮಣಕಾರಿ ದಾಳಿಗೆ ತತ್ತರಿಸಿ ಹೋದ ಆಸ್ಟ್ರೇಲಿಯಾ 11 ರನ್‌ಗಳಿಂದ ಭಾರತಕ್ಕೆ ಶರಣಾಗಿದೆ. ಈ ಗೆಲುವಿನೊಂದಿಗೆ ಭಾರತ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.
ಭಾರತ ನೀಡಿದ್ದ 162 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಫಿಂಚ್-ಶಾರ್ಟ್ ಜೋಡಿ 56 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟರು. ಫಿಂಚ್ 26 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಪಂದ್ಯದ ಗತಿ ಬದಲಿಸಿದ ಗೇಮ್ ಚೇಂಜರ್ ಚಹಲ್: ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುವ ವೇಳೆ ತಲೆಗೆ ಚೆಂಡು ಬಡಿದಿದ್ದರಿಂದ ಸಬ್‌ಸ್ಟಿಟ್ಯೂಟ್ ಆಟಗಾರನಾಗಿ ಯುಜುವೇಂದ್ರ ಚಹಲ್ ಬೌಲಿಂಗ್ ಮಾಡುವ ಅವಕಾಶ ಪಡೆದರು. ಈ ಅವಕಾಶ ಬಳಸಿಕೊಂಡ ಚಹಲ್ ಭಾರತ ತಂಡಕ್ಕೆ ಕಂಟಕವಾಗಿ ಪರಿಣಮಿಸಿದ್ದ, ಫಿಂಚ್, ಸ್ಟೀವ್ ಸ್ಮಿತ್ ಹಾಗೂ ಮ್ಯಾಥ್ಯೂ ವೇಡ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.
ಆಸೀಸ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಂ ಇಂಡಿಯಾ
ಇನ್ನು ಮತ್ತೊಂದೆಡೆ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಯಾರ್ಕರ್ ಸ್ಪೆಷಲಿಸ್ಟ್ ಟಿ. ನಟರಾಜನ್ 30 ರನ್ ನೀಡಿ ಮ್ಯಾಕ್ಸ್‌ವೆಲ್ ಸೇರಿದಂತೆ ಮಹತ್ವದ ಮೂರು ವಿಕೆಟ್ ಪಡೆಯುವ ಮೂಲಕ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
ಇದಕ್ಕೂ ಮೊದಲು ಕನ್ನಡಿಗ ಕೆ.ಎಲ್. ರಾಹುಲ್(51) ಹಾಗೂ ಕೊನೆಯಲ್ಲಿ ರವೀಂದ್ರ ಜಡೇಜಾ ಬಾರಿಸಿದ ಉಪಯುಕ್ತ 44 ರನ್ ಪಂದ್ಯದ ದಿಕ್ಕನ್ನೇ ಬದಲಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.